Actor Janardhan: ಹಿರಿಯ ನಟ ಬ್ಯಾಂಕ್‌ ಜನಾರ್ದನ್‌ಗೆ ಹೃದಯಾಘಾತ!! ಆಸ್ಪತ್ರೆಗೆ ದಾಖಲು

entertainment news actor bank janardhan sufferd heart attack and hospitalized

Actor Janardhan: ಕನ್ನಡ ಸಿನಿಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್(Actor Janardhan) ಅವರಿಗೆ ನಿನ್ನೆ ಹೃದಯಾಘಾತವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಬ್ಯಾಂಕ್ ಜನಾರ್ಧನ್ ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. ಅಷ್ಟೇ ಅಲ್ಲದೆ, ಹಾಸ್ಯ ನಟರಾಗಿ ಹೆಚ್ಚು ಗುರುತಿಸಿಕೊಂಡಿದ್ದಾರೆ. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದಾರೆ.ಬ್ಯಾಂಕ್ ಜನಾರ್ದನ್ (74)ಅವರಿಗೆ ನಿನ್ನೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿನ್ನೆಯಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ನಿನ್ನೆ ಸಂಜೆ ಹೃದಯಾಘಾತ ಉಂಟಾಗಿದ್ದು, ಸದ್ಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ನಾಳೆ ಜನಾರ್ಧನ್ ಅವರಿಗೆ ಆಂಜಿಯೋಗ್ರಾಮ್ ಮಾಡುವ ಸಂಭವವಿದೆ. ಜನಾರ್ಧನ್ ಅವರಿಗೆ ಹೃದಯಾಘಾತವಾದ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ನಟನ ಆರೋಗ್ಯ ಚೇತರಿಸಿಕೊಳ್ಳಲಿ ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಇನ್ನು ಬ್ಯಾಂಕ್ ಜನಾರ್ದನ್‌ ಅವರ ಆರೋಗ್ಯದ ಕುರಿತಂತೆ ಜನಾರ್ಧನ್ ಅವರ ಪುತ್ರ ಗುರುಪ್ರಸಾದ್, ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ‘ಬ್ಯಾಂಕ್ ಜನಾರ್ದನ್‌ ಅವರು ಆರೋಗ್ಯವಾಗಿದ್ದಾರೆ. ಆಸ್ಪತ್ರೆಯ ವೈದ್ಯರು ಆಂಜಿಯೋಗ್ರಾಮ್ ಮಾಡುತ್ತಿದ್ದಾರೆ. .ಸದ್ಯ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ..’ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

 

Leave A Reply

Your email address will not be published.