Pramod mutalik: ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಕರ್ನಾಟಕದಿಂದ ಗಡಿಪಾರು ? – ಏನಿದು ಶಾಕಿಂಗ್ ನ್ಯೂಸ್?!

National news allegations of inflammatory statement Muslim leaders complaint against for Pramod muthalik deportation

Pramod muthalik deportation: ಹಿಂದೂ ಸಂಘಟನೆಗಳ ನಾಯಕ, ಶ್ರೀರಾಮ ಸೇನೆಯ ಸಂಸ್ಥಾಪಕ, ಭಾಷಣಗಳ ಪೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್(Pramod mutalik) ಅವರ ಅಬ್ಬರದ ಭಾಷಣಗಳ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಅದು ಅವರಿಗೆ ಕಂಟಕ ಆದದ್ದೂ ಉಂಟು, ಖ್ಯಾತಿ ತಂದದ್ದೂ ಉಂಟು. ಅಂತೆಯೇ ಇದೀಗ ಮತ್ತೊಮ್ಮೆ ಮುತಾಲಿಕ್ ಅವರ ಭಾಷಣ ಅವರಿಗೇ ಸಂಚಕಾರ ತಂದೊಡ್ಡಿದ್ದು, ಕರ್ನಾಟಕದಿಂದ ಗಡಿಪಾರು ಮಾಡಬೇಕೆಂಬ ಆಗ್ರಹ ಕೇಳಿಬರುತ್ತಿವೆ.

ಹೌದು, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧ ಅನ್ಯ ಧರ್ಮಗಳ ಭಾವನೆಗಳಿಗೆ ಆಘಾತವನ್ನುಂಟು ಮಾಡುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪ ಕೇಳಿಬಂದಿದ್ದು ಪೊಲೀಸ್‌ ಆಯುಕ್ತರಿಗೆ ಮುಸ್ಲಿಂ ಮುಖಂಡರು ದೂರು ಸಲ್ಲಿಸಿದ್ದರು. ಈ ಬೆನ್ನಲ್ಲೇ ಅಲ್ಲಿನ ಸ್ಥಳೀಯ ಶಾಸಕರಾದ ಪ್ರಸಾದ ಅಬ್ಬಯ್ಯ ಅವರು ಮುತಾಲಿಕ್ ಅವರನ್ನು ಕರ್ನಾಟಕದಿಂದಲೇ ಗಡಿಪಾರು(Pramod muthalik deportation) ಮಾಡಬೇಕೆಂದು ಆಗ್ರಹಿಸಿದ್ದಾರೆ.

ಅಂದಹಾಗೆ ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದ ಗಣೇಶ ವಿಸರ್ಜನೆಗೆ ಪ್ರಮೋದ್ ಮುತಾಲಿಕ್​​ ಮೈದಾನಕ್ಕೆ ಭೇಟಿ ನೀಡಿ, ಗಣೇಶ ದರ್ಶನ ಪಡೆದುಕೊಂಡಿದ್ದರು. ಈ ವೇಳೆ ಮಾತನಾಡಿದ್ದ ಅವರು ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿರೋಧಿಸುವವರು ದೇಶದ್ರೋಹಿಗಳು. ಅಂಜುಮನ್ ಸಂಸ್ಥೆಯವರ ದುರದ್ದೇಶ ಏನೆಂದು ಈಗ ಎಲ್ಲರಿಗೂ ಗೊತ್ತಾಗಿದೆ. ಇವರು ದೇಶ ವಿಭಜನೆ ಮಾಡಿದ ದ್ರೋಹಿಗಳು. ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದೂ ಸಮಾಜಕ್ಕಿದೆ.ನಿಮ್ಮ ನಮಾಜ್‌ಗೂ ನಾವು ಅಡ್ಡಿಪಡಿಸಬೇಕಾಗುತ್ತದೆ. ರಾಣಿ ಚೆನ್ನಮ್ಮ ಮೈದಾನದಲ್ಲಿ ನಮಾಜ್‌ಗೆ ಅವಕಾಶ ಕೊಡದಂತೆ ಕೋರ್ಟ್‌ಗೆ ಹೋಗುತ್ತೇವೆ. ಇದು ಪಾಕಿಸ್ತಾನವಲ್ಲ, ನಿಮ್ಮಪ್ಪನ ಆಸ್ತಿಯಲ್ಲ, ವಿರೋಧಿಗಳ ಸೊಕ್ಕಡಗಿಸುವ ತಾಕತ್ತು ನಮಗಿದೆ ಎಂದು ವಾಗ್ದಾಳಿ ನಡೆಸಿದ್ದರು. ಹೀಗಾಗಿ ಸಮಾಜದಲ್ಲಿ ಇಂತಹ ಶಾಂತಿ ಕದಡುವ ಹೇಳಿಕೆಗಳು ಸರಿಯಲ್ಲ. ಯಾವ ಧರ್ಮದವರು ಈ ರೀತಿ ಹೇಳಿಕೆ ನೀಡಬಾರದು ಎಂದು ಪೋಲೀಸರಿಗೆ ದೂರು ನೀಡಿದರು.

ಇನ್ನು ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆ ಅಷ್ಫಾಕ್ ಕುಮಟಾಕರ ಮಾತನಾಡಿ, ಗುರುವಾರ ಈದ್ಗಾ ಮೈದಾನದಲ್ಲಿ ಇರಿಸಲಾಗಿದ್ದ ಗಣೇಶ ಮೂರ್ತಿ ವಿಸರ್ಜನಾ ಪೂರ್ವದಲ್ಲಿ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್‌(Pramod muthalik) ಮಸೀದಿಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುತ್ತೇವೆ ಎಂಬ ಹೇಳಿಕೆ ನೀಡುವ ಮೂಲಕ ನಗರದಲ್ಲಿ ಕೋಮು ಗಲಭೆಗೆ ಪ್ರಚೋಧನೆ ನೀಡಿ ಶಾಂತಿ ಕದಡುವ ಯತ್ನ ಮಾಡಿದ್ದಾರೆ. ಈ ರೀತಿಯಾಗಿ ಹೇಳಿಕೆ ನೀಡುವುದರಿಂದ ಅನ್ಯ ಸಮಾಜದವರ ಭಾವನೆಗಳಿಗೆ ಧಕ್ಕೆ ಆಗಲಿದೆ ಎಂಬ ಅರಿವು ಇವರಿಗಿಲ್ಲ. ಇಂಥವರ ಮೇಲೆ ಪೊಲೀಸ್‌ ಆಯುಕ್ತರು ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಜಿಲ್ಲೆಯಿಂದ ಗಡಿಪಾರು ಮಾಡಿ ನಗರದಲ್ಲಿ ಶಾಂತಿ ನೆಲೆಸಲು ಅನುವು ಮಾಡುವಂತೆ ಒತ್ತಾಯಿಸಿದರು.

ಅಲ್ಲದೆ ಮುಂದಿನ ದಿನಗಳಲ್ಲಿ ಮಸೀದಿಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ಹೇಳಿಕೆ ನೀಡಿರುವುದು ಖಂಡನೀಯ. ಕೂಡಲೇ ಅವರನ್ನು ಕರ್ನಾಟಕದಿಂದಲೇ ಗಡಿಪಾರು ಮಾಡಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಸೌಹಾರ್ದ ಕದಡುವ ಹೇಳಿಕೆ ನೀಡುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಪತ್ನಿ ಲವ್ವರ್ ತಲೆ ಕಡಿದು ಪತ್ನಿಯ ಮನೆಯ ಮುಂದೆ ತಂದು ನಿಲ್ಲಿಸಿದ ಪತಿ !! ನಂತರ ಆದದ್ದು….?!

Leave A Reply

Your email address will not be published.