ಲಿಂಗ ಬದಲಾಣೆಗೆ ಅನುಮತಿ ಕೋರಿ ಪತ್ರ ಬರೆದ ಇಬ್ಬರು ಮಹಿಳಾ ಕಾನ್ಸ್ ಟೇಬಲ್ಸ್ – ಅಷ್ಟಕ್ಕೂ ಪತ್ರ ಬರೆದಿದ್ಯಾರಿಗೆ ಗೊತ್ತಾ? ವಿಚಾರ ತಿಳಿದು ಪೋಲೀಸ್ ಅಧಿಕಾರಿಗಳೇ ಶಾಕ್

uttara pradesh news woman cops pemission for changes physical surgery

woman Constable: ಉತ್ತರಪ್ರದೇಶದ(Uttar Pradesh)ಗೋರಖ್‌ಪುರ ಮತ್ತು ಗೊಂಡಾದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾದ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳು(Woman Constable)ಶಸ್ತ್ರಚಿಕಿತ್ಸೆಯ ಮೂಲಕ ಲಿಂಗ ಬದಲಾವಣೆಗಾಗಿ ಅನುಮತಿ ನೀಡುವಂತೆ ಕೋರಿ ಡಿಜಿಪಿ(DGP)ಕಚೇರಿಗೆ ಪತ್ರ ಬರೆದಿದ್ದು, ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಗಳಿಗೆ ಈ ಸಮಸ್ಯೆ ಬಗೆಹರಿಸುವುದು ಹೇಗೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ.

 

ಈ ಜನವರಿಯಿಂದ ಪ್ರಕರಣ ನಡೆಯುತ್ತಿದ್ದು, ಲಿಂಗ ಬದಲಾವಣೆಗೆ ಅನುಮತಿ ಪಡೆಯಲು ಸಾಧ್ಯವಾಗದೆ ಹೋದಾಗ ಒಬ್ಬರು ಕಾನ್ಸ್ ಟೇಬಲ್ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಡಿಜಿಪಿ ಕಚೇರಿ ಅಲಹಾಬಾದ್ ಕೋರ್ಟ್ ನಲ್ಲಿ ಉತ್ತರ ನೀಡಿದ್ದು, ಮೆರಿಟ್ ಆಧಾರದಡಿ ಮಹಿಳಾ ಕಾನ್ಸ್ ಟೇಬಲ್ ಗಳ ಕೋರಿಕೆಯನ್ನು ಮತ್ತೊಮ್ಮೆ ಮರುಪರಿಶೀಲನೆ ಮಾಡುವಂತೆ ಕೋರ್ಟ್ ಪೊಲೀಸ್ ಪ್ರಧಾನ ಕಚೇರಿಗೆ ಸೂಚನೆ ನೀಡಿದೆ. ಇದರ ಜೊತೆಗೆ, ಭವಿಷ್ಯದಲ್ಲಿ ಮುಂದೆ ಎದುರಾಗುವ ಈ ಪ್ರಕರಣಗಳಿಗೆ ಕೆಲವು ಮಾನದಂಡ ತಯಾರಿಸುವಂತೆ ಸೂಚನೆ ನೀಡಿದೆ.

ಉತ್ತರ ಪ್ರದೇಶ ಗೋರಖ್‌ಪುರ ಮತ್ತು ಗೊಂಡಾದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳು ಲಿಂಗ ಬದಲಾವಣೆ ಪ್ರಕ್ರಿಯೆಗೆ ಅನುಮತಿ ಕೋರಿ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿ) ಪತ್ರ ಬರೆದಿದ್ದು, ಈ ಬಗ್ಗೆ ಯುಪಿ ಪೊಲೀಸ್ ಇಲಾಖೆ ಹೆಚ್ಚುವರಿ ಡೈರೆಕ್ಟರ್ ಜನರಲ್ ಶ್ರೇಣಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ.

ಇಬ್ಬರು ಮಹಿಳಾ ಕಾನ್ಸ್ ಟೇಬಲ್ ಗಳು ಲಿಂಗ ಬದಲಾವಣೆಗೆ ಅನುಮತಿ ಕೋರಿದ್ದು, ಇಬ್ಬರೂ ವಿಭಿನ್ನ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಲಿಂಗ ಪರಿವರ್ತನೆಗೆ ಅನುಮತಿ ನೀಡಲು ಹಲವು ಸಮಸ್ಯೆಗಳಿವೆ. ಮಹಿಳಾ ಕಾನ್ಸ್ ಟೇಬಲ್ ಗಳು ಶಸ್ತ್ರಚಿಕಿತ್ಸೆ ಬಳಿಕ ಪುರುಷ ಕಾನ್ಸ್ ಟೇಬಲ್ ಗಳು ಎಂದು ಪರಿಗಣಿಸಿದರೆ ಅವರಿಗೆ ಅಗತ್ಯವಿರುವ ದೈಹಿಕ ಮಾನದಂಡಗಳನ್ನು ಪರಿಗಣಿಸುವುದು ಹೇಗೆ? ಮಹಿಳಾ ಪೊಲೀಸರಾಗಿ ನೇಮಕಗೊಂಡ ಬಳಿಕ, ಈ ಇಬ್ಬರು ಕಾನ್ಸ್‌ಟೇಬಲ್‌ಗಳಿಗೆ ತಮ್ಮ ಲಿಂಗ ಬದಲಾಯಿಸಿಕೊಳ್ಳಲು ಹೇಗೆ ಅನುಮತಿ ನೀಡುತ್ತಾರೆ ಎಂಬ ಪ್ರಶ್ನೆ ಮೂಡುತ್ತದೆ.ಪುರುಷ ಹಾಗೂ ಮಹಿಳೆಯರ ನೇಮಕಾತಿ ವೇಳೆ, ಪೊಲೀಸ್ ಇಲಾಖೆಯಲ್ಲಿ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತಿದ್ದು, ಮಹಿಳಾ ಮಾನದಂಡಗಳ ಅಡಿಯಲ್ಲಿ ಉದ್ಯೋಗ ಪಡೆದ ಬಳಿಕ ಲಿಂಗ ಬದಲಾಯಿಸುವ ಮಹಿಳಾ ಸಿಬ್ಬಂದಿಯು ಮಾನದಂಡಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.