Kolara: ಕೋಲಾರ ಜನತಾದರ್ಶನದಲ್ಲಿ ಗೂಂಡಾವರ್ತನೆ – ಬೋ.. ಮಗನೆ ಎನ್ನುತ್ತಾ ವೇದಿಕೆಯಲ್ಲೇ ಕೈ-ಕೈ ಮಿಲಾಯಿಸಿದ ಸಂಸದ-ಶಾಸಕ !
In Kolar Janatadarshan, the MLA-MP lashed out singularly
Kolara: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನಪರವಾದಂತಹ ಹಲವಾರು ಯೋಜನೆಗಳನ್ನು, ಜನರಿಗೆ ಉಪಯುಕ್ತವಾಗುವಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಅಂತೆಯೇ ಇಂದು ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯಾದ್ಯಂತ ಏಕ ಕಾಲಕ್ಕೆ ಜನತಾ ದರ್ಶನಕ್ಕೆ (Janata Darshan) ಕಾಂಗ್ರೆಸ್ ಸರ್ಕಾರ ಚಾಲನೆ ನೀಡಿದೆ.
ಮುಖ್ಯಮಂತ್ರಿಗಳ(CM) ಸೂಚನೆ ಮೇರೆಗೆ ನಡೆಯಲಿರುವ ಈ ಅರ್ಥಪೂರ್ಣ ಕಾರ್ಯಕ್ರಮದ ಹೊಣೆಗಾರಿಕೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಕಾಳಜಿ ಈ ಜನತಾ ದರ್ಶನದ ಹಿಂದಿದೆ.
ಈ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂತೆಯೇ ಕೋಲಾರದಲ್ಲೂ(Kolara) ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಡುವೆ ಕಾರ್ಯಕ್ರಮ ಆರಂಭವಾದ ನಂತರ ಸಂಸದ ಮುನಿಸ್ವಾಮಿ ಕಾರ್ಯಕ್ರಮಕ್ಕೆ ಆಗಮಿಸಿದರು. ಕಾರ್ಯಕ್ರಮದಲ್ಲಿ ಕೆಲಕಾಲ ಇದ್ದು ವಾಪಸ್ ಹೋಗುವ ಸಂದರ್ಭದಲ್ಲಿ ಸಂಸದ ಮುನಿಸ್ವಾಮಿ ಸಚಿವ ಭೈರತಿ ಸುರೇಶ್ ಪಕ್ಕದಲ್ಲಿ ಕುಳಿತಿದ್ದ ಬಂಗಾರಪೇಟೆ ಶಾಸಕ ಎಸ್‌ಎನ್ ನಾರಾಯಣಸ್ವಾಮಿ ಅವರನ್ನು ನೋಡಿಕೊಂಡು ಎಲ್ಲಾ ಭೂಗಳ್ಳರನ್ನು ಅಕ್ಕಪಕ್ಕ ಕುಳಿಸಿಕೊಂಡು ಜನತಾ ದರ್ಶನ ಮಾಡ್ತಾ ಇದ್ದಾರೆ ಎಂದರು. ಈ ವೇಳೆ ಕ್ಷಣಾರ್ಧದಲ್ಲಿ ಆಕ್ರೋಶಗೊಂಡ ಎಸ್‌ಎನ್ ನಾರಾಯಣಸ್ವಾಮಿ ಸಂಸದರಿಗೆ ಏಕವಚನದಲ್ಲಿ ಬೈಯಲು ಶುರು ಮಾಡಿಕೊಂಡರು.
ಉಸ್ತುವಾರಿ ಸಚಿವ ಬೈರತಿ ಸುರೇಶ್ ಮುಂದೆ ಪರಸ್ಪರ ಏಕವಚನದಲ್ಲಿ ವಾಗ್ದಾಳಿ ಮಾಡಿಕೊಂಡ ಕೋಲಾರ ಸಂಸದ ಮುನಿಸ್ವಾಮಿ ಹಾಗೂ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದಾರೆ. ಪರಸ್ಪರ ಏಕವಚನದಲ್ಲಿ ವಾಗ್ದಾಳಿ ಮಾಡಿಕೊಂಡ ಇವರು, ಬೋಳಿಮಗನೆ, ಅಪ್ಪನಿಗೆ ಹುಟ್ಟಿದ್ರೆ ಸಾಬೀತು ಮಾಡು ಎಂದು ವೇದಿಕೆ ಮೇಲೆಯೇ ಏಕವಚನದಲ್ಲಿ ನಿಂದಿಸಿಕೊಂಡರು. ಈ ವಿಚಾರವಾಗಿ ಪಕ್ಕದಲ್ಲೇ ಕುಳಿತಿದ್ದ ನಾರಾಯಣಸ್ವಾಮಿ ಕೂಗಾಟ ಮಾಡಿದ್ದಾರೆ. ಕೈ ಕೈ ಮಿಲಾಯಿಸುವ ಹಂತಕ್ಕೆ ಬಂದ ಜನಪ್ರತಿನಿಧಿಗಳನ್ನು ಪೊಲೀಸರು ಹಾಗೂ ಬೆಂಗಾವಲು ಸಿಬ್ಬಂದಿ ತಡೆದು ಗಲಾಟೆ ಅತಿರೇಕಕ್ಕೆ ಹೋಗುವುದನ್ನು ತಡೆದಿದ್ದಾರೆ.
ಇನ್ನು ಜಿಲ್ಲಾಮಟ್ಟದ ಜನತಾದರ್ಶನ ಕಾರ್ಯಕ್ರಮಕ್ಕೆ ಬಂದ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಜನಪ್ರತಿನಿಧಿಗಳ ಗೂಂಡಾ ವರ್ತನೆಯನ್ನು ನೋಡಿ ಕಿಡಿಕಾರಿದ್ದಾರೆ. ಇನ್ನು ಕೆಲವು ಸಾರ್ವಜನಿಕರು ಪುಕ್ಕಟೆಯಾಗಿ ಮನರಂಜನೆ ಸಿಗುತ್ತಿದೆ ಎಂದು ಮಾತನಾಡಿಕೊಂಡಿದ್ದಾರೆ. ಏನೇ ಆಗಲಿ ಒಂದು ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ಜನರೇ ಆರಿಸಿ ಕರಿಳಿದ ಸಂಸದರು ಹಾಗೂ ಶಾಸಕರು ಈ ರೀತಿಯ ವರ್ತನೆ ನಿಜಕ್ಕೂ ಕೂಡ ಕೋಲಾರದ ಜನತೆಗೆ ಮುಜುಗರ ತರುವಂತೆ ಮಾಡಿದೆ.