Siddaramaiah: ಕಾವೇರಿ ನೀರು ವಿಚಾರವಾಗಿ ಕೊನೆಗೂ ಮಹತ್ವದ ನಿರ್ಧಾರ ಕೈಗೊಂಡ ಸರ್ಕಾರ !! ಸಿಎಂ ಸಿದ್ದು ಹೇಳಿದ್ದೇನು ?!
Cauvery water issue government has taken an important decision regarding Cauvery water
Cauvery water issue : ಕಾವೇರಿ ನೀರು ವಿವಾದದ ಕುರಿತು ಸಿಎಂ ಸಿದ್ದರಾಮಯ್ಯ (Siddaramaiah) ಶಾಕಿಂಗ್ ಹೇಳಿಕೆ ನೀಡಿದ್ದು, ಕಾವೇರಿ ವಿವಾದ( Cauvery water issue) ಕುರಿತು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ನಾವು ಕಾವೇರಿ ನೀರು ಬಿಡದಿದ್ದರೆ, ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು. ನ್ಯಾಯಾಲಯ ಆದೇಶ ಉಲ್ಲಂಘನೆ (contempt of court) ಆಗುತ್ತದೆ. ಆಗ ಕರ್ನಾಟಕ ರಾಜ್ಯ ಸರ್ಕಾರವನ್ನು ಡಿಸ್ಮಿಸ್ ಮಾಡಬಹುದು ಎಂದರು.
ಜೊತೆಗೆ ಈ ಬಗ್ಗೆ ನಿನ್ನೆ ಸಂಜೆ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ನೀರಾವರಿ ತಜ್ಞರು, ಮಾಜಿ ಅಡ್ವೊಕೇಟ್ ಜನರಲ್ ಗಳೊಂದಿಗೆ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ತಿಳಿಸಿದ್ದರು. ಇದೀಗ ಕಾವೇರಿ ನೀರು ವಿಚಾರವಾಗಿ ಕೊನೆಗೂ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಿಎಂ ಸಿದ್ದು ಹೇಳಿದ್ದೇನು ಗೊತ್ತಾ ?!
ನಿವೃತ್ತ ನ್ಯಾಯಮೂರ್ತಿಗಳು, ಮಾಜಿ ಎಜಿಗಳ ಜೊತೆ ಸಭೆ ನಡೆಸಿದ ಬಳಿಕ ಸಿಎಂ ಮಾಹಿತಿ ನೀಡಿದ್ದಾರೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು, ಮಾಜಿ ಎಜಿಗಳು ತಮ್ಮ ಅನುಭವದ ಮೇಲೆ ಸರ್ಕಾರಕ್ಕೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ತಜ್ಞರ ಸಲಹಾ ಸಮಿತಿ ರಚಿಸುವುದು ಒಳ್ಳೆಯದು ಎಂದು ಹೇಳಿದ್ದಾರೆ. ಕೇವಲ ಕಾವೇರಿ ಮಾತ್ರವಲ್ಲ, ಎಲ್ಲಾ ಜಲ ವಿವಾದಗಳ ಸಂಬಂಧ ಸಮಿತಿ ರಚಿಸಲು ಸಲಹೆ ನೀಡಲಾಗಿದೆ ಎಂದರು.
ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪಿಸಲು ಸಭೆಯಲ್ಲಿ ಸಲಹೆ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಜೊತೆ ಮಾತನಾಡಿ ಮನವೊಲಿಸುವಂತೆ ಹೇಳಿದ್ದಾರೆ. ಮೇಕೆದಾಟು ಅಣೆಕಟ್ಟು ನಿರ್ಮಿಸುವುದರಿಂದ ತಮಿಳುನಾಡಿಗೆ ಸಮಸ್ಯೆಯಾಗುವುದಿಲ್ಲ. ಮೇಕೆದಾಟು ಯೋಜನೆ ಜಾರಿಯಾದರೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ತಮಿಳುನಾಡಿಗೆ ಅಗತ್ಯವಿದ್ದಾಗ ನೀರು ಹರಿಸಲು ಸಹಕಾರಿಯಾಗಲಿದೆ. ಜಲ ವಿದ್ಯುತ್ ಉತ್ಪಾದನೆಗೆ ಬಳಸಿದ ನೀರು ತಮಿಳುನಾಡಿಗೆ ಹರಿದು ಹೋಗುತ್ತದೆ. ತಮಿಳುನಾಡಿಗೆ ಮನವರಿಕೆ ಮಾಡಿ ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: Cooking Oil: ಒಮ್ಮೆ ಬಳಸಿದ ಎಣ್ಣೆಯನ್ನು ಮತ್ತೊಂದು ಅಡುಗೆಗೆ ಬಳಸ್ತೀರಾ ?! ಹಾಗಿದ್ರೆ ಈ ವಿಚಾರ ಗೊತ್ತಿದ್ದರೆ ಒಳ್ಳೆಯದು !