Basavaraja Bommai: ಕಾವೇರಿ ವಿಚಾರದಲ್ಲಿ ಸತ್ಯ ಹೇಳಿದರೆ ಅಧಿಕಾರ ಹೋಗುತ್ತೆ ಅನ್ನೋದು ನಿಮ್ಮ ಭ್ರಮೆ : ಬೊಮ್ಮಾಯಿ ಶಾಕಿಂಗ್ ಹೇಳಿಕೆ

Latest news Basavaraja Bommai It is your delusion that we will lose power if we tell the truth about Cauvery

Basavaraja Bommai: ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಕಾವೇರಿ ನದಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರದಲ್ಲಿ ರಾಜ್ಯ ಸರ್ಕಾರದ ಮೊರೆ ಇಡುವ ಜನರ ಪ್ರಶ್ನೆಗೆ ಸಿದ್ದರಾಮಯ್ಯ ಅವರು ಉತ್ತರ ನೀಡಬೇಕು. ಆದರೆ ತಮಿಳುನಾಡಿಗೆ ನೀರು ಬಿಡದಿದ್ದರೆ ಸರ್ಕಾರ ವಜಾ ಆಗಬಹುದು ಎಂದು ಉದ್ದಟತನದ ಮಾತು ಆಡಬಾರದು. ಸಿಎಂ ಆದವರು ಈ ರೀತಿ ಮಾತನಾಡಬಾರದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 

ಈಗಾಗಲೇ ಸುಪ್ರೀಂಕೋರ್ಟ್‌ ಆದೇಶದಂತೆ (Supreme Court Order) ತಮಿಳುನಾಡಿಗೆ ಕಾವೇರಿ ನೀರು ಬಿಡದೆ ಹೋದರೆ (Cauvery Water Dispute) ಸರ್ಕಾರವನ್ನೇ ವಜಾ ಮಾಡಿಬಿಡುವ ಅಪಾಯವೂ (Danger of Dismissal of Government) ಇದೆ ಎಂಬ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಅಭಿಪ್ರಾಯವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಅಲ್ಲಗಳೆದಿದ್ದಾರೆ.

ʻʻತಮಿಳುನಾಡಿಗೆ ನೀರು ಬಿಡದಿದ್ದರೆ ನಮ್ಮ ಅಧಿಕಾರ ಹೋಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ‌. ಇವರು ಅಧಿಕಾರಕ್ಕಾಗಿ ರಾಜ್ಯದ ಹಿತ ಬಲಿ ಕೊಡುತ್ತಿದ್ದಾರೆ. ಇವರು ಬಹಿರಂಗ ಹೇಳಿಕೆ ಕೊಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕು. ಕೊರ್ಟ್‌ ನಲ್ಲಿ ವಾದ ಮಾಡಬೇಕು. ಸುಪ್ರೀಂ ಕೊರ್ಟ್ ನಲ್ಲಿ ಈಗಿನ ವಾಸ್ತವ ಸ್ಥಿತಿ ಹೆಳಿದರೆ ನ್ಯಾಯಾಂಗ‌ ನಿಂದನೆ ಆಗುವುದಿಲ್ಲ. ಅಧಿಕಾರವೂ ಹೋಗುವುದಿಲ್ಲʼʼ ಎಂದು ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಸರ್ಕಾರ ಈಗಾಗಲೇ ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದೆ. ಈ ಸರ್ಕಾರ ಆಡಳಿತ ನಡೆಸುವ ವಿಶ್ವಾಸ ಕಳೆದುಕೊಂಡಿದೆ. ಜನರೇ ಈ ಸರ್ಕಾರದ ಆಡಳಿತದ ಬಗ್ಗೆ ಬೇಸರಗೊಂಡಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಈಗಾಗಲೇ ಎಚ್‌.ಡಿ ಕುಮಾರಸ್ವಾಮಿಯವರು ಎರಡು ಬಾರಿ ಸಿಎಂ ಆದವರು, ಎರಡು ಬಾರಿ ಅಧಿಕಾರ ಕಳೆದುಕೊಂಡಿದ್ದಾರೆ. ಅವರು ಅನುಭವದ ಮಾತು ಹೇಳಿದ್ದಾರೆ. ಆದರೆ, ಸರ್ಕಾರ ಇದ್ಯಾವುದನ್ನೂ ಕೇಳಿಸಿಕೊಳ್ಳುವ ವ್ಯವಧಾನವನ್ನು ಹೊಂದಿಲ್ಲ ಎಂದು ಬೊಮ್ಮಾಯಿ ಕಿಡಿ ಕಾರಿದ್ದಾರೆ.

 

ಇದನ್ನು ಓದಿ: ಅಕ್ಟೋಬರ್ ನಿಂದಲೇ 10 ಕೆಜಿ ಅಕ್ಕಿ ವಿತರಣೆ: ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಭರ್ಜರಿ ಸಿಹಿಸುದ್ದಿ

Leave A Reply

Your email address will not be published.