BPL ಕಾರ್ಡ್ ದಾರರಿಗೆ ಬಿಗ್ ಶಾಕ್- ಅನ್ನಭಾಗ್ಯದ ಅಕ್ಕಿ ಹಣಕ್ಕೆ ಬಿತ್ತು ಕತ್ತರಿ !! ಸರ್ಕಾರದಿಂದ ಮಹತ್ವದ ನಿರ್ಧಾರ !!
Congress guarantee shocking news for BPL card holders anna bhagya scheme money cut
Shocking News for BPL Card Holder: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್‌ದಾರರಿಗೆ ಬಿಗ್ ಶಾಕ್ (Shocking News for BPL Card Holder)ನೀಡಿದೆ. ರಾಜ್ಯ ಸರ್ಕಾರ ಕರ್ನಾಟಕದ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯ ಹಣವನ್ನು ಕಡಿತಗೊಳಿಸಿದೆ.
ಕಾಂಗ್ರೆಸ್ (Congress) ಐದು ಗ್ಯಾರೆಂಟಿಗಳ ಮೂಲಕ ಐತಿಹಾಸಿಕ ಗೆಲುವು ಸಾಧಿಸಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಚುನಾವಣಾ ಪೂರ್ವ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಅನ್ನ ಭಾಗ್ಯ ಯೋಜನೆಯಡಿ(Anna Bhagya Yojana) ಸರ್ಕಾರವು ಪ್ರತಿ ಕೆಜಿಗೆ 34 ರೂ. ದರದಲ್ಲಿ ಜನರಿಗೆ ನಗದು ನೀಡುತ್ತಿತ್ತು. ಈ ಪ್ರಯೋಜನವು ಬಡತನ ರೇಖೆಗಿಂತ ಕೆಳಗಿರುವ (BPL) ಮತ್ತು ಅಂತ್ಯೋದಯ ಕುಟುಂಬಗಳ ಪ್ರತಿಯೊಬ್ಬ ಸದಸ್ಯರಿಗೂ ಅನ್ವಯವಾಗಲಿದೆ. ಈ ಅನ್ನಭಾಗ್ಯ ಯೋಜನೆಯಡಿ ಪ್ರತಿ ತಿಂಗಳು ಒಟ್ಟಾರೆ 170 ರೂಪಾಯಿಗಳನ್ನು ಓರ್ವ ವ್ಯಕ್ತಿಗೆ ನೀಡಿತ್ತು.
ಕಾಂಗ್ರೆಸ್ ಸರ್ಕಾರ ತಾನು ನುಡಿದಂತೆ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್‌ದಾರರಿಗೆ ಅಕ್ಕಿ ನೀಡಲು ಆಗದೇ ಇದ್ದ ಹಿನ್ನೆಲೆ ತಲಾ 5 ಕೆ.ಜಿ. ಅಕ್ಕಿ ಮತ್ತು ಉಳಿದ 5 ಕೆ.ಜಿ. ಬದಲಾಗಿ ಹಣವನ್ನು ನೀಡುತ್ತಿತ್ತು. ಆದರೆ, ಮುಂದಿನ ತಿಂಗಳಿಂದ ಎಲ್ಲರಿಗೂ ತಲಾ 10 ಕೆ.ಜಿ. ಅಕ್ಕಿಯನ್ನು ವಿತರಣೆ ಮಾಡಲಾಗುವ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಮಾಹಿತಿ ನೀಡಿದ್ದಾರೆ.ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯಡಿಯಲ್ಲಿ ಎಲ್ಲ ಅರ್ಹ ಪಡಿತರ ಫಲಾನುಭವಿಗಳಿಗೆ ಅಕ್ಟೋಬರ್ ನಿಂದ ಎಲ್ಲ ಸದಸ್ಯರಿಗೂ ತಲಾ 10 ಕೆ.ಜಿ. ಅಕ್ಕಿ ನೀಡಲಾಗುತ್ತದೆ. ಈಗಾಗಲೇ ಅಕ್ಕಿ ಸರಬರಾಜು ಮಾಡುವ ಬಗ್ಗೆ ಟೆಂಡರ್ ಪ್ರಕ್ರಿಯೆ ನಡೆದಿದೆ ಎಂಬ ಮಾಹಿತಿಯನ್ನು ಸಚಿವರು ನೀಡಿದ್ದಾರೆ. ಇದರ ಜೊತೆಗೆ ಮೊದಲನೆಯದಾಗಿ ಆರಂಭದಲ್ಲಿ ಬರಪೀಡಿತವೆಂದು ಘೋಷಣೆ ಮಾಡಲಾದ ತಾಲೂಕಿನಲ್ಲಿ ಹಣದ ಬದಲು ಅಕ್ಕಿ ನೀಡಲಾಗುವ ಕುರಿತು ಸಚಿವರು ಮಾಹಿತಿ ನೀಡಿದ್ದಾರೆ.