ಪಿಲಿಕುಳ ಜೈವಿಕ ಉದ್ಯಾನವನದ ಅಧೀನದ ಮೃಗಾಲಯದಲ್ಲಿ ಏಕೈಕ ಎಮು ಪಕ್ಷಿ ದಾಳಿಗೊಳಗಾದ ಸ್ಥಿತಿಯಲ್ಲಿ ಮಂಗಳವಾರ ಸಾವಿಗೀಡಾಗಿರುವ ಬಗ್ಗೆ ಸಮಗ್ರ ವರದಿ ಪ್ರಕಟಿಸಿತ್ತು. ಈಬಗ್ಗೆ ಜಿಲ್ಲಾಧಿಕಾರಿಗಳು ಸಮಗ್ರ ಮಾಹಿತಿ ಪಡೆದು ತನಿಖೆ ನಡೆಸುವ ಭರವಸೆ ನೀಡಿದ್ದಾರೆ.
ಹಿಂದೂ ಸಹಪಾಠಿಗೆ ಕಪಾಳಮೋಕ್ಷ ಮಾಡಲು ಮುಸ್ಲಿಂ ವಿದ್ಯಾರ್ಥಿಗೆ ಶಿಕ್ಷಕಿಯೋರ್ವರು ಆದೇಶ ನೀಡಿದ ಘಟನೆಯೊಂದು ಉತ್ತರಪ್ರದೇಶದಲ್ಲಿ ವರದಿಯಾಗಿದೆ. ಪ್ರಶ್ನೆಗೆ ಉತ್ತರಿಸಿಲ್ಲ ಎಂಬ ಕಾರಣಕ್ಕೆ ಈ ರೀತಿ ನಡೆದಿದೆ ಎಂದು ಹೇಳಲಾಗಿದೆ.