H D Kumarswamy: ಬಿಜೆಪಿ ಕೂಟ ಸೇರಿದ ಬೆನ್ನಲ್ಲೇ ಅಮಿತ್ ಶಾಗೆ ಖಡಕ್ ಸೂಚನೆ ಕೊಟ್ಟ ಎಚ್ ಡಿ ಕುಮಾರಸ್ವಾಮಿ

Political news H D Kumaraswamy appeals to Amit Shah fix state BJP leadership

H D Kumarswamy: ದೇಶ ರಾಜಕಾರಣದಲ್ಲಿ ಬಾರಿ ಕುತೂಹಲ ಕೆರಳಿಸಿದಂತಹ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ(BJP-JDS alliance) ವಿಚಾರ ಇದೀಗ ಕೊನೆಗೂ ತಾರ್ಕಿಕ ಅಂತ್ಯ ಕಂಡಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿರುವ ಕಾಂಗ್ರೆಸ್‌ ಸೋಲಿಸಲು ಬಿಜೆಪಿ ನೇತೃತ್ವದ ಎನ್‌ಡಿಎ (NDA) ಒಕ್ಕೂಟಕ್ಕೆ ಜೆಡಿಎಸ್‌ (JDS) ಅಧಿಕೃತವಾಗಿ ಸೇರ್ಪಡೆಯಾಗ್ದು ಮೈತ್ರಿ ಮುದ್ರೆ ಒತ್ತಿದೆ. ಆದರೆ ಈ ಬೆನ್ನಲ್ಲೇ ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಅಮಿತ್ ಶಾ( H D Kumarswamy) ಅವರಿಗೆ ಖಡಕ್ ಸೂಚನೆಯೊಂದನ್ನು ನೀಡಿದ್ದಾರೆ.

ಹೌದು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಇಂದು ದೆಹಲಿಯಲ್ಲಿ ಅಮಿತ್ ಶಾ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ಮಹತ್ವದ ಸಭೆ ನಡೆಸಿದ್ದಾರೆ. ಈ ವೇಳೆ ಮೈತ್ರಿ ಕುರಿತು ಮಹತ್ವದ ಮಾತುಕತೆ ನಡೆದಿದ್ದು, ಎರಡೂ ಪಕ್ಷಗಳ ನಾಯಕರು ಮೈತ್ರಿಯನ್ನು ಖಾತ್ರಿಪಡಿಸಿದ್ದು, ದೋಸ್ತಿಗೆ ಅಧಿಕೃತ ಮುದ್ರೆ ಒತ್ತಿದ್ದಾರೆ. ಇನ್ನು ಈ ಬೆನ್ನಲ್ಲೇ ರಾಜ್ಯದಲ್ಲಿನ ಬಿಜೆಪಿ ನಾಯಕತ್ವ ಸರಿಪಡಿಸಿ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಿಜೆಪಿ ವರಿಷ್ಠರಿಗೆ ಮನವಿ ಚೂನೆ ನೀಡಿದ್ದಾರೆ ಎನ್ನಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡಿರುವ ರಾಜ್ಯ ಬಿಜೆಪಿಯಲ್ಲಿ ಸಮರ್ಥವಾದ ನಾಯಕ ಎಂದು ಯಾರನ್ನೂ ಕರೆಯಲಾಗುತ್ತಿಲ್ಲ. ಹೀಗಾಗಿ ಉತ್ತಮವಾದ ನಾಯಕರು, ಸಮರ್ಥ ನಾಯಕನಿಲ್ಲದೆ ಬಿಜೆಪಿಯು ಸೊರಗುತ್ತಾ ಬಂದಿದೆ. ಜೊತೆಗೆ ಒಳ ಭಿನ್ನಾಭಿಪ್ರಾಯ, ಒಳ ಜಗಳ, ಮನಬಂದಂತೆ ಹೇಳಿಕೆ ಕೊಡುವುದು, ಆರೋಪ ಪ್ರತ್ಯಾರೋಪಗಳನ್ನು ಮಾಡುವುದು ಜನರಲ್ಲಿ ಬಿಜೆಪಿ ಮೇಲಿನ ವಿಶ್ವಾಸ ಕಡಿಮೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಸಮಾಲೋಚನೆ ನಡೆಸುವ ವೇಳೆ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿಯ ಸಂಘಟನೆ ಬಗ್ಗೆಯೂ ಪ್ರಸ್ತಾಪಿಸಿ ಇಲ್ಲಿನ ನಾಯಕತ್ವವನ್ನು ಸರಿಪಡಿಸಿ, ಇದರೊಳಗಿರುವ ಮೂರು ಬಣಗಳನ್ನು ಒಡೆದುಹಾಕಿ ಸರಿಯಾದ ದಾರಿಗೆ ತನ್ನಿ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಂದಾಗುವ ರೀತಿ ಕಾರ್ಯಕ್ರಮಗಳು ರೂಪಿಸಬೇಕು. ಇಲ್ಲದಿದ್ದರೆ ಮೈತ್ರಿ ಕೇವಲ ಹೆಸರಿಗೆ ಮಾತ್ರ ಎಂಬಂತಾಗುತ್ತದೆ. ಈ ಮೈತ್ರಿ ದೀರ್ಘಕಾಲೀನವಾಗಿರಬೇಕು ಎಂದರೆ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಹೊಂದಾಣಿಕೆ ಮೂಡಬೇಕು ಎಂಬ ಅನಿಸಿಕೆಯನ್ನೂ ಹೊರಹಾಕಿದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: PM Kisan Samman scheme: ರೈತರೇ ಈ ದಿನ ನಿಮ್ಮ ಕೈ ಸೇರಲಿದೆ PM ಕಿಸಾನ್ 15ನೇ ಕಂತಿನ ಹಣ – ಅರ್ಜಿ ಹಾಕೋದು ಹೇಗೆ?

Leave A Reply

Your email address will not be published.