Ration Shop:ರೇಷನ್ ಪಡೆಯುವುದು ಮಾತ್ರವಲ್ಲ, ಎಲ್ಲರಿಗಿನ್ನು ನೀವೇ ರೇಷನ್ ಕೊಡಬಹುದು !! ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

Karnataka news application invitation for opening of new fair price shops in Chitradurga

Ration Shop: ಹೊಸದಾಗಿ ನ್ಯಾಯಬೆಲೆ ಅಂಗಡಿ(Ration Shop)  ತೆರೆಯಲು ಅರ್ಜಿ ಆಹ್ವಾನ ಮಾಡಲಾಗಿದ್ದು, ಈ ಸೌಲಭ್ಯ ಯಾರಿಗೆ ಸಿಗಲಿದೆ ಗೊತ್ತಾ? ಚಿತ್ರದುರ್ಗ (Chitradurga)ತಾಲ್ಲೂಕಿನ ಭರಮಸಾಗರ ಹೋಬಳಿಯ, ಭರಮಸಾಗರ ಗೊಲ್ಲರಹಟ್ಟಿ ಗ್ರಾಮಕ್ಕೆ ಪಡಿತರ ಚೀಟಿದಾರರಿಗೆ ನೆರವಾಗುವ ದೆಸೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ.

 

* ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮ, ಸಂಸ್ಥೆ, ಗ್ರಾಮ ಹಾಗೂ ಸ್ಥಳೀಯ ಪಂಚಾಯಿತಿಗಳು, ಕೃಷಿ ಪತ್ತಿನ, ತೋಟಗಾರಿಕೆ, ಪ್ರಾಥಮಿಕ ಬಳಕೆದಾರರು, ಆದಿವಾಸಿ, ನೇಕಾರ, ಮಹಿಳಾ, ಅಂಗವಿಕಲ ಸೇರಿದಂತೆ ವಿವಿಧ ಸಹಕಾರಿ ಸಂಘಗಳು, ಸ್ತ್ರೀ ಶಕ್ತಿ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳು, ವಿಕಲಚೇತನರು ಹಾಗೂ ತೃತೀಯ ಲಿಂಗಿಗಳನ್ನು ಆದ್ಯತೆ ಮೇರೆಗೆ ಪರಿಗಣಿಸಲಾಗುತ್ತದೆ.

* ಅರ್ಜಿ ಸಲ್ಲಿಸುವ ಸಹಕಾರಿ ಸಂಘಗಳು ಕನಿಷ್ಠ 3 ವರ್ಷದ ಹಿಂದೆ ನೋಂದಾಯಿತರಾಗಿರಬೇಕು.
* ಕನಿಷ್ಠ ರೂ.2 ಲಕ್ಷರೂಪಾಯಿಗಳ ಬ್ಯಾಂಕ್ ಮೊತ್ತ ಬ್ಯಾಲೆನ್ಸ್ ಒಳಗೊಂಡಿರಬೇಕು.
* ಸ್ತ್ರೀ ಸಹಾಯ ಸಂಘಗಳು ರೂ.1 ಲಕ್ಷ ಬ್ಯಾಂಕ್ ಠೇವಣಿ, ಅದೇ ರೀತಿ ವಿಕಲಚೇತನರು ಹಾಗೂ ತೃತೀಯ ಲಿಂಗಿಗಳು ಕನಿಷ್ಠ ರೂ.50 ಸಾವಿರ ಬ್ಯಾಂಕ್ ಠೇವಣಿ ಹೊಂದಿರಬೇಕು.
* ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕಡ್ಡಾಯವಾಗಿ ಹತ್ತನೇ ತರಗತಿ ಪಾಸಾಗಿರಬೇಕು. (ವಿಕಲಚೇತನರು ಹಾಗೂ ತೃತೀಯ ಲಿಂಗಿಗಳು ಮಾತ್ರ),
* ಸಹಕಾರ ಸಂಘ, ಸಂಸ್ಥೆಗಳ ಮತ್ತು ಸ್ವಸಹಾಯ ಸಂಘಗಳಾದರೆ ನೋಂದಾವಣೆ ಪತ್ರ, ಸಹಕಾರ ಸಂಘ ಸಂಸ್ಥೆಯಾದರೆ ಕಳೆದ 3 ವರ್ಷಗಳ ದೃಢೀಕೃತ ಲೆಕ್ಕ ಪರಿಶೋಧನಾ ವರದಿ, ಬೈಲಾ, ಪ್ರತನಿಧಿ ನೇಮಕ ನಿರ್ಣಯ, ಅರ್ಜಿ ಸಲ್ಲಿಸಿದ ಸಹಕಾರಿ ಸಂಘದ ಮೇಲೆ ಯಾವುದೆ ವಿಚಾರಣೆ, ಲಿಕ್ವಿಡೇಷನ್ ನಡವಳಿ ನಡೆದಿರುವುದಿಲ್ಲ ಎಂಬ ಬಗ್ಗೆ ಸಕ್ಷಮ ಪ್ರಾಧಿಕಾರಿಯು ನೀಡಿರುವ ದೃಢೀಕರಣ ಪತ್ರ ಬೇಕಾಗುತ್ತದೆ.
* ವ್ಯಾಪಾರದ ಮಳಿಗೆಯ ಖಾತೆ ಅಥವಾ ಬಾಡಿಗೆ ಕರಾರು ಪತ್ರ, ಹಣಕಾಸು ಹೊಂದಿರುವ ಬಗ್ಗೆ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಸಹಕಾರ ಸಂಘದವರು ಅಧಿಕೃತವಾಗಿ ನೇಮಿಸಿರುವ ಪ್ರತಿನಿಧಿಯ ಇತ್ತೀಚಿನ 3 ಭಾವಚಿತ್ರ, ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಪ್ರಕರಣಗಳು ಹೊಂದಿಲ್ಲದಿರುವ ಬಗ್ಗೆ ಪೊಲೀಸ್ ಇಲಾಖೆಯ ಮೂಲಕ ಪೋಲಿಸ್ ವೆರಿಪಿಕೇಷನ್ ರಿಪೋರ್ಟ್ ಪಡೆದು ಕಡ್ಡಾಯವಾಗಿ ನೀಡಬೇಕು.
* ವಿಕಲಚೇತನರು ಹಾಗೂ ತೃತೀಯ ಲಿಂಗಿಗಳು ಸಕ್ಷಮ ಪ್ರಾಧಿಕಾರದಿಂದ ಪಡೆದ ದೃಢೀಕರಣ ಪತ್ರ ಸಲ್ಲಿಸಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಸೂಚನೆ ನೀಡಿದ್ದಾರೆ.

ಆಸಕ್ತರು ನಿಯಮಗಳ ಅನುಸಾರ, ನಮೂನೆ-ಎ ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಚಿತ್ರದುರ್ಗ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಿಗೆ ಸಲ್ಲಿಸಲು ಅನುವು ಮಾಡಿಕೊಡಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 26 ಕೊನೆಯ ದಿನವಾಗಿದ್ದು,ನಿಗದಿತ ಅವಧಿಯ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Madya Pradesh: ನಾವು ಮತ್ತೆ ಅಧಿಕಾರಕ್ಕೆ ಬಂದ್ರೆ ‘ಒಂದು ಮನೆಗೆ ಒಂದು ಉದ್ಯೋಗ’ ಗ್ಯಾರಂಟಿ- ಮಹತ್ವದ ಘೋಷಣೆ ಮಾಡಿತು ಈ ಪಕ್ಷ

Leave A Reply

Your email address will not be published.