KGF -3 Updates: ಕೆಜಿಎಫ್- 3 ಬಗೆ ಬಿಗ್ ಅಪ್ಡೇಟ್ ಕೊಟ್ಟ ಹೊಂಬಾಳೆ ಫಿಲ್ಮ್ಸ್ ; ಪಾರ್ಟ್-3 ಉಂಟೋ, ಇಲ್ವೋ ? ಇಲ್ಲಿದೆ ನೋಡಿ ಡೀಟೇಲ್ಸ್ !

KGF -3 Updates: ಕೆಜಿಎಫ್ ಇಡೀ ವಿಶ್ವವೇ ಕನ್ನಡ ಚಿತ್ರರಂಗವನ್ನು ತಿರುಗಿ ನೋಡುವಂತೆ ಮಾಡಿದ ಸಿನಿಮಾ. ಕೆಜಿಎಫ್ -1 ಮುಗಿದ ಕೂಡಲೇ ಕೆಜಿಎಫ್- 2 ಯಾವಾಗ ಬಿಡುಗಡೆ ಆಗಬಹುದು ಎಂದು ಎಲ್ಲರೂ ಕಾತುರರಾಗಿದ್ದರು. ಕೆಜಿಎಫ್ 2 ಕೂಡ ತೆರೆಕಂಡು ಸಖತ್ ಧೂಳೆಬ್ಬಿಸಿದ ಬಳಿಕ ಎಲ್ಲರೂ ಕೆಜಿಎಫ್-3 ಯಾವಾಗ ಎಂದು ಎದುರು ನೋಡುತ್ತಿದ್ದಾರೆ. ಆದರೀಗ ಹೊಂಬಾಳೆ ಫಿಲ್ಮ್ಸ್ ಕೆಜಿಎಫ್- 3 (KGF -3 Updates) ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟಿದೆ. ಪಾರ್ಟ್-3 ಉಂಟೋ, ಇಲ್ವೋ? ಇಲ್ಲಿದೆ ನೋಡಿ ಡೀಟೇಲ್ಸ್ !

‘ಕೆಜಿಎಫ್ 2’ ಸಿನಿಮಾ ಕ್ಲೈಮ್ಯಾಕ್ಸ್​​ನಲ್ಲಿ ‘ಕೆಜಿಎಫ್ 3’ ಬಗ್ಗೆ ಅಪ್​ಡೇಟ್​ ಸಿಕ್ಕಿತ್ತು. ‘ಕೆಜಿಎಫ್’ ಸೀರಿಸ್​​ನ ಮೂರನೇ ಪಾರ್ಟ್ ಯಾವಾಗ ಸೆಟ್ಟೇರಲಿದೆ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿದೆ.
ಇದೀಗ ಹೊಂಬಾಳೆ ಫಿಲ್ಮ್ಸ್ ಯಶ್ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದೆ. ಮುಂದಿನ ದಿನಗಳಲ್ಲಿ ಕೆಜಿಎಫ್ 3 (KGF 3) ಸಿನಿಮಾವನ್ನು ನಿರ್ಮಾಣ ಮಾಡುವುದಾಗಿ ತಿಳಿಸಿದೆ. ಈ ಬಗ್ಗೆ ಸಲಾರ್ ಸಿನಿಮಾದ ಪತ್ರಿಕಾ ಹೇಳಿಕೆಯಲ್ಲಿ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಬರೆದುಕೊಂಡಿದೆ.

ಪ್ರಶಾಂತ್ ನೀಲ್ (Prashant Neel) ಮತ್ತು ಯಶ್ (Yash) ಕಾಂಬಿನೇಷನ್ ನ ಕೆಜಿಎಫ್ ಸಿನಿಮಾ ವಿಶ್ವಮಟ್ಟದಲ್ಲಿ ಸದ್ದು ಮಾಡಿತು. ಕೆಜಿಎಫ್ 1 ಮತ್ತು 2 ಎರಡೂ ಚಿತ್ರಗಳು ಬಾಕ್ಸ್ ಆಫೀಸಿನಲ್ಲಿ ಬಿರುಗಾಳಿ ಎಬ್ಬಿಸಿದ್ದವು. ಹಾಗಾಗಿ ಮುಂದಿನ ದಿನಗಳಲ್ಲಿ ಈ ಸರಣಿ ಮುಂದುವರೆಯಲಿದೆ ಎನ್ನುವ ಸುಳಿವೂ ಕೂಡ ಇತ್ತು. ಸದ್ಯ ಯಶ್ ಹೊಸ ಸಿನಿಮಾದ ಕೆಲಸದಲ್ಲಿ ಬ್ಯೂಸಿಯಾಗಿದ್ದಾರೆ. ಹಾಗಾಗಿ ಕೆಜಿಎಫ್ 3 ಸಿನಿಮಾ ಯಾವಾಗ ಸೆಟ್ಟೇರಲಿದೆ ಎನ್ನುವ ಕುತೂಹಲ ಎಲ್ಲರಿಗೂ ಮೂಡಿದೆ.

Leave A Reply

Your email address will not be published.