PM Kisan Samman scheme : ರೈತರೇ ಈ ದಿನ ನಿಮ್ಮ ಕೈ ಸೇರಲಿದೆ PM ಕಿಸಾನ್ 15ನೇ ಕಂತಿನ ಹಣ – ಅರ್ಜಿ ಹಾಕೋದು ಹೇಗೆ?

Agriculture news pm Kisan Samman Nidhi scheme money update farmers get 15th installment on this date

PM Kisan Samman scheme: ಕೇಂದ್ರ ಸರ್ಕಾರವು ರೈತರಿಗಾಗಿ ಜಾರಿಗೊಳಿಸಿರುವಂತ ಪ್ರಮುಖ ಯೋಜನೆಗಳಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ(PM Kisan Samman scheme) ಕೂಡ ಒಂದು. ಈ ಯೋಜನೆಯ ಅಡಿಯಲ್ಲಿ ಕೊಡಮಾಡುವ ಹಣದಲ್ಲಿ ಈಗಾಗಲೇ 14 ಕಂತುಗಳನ್ನು ಬಿಡುಗಡೆ ಮಾಡಲಾಗಿದ್ದು ಅದು ರೈತರ ಖಾತೆ ಸೇರಿದೆ. ಇನ್ನೀಗ 15 ಕಂತಿನ ಹಣದ ಬಿಡುಗಡೆ ಸರ್ಕಾರವು ತಯಾರಿ ನಡೆಸುತ್ತಿದ್ದು ಕೆಲವೇ ದಿನಗಳಲ್ಲಿ ಅದೂ ಕೂಡ ರೈತರ ಕೈ ಸೇರಲಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆ 14ನೇ ಕಂತಿನ ಹಣವನ್ನು ಕೇಂದ್ರ 2023ರ ಜುಲೈ 27ರಂದು ಬಿಡುಗಡೆ ಮಾಡಿತ್ತು. ಇದಾದ ಬಳಿಕ 15ನೇ ಕಂತಿನ ಹಣಕ್ಕಾಗಿ ಲಕ್ಷಾಂತರ ರೈತರು ಕಾಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಶುಭ ಸುದ್ದಿಯೊಂದು ಇದೆ. 15ನೇ ಕಂತಿನ ಹಣವನ್ನು ನವೆಂಬರ್ ಹಾಗೂ ಡಿಸೆಂಬರ್ ತಿಂಗಳ ನಡುವೆ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಆದರೆ, ಈ ಬಗ್ಗೆ ಕೇಂದ್ರ ಸರ್ಕಾರ ಈ ತನಕ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಏನಿದು ಪಿಎಂ ಕಿಸಾನ್ ಸಮ್ಮಾನ್ ಯೋಜನೆ?
2019ರ ಫೆಬ್ರವರಿ 24ರಂದು ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯಡಿಯಲ್ಲಿ ಅರ್ಹ ರೈತರು ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂ.ನಂತೆ ವಾರ್ಷಿಕ ಒಟ್ಟು 6000 ರೂ.ಪಡೆಯುತ್ತಾರೆ. ಕೇಂದ್ರ ಸರ್ಕಾರವು ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಖರೀದಿ ಸೇರಿದಂತೆ ಆರ್ಥಿಕವಾಗಿ ನೆರವಾಗುವ ದೃಷ್ಟಿಯಿಂದ 2019ರಲ್ಲಿ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು ಜಾರಿಗೆ ತಂದಿತ್ತು. ಈ ಯೋಜನೆಯಡಿ 11 ಕೋಟಿ ರೈತರಿಗೆ ಒಟ್ಟು 2.59 ಲಕ್ಷ ಕೋಟಿ ರೂ.ಗೂ ಅಧಿಕ ಹಣವನ್ನು ನೀಡಲಾಗಿದೆ.

ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಸೇರ್ಪಡೆಗೊಳ್ಳೋದು ಹೇಗೆ?
– ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಅಧಿಕೃತ ವೆಬ್ ಸೈಟ್ www.pmkisan.gov.in. ಭೇಟಿ ನೀಡಿ.
-ಮುಖಪುಟದಲ್ಲಿ ಕಾಣಿಸೋ ‘Farmers Corner’ಎಂಬ ಆಯ್ಕೆ ಮೇಲೆ ಕ್ಲಿಕಿಸಿ.
-ಈಗ ‘New Farmer Registration’ಮೇಲೆ ಕ್ಲಿಕ್ ಮಾಡಿ.
-ಈಗ ನೋಂದಣಿ ಅರ್ಜಿ ತೆರೆದುಕೊಳ್ಳುತ್ತದೆ. ಇದ್ರಲ್ಲಿ ಕೇಳಿರೋ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ.

ಇದನ್ನೂ ಓದಿ :Pramod mutalik: ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಕರ್ನಾಟಕದಿಂದ ಗಡಿಪಾರು ? – ಏನಿದು ಶಾಕಿಂಗ್ ನ್ಯೂಸ್?!

Leave A Reply

Your email address will not be published.