Bigg Boss Kannada Season 10: ಬಿಗ್ ಬಾಸ್ ಮೊದಲ ಸ್ಪರ್ಧಿ ನಟನೂ ಅಲ್ಲ, ನಟಿಯೂ ಅಲ್ಲ- ಅಷ್ಟೇ ಏಕೆ ಅವರು ವ್ಯಕ್ತಿಯೇ ಅಲ್ಲ !! ಹಾಗಿದ್ರೆ ಮತ್ಯಾರು ?

Bigg Boss Kannada Season 10: ಕಲರ್ಸ್ ಕನ್ನಡ (colors kannada) ವಾಹಿನಿ ಮನರಂಜನೆಯ ರಸದೌತಣ ಬಡಿಸುವ ಕಾರ್ಯಕ್ರಮಗಳ ಮೂಲಕ ಜನಮಾನಸದಲ್ಲಿ ವಿಶೇಷ ಸ್ಥಾನ ಪಡೆದಿದೆ. ಕರ್ನಾಟಕದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 (Bigg Boss Kannada season 10) ಕಾರ್ಯಕ್ರಮ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಮೂಲಕ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಲು ಬಿಗ್ ಬಾಸ್ (biggboss) ತಂಡ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಇತ್ತೀಚೆಗೆ ಕಾರ್ಯಕ್ರಮದ ತಯಾರಕರು ಸೀಸನ್ 10 ರ ಮೊದಲ ಪ್ರೋಮೋವನ್ನು ಬಿಡುಗಡೆ ಮಾಡಲಾಗಿದೆ. ಬಿಗ್ ಬಾಸ್ 10 ಈಗಾಗಲೇ ಇದರ ಭರ್ಜರಿ ಟೀಸರ್ ಜೊತೆಗೆ ಎಂಟ್ರಿ ಕೊಡಲು ಸಜ್ಜಾಗಿದ್ದು, ಹೀಗಾಗಿ, ಈ ಬಾರಿ ಏನೆಲ್ಲ ವಿಶೇಷತೆ ಇರಲಿದೆ ಅಲ್ಲದೇ ದೊಡ್ಮನೆ ಆಟಕ್ಕೆ ಯಾರೆಲ್ಲ ಭಾಗವಹಿಸಲಿದ್ದಾರೆ ಎಂಬ ಕುತೂಹಲ ಮನೆ ಮಾಡಿದೆ. ಕನ್ನಡಿಗರೂ ಕಾರ್ಯಕ್ರಮದ ಆರಂಭದ ನಿರೀಕ್ಷೆಯಲ್ಲಿದ್ದಾರೆ. ಈ ಕುರಿತ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಅಕ್ಟೋಬರ್ 8ರಿಂದ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ​ಬಾಸ್ ಸೀಸನ್ 10 ಪ್ರಾರಂಭವಾಗುತ್ತಿದೆ. ಅಂದಹಾಗೆ ಈ ಬಾರಿ ಬಿಗ್ ಬಾಸ್ ಗೆ ಸ್ಪೆಷಲ್ ಗೆಸ್ಟ್ ಬರ್ತಾ ಇದಾರೆ. ಯಾರಪ್ಪಾ ಆ ಗೆಸ್ಟ್ ಅಂತ ಯೋಚನೆನಾ? ಇದು ನಟ, ನಟಿ ಯಾರೂ ಅಲ್ಲಾ..!! ಮತ್ಯಾರು?! ಈ ಬಾರಿಯ ಬಿಗ್ ​ಬಾಸ್​ ಮನೆಗೆ ಕಲ್ಮಶ ರಹಿತ ಅಭಿನಯ ಮತ್ತು ಎಲ್ಲರ ಮನಗೆದ್ದ 777 ಚಾರ್ಲಿ ಸಿನಿಮಾದ (777 charile movie) ‘ಚಾರ್ಲಿ’ ಎಂಟ್ರಿ ಕೊಡ್ತಿದೆ.

 

ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಮಾಹಿತಿ ನೀಡಿದೆ. ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. “ಬೆಸ್ಟ್ ರೇಟೆಡ್ ಚಲನಚಿತ್ರ 777 ಚಾರ್ಲಿ ಸಿನಿಮಾದ ‘ಚಾರ್ಲಿ’ ಈ ಬಾರಿಯ ಬಿಗ್ ಬಾಸ್ ಸೀಸನ್ 10ರ ಮೊದಲ ಕಂಟೆಸ್ಟೆಂಟ್ ಆಗಿ ಎಂಟ್ರಿ ಕೊಡ್ತಿದ್ದಾರೆ. ಅಭಿನಂದನೆಗಳು ಚಾರ್ಲಿ” ಎಂದು ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದೆ.

https://www.instagram.com/p/CxinmleBRxk/?igshid=MzRlODBiNWFlZA==

Leave A Reply

Your email address will not be published.