ಮತ್ತೊಂದು ಕಪಾಳಮೋಕ್ಷ ಪ್ರಕರಣ; ಹಿಂದೂ ಬಾಲಕನಿಗೆ ಕಪಾಳಮೋಕ್ಷ ಮಾಡಲು ಮುಸ್ಲಿಂ ಬಾಲಕನಿಗೆ ಹೇಳಿದ ಶಿಕ್ಷಕಿ; ಶಿಕ್ಷಕಿ ಅರೆಸ್ಟ್‌!!!

ಹಿಂದೂ ಸಹಪಾಠಿಗೆ ಕಪಾಳಮೋಕ್ಷ ಮಾಡಲು ಮುಸ್ಲಿಂ ವಿದ್ಯಾರ್ಥಿಗೆ ಶಿಕ್ಷಕಿಯೋರ್ವರು ಆದೇಶ ನೀಡಿದ ಘಟನೆಯೊಂದು ಉತ್ತರಪ್ರದೇಶದಲ್ಲಿ ವರದಿಯಾಗಿದೆ. ಪ್ರಶ್ನೆಗೆ ಉತ್ತರಿಸಿಲ್ಲ ಎಂಬ ಕಾರಣಕ್ಕೆ ಈ ರೀತಿ ನಡೆದಿದೆ ಎಂದು ಹೇಳಲಾಗಿದೆ. ಯುಪಿಯ ಸಂಭಾಲ್‌ ಜಿಲ್ಲೆಯ ಅಸ್ಮೀಲಿ ಪೊಲೀಸ್‌ ಠಾಣೆ ವ್ಯಾಪ್ತಿಯ ದುಗಾವರ್‌ ಗ್ರಾಮದ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಘಟನೆ ಕುರಿತು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ಘಟನೆ ಸಂಬಂಧ ಶಾಲಾ ಶಿಕ್ಷಕಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂದೂ ಹುಡುಗನ ತಂದೆ ನೀಡಿದ ದೂರಿನನ್ವಯ ಈ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಸಂಬಂಧ ಕೋಮು ದ್ವೇಷವನ್ನು ಪ್ರಚೋದಿಸಿದ ಆರೋಪದ ಮೇಲೆ ಶಾಲಾ ಶಿಕ್ಷಕಿಯನ್ನು ಬಂಧಿಸಿ, ಐಪಿಸಿ ಸೆಕ್ಷನ್‌ 153A, 323 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಐದನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಿಕ್ಷಕಿ ಕೇಳಿದ ಪ್ರಶ್ನೆಗೆ ಉತ್ತರಿಸಲು ಸಾಧ್ಯವಾಗದ ಕಾರಣ ಆ ಬಾಲಕನಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳ ಮೋಕ್ಷ ಮಾಡಿಸಿದ್ದಾರೆ ಎಂದು ಬಾಲಕನ ತಂದೆ ಆರೋಪ ಮಾಡಿದ್ದಾರೆ. ಈ ಪ್ರಕರಣದ ಕುರಿತು ತನಿಖೆ ನಡೆಸಯುತ್ತಿದೆ ಎಂದು ಹೆಚ್ಚುವರಿ ಎಸ್ಪಿ ಹೇಳಿದ್ದಾರೆ.

Leave A Reply

Your email address will not be published.