Karnataka Bandh: ಕರ್ನಾಟಕ ಬಂದ್‌; ನಾಳೆ ಬೆಂಗಳೂರು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!!!

karnataka bandh news bengaluru schools and colleges will have a holiday tomorrow latest news

Karnataka Bandh: ತಮಿಳು ನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧ ಮಾಡಿ ನಾಳೆ ಅಂದರೆ ಸೆ.29ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

ಹಾಗಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸೆ.29 ರಂದು ಎಲ್ಲಾ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

ವಿವಿಧ ಸಂಘಟನೆಗಳು ಬಂದ್‌ಗೆ ಕರೆಕೊಟ್ಟಿರುವ ಕಾರಣ ಸಾರಿಗೆ ಸಂಸ್ಥೆಗಳ ಬಸ್‌ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಂಡು, ಕ್ರಮವಾಗಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗಕ್ಕೆ ಸಮಸ್ಯೆಯಾಗಲಿದೆ. ಹಾಗಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

 

ಇದನ್ನು ಓದಿ: Eye Care: ಮೊಬೈಲ್ ನೋಡಿ ನೋಡಿ ಕಣ್ಣು ನೋವು ಬರ್ತಿದೆಯಾ?! ಹಾಗಿದ್ರೆ ಇಲ್ಲಿದೆ ನೋಡಿ ಪರಿಹಾರ !

Leave A Reply

Your email address will not be published.