Putturu: ಪುತ್ತೂರಿನ ಕಾಲೇಜ್‌ ವಿದ್ಯಾರ್ಥಿನಿ ಆತ್ಮಹತ್ಯೆ!

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ. ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಸನ್ನಿಧಿ ಲೇಔಟ್‌ನಲ್ಲಿ ನಡೆದಿದೆ.

ತೃತೀಯ ಬಿಸಿಎ ಓದುತ್ತಿದ್ದ ಕೀರ್ತಿಕಾ (19) ವಿವೇಕಾನಂದ ಕಾಲೇಜಿನಲ್ಲಿ ಕಲಿಯುತ್ತಿದ್ದಳು.

ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆ ಛಾವಣಿಗೆ ಬೆಡ್‌ಶೀಟ್‌ ಉರುಳು ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

Leave A Reply

Your email address will not be published.