ಕಡಬ : ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಬಿದ್ದು ಓರ್ವ ಮೃತ್ಯು, ಇನ್ನೊಬ್ಬರಿಗೆ ಗಾಯ

Share the Article

 

ಕಡಬ : ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿಯೊರ್ವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟು, ಇನ್ನೋರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ರವಿವಾರ ಸಂಜೆ ಕಡಬದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಕಳಾರ ಸಮೀಪದ ಕುದ್ರೋಳಿ ನಿವಾಸಿ ಅಚ್ಚುತ್ತ ಗೌಡ (63) ಎಂದು ಗುರುತಿಸಲಾಗಿದೆ.

ಮೃತರು ರವಿವಾರ ಸಂಜೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಹೊರಟಿದ್ದ ವೇಳೆ ತಾಲೂಕು ಕಛೇರಿಯ ಸಮೀಪದ ತಿರುವಿನಲ್ಲಿ ಅಚ್ಚುತ್ತ ಗೌಡ ಹಾಗೂ ಬಲ್ಯ ನಿವಾಸಿ ಚಂದ್ರಶೇಖರ ಎಂಬವರು ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟಿದ್ದಾರೆ.

ಗಂಭೀರ ಗಾಯಗೊಂಡ ಅಚ್ಚುತ್ ಗೌಡರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಚಂದ್ರಶೇಖರ ಎಂಬವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply