New scheme: ರಾಜ್ಯ ಸರ್ಕಾರದಿಂದ ಬರ್ತಿದೆ ಮತ್ತೊಂದು ಹೊಸ ಯೋಜನೆ – ಈ ಭಾಗದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್
Karnataka news political news state government launch another new scheme for rural women
New scheme: ರಾಜ್ಯ ಸರ್ಕಾರ ಮಹಿಳೆಯರಿಗೆ ‘ಶಕ್ತಿ ಯೋಜನೆ'(Shakthi yojane) ಹಾಗೂ ‘ಗೃಹಲಕ್ಷ್ಮಿ'(Gruhalakshmi) ಯೋಜನೆಗಳನ್ನು ಜಾರಿಗೊಳಿಸಿ ಅವರ ಸಬಲೀಕರಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದೆ. ಈ ಬೆನ್ನಲ್ಲೇ ಇದೀಗ ಗ್ರಾಮೀಣ ಮಹಿಳೆಯರಿಗಾಗಿ ಹೊಸ ಯೋಜನೆಯನ್ನು(New scheme)ಜಾರಿಗೆ ತರಲು ಸರ್ಕಾರವು ಮುಂದಾಗಿದೆ.
ಹೌದು, ರಾಜ್ಯ ಸರ್ಕಾರವು ಈಗಾಗಲೇ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಇವುಗಳಲ್ಲಿ ಎರಡು ಯೋಜನೆಗಳು ಸಂಪೂರ್ಣವಾಗಿ ಮಹಿಳೆರಿಗೇ ಮೀಸಲಾಗಿದೆ. ಈ ಬೆನ್ನಲ್ಲೇ ಮಹಿಳೆಯರಿಗೆ ಅನುಕೂಲ ಮಾಡಿಕೊಡಲು ಸರ್ಕಾರವು ಇದೀಗ ಮತ್ತೊಂದು ಮಹತ್ವದ ಯೋಜನೆಗೆ ಚಾಲನೆ ನೀಡಲು ಸಿದ್ಧತೆ ನಡೆಸಿದ್ದು ‘ನರೇಗೌ ಕ್ರಿಯಾಶೀಲ ಉದ್ಯೋಗ ಚೀಟಿ’ ಹೊಂದಿರುವ ಕುಟುಂಬದ 3 ವರ್ಷದೊಳಗಿನ ಮಕ್ಕಳಿಗೆ ಈ ಕೂಸಿನ ಮನೆ ಆಶ್ರಯ ನೀಡಲಿದ್ದು, ಗಾಂಧಿ ಜಯಂತಿ ದಿನವಾದ ನಾಳೆ ಯೋಜನೆಗೆ ಚಾಲನೆ ನೀಡುವ ಸಾಧ್ಯತೆ ಇದೆ.
ಅಂದಹಾಗೆ ಪ್ರಸಕ್ತ 2023-24ರ ಅಯವ್ಯಯ ಭಾಷಣದಲ್ಲಿನ ಘೋಷಣೆಯಂತೆ ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಕೂಲಿ ಕಾರ್ಮಿಕರ 3 ವರ್ಷದೊಳಗಿನ ಮಕ್ಕಳನ್ನು ನೋಡಿಕೊಳ್ಳಲು “ಕೂಸಿನ ಮನೆ” ಶಿಶುವಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. “ಕೂಸಿನ ಮನೆ’ ಕೆಂದ್ರಗಳು ಸ್ಥಳೀಯ ಕಾರ್ಮಿಕರ ಅನುಕೂಲಕ್ಕೆ ತಕ್ಕಂತೆ ದಿನದಲ್ಲಿ 6 ಗಂಟೆ 30 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತವೆ. ಗ್ರಾಮ ಪಂಚಾಯಿತಿಗಳೇ ಕೇಂದ್ರದ ಕಾರ್ಯನಿರ್ವಹಿಸುವ ಸಮಯವನ್ನು ನಿರ್ಧರಿಸಲಿದೆ.
ಏನಿದು ಕೂಸಿನ ಮನೆ?
4000 ಶಿಶು ಪಾಲನಾ ಕೇಂದ್ರಗಳಿಗೆ ಪ್ರತಿ ಕೇಂದ್ರಕ್ಕೆ ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ 10 ಜನ ಕೇರ್ ಟೇಕರ್ಸ್ಗಳನ್ನು (ಮಕ್ಕಳ ಆರೈಕೆದಾರರು) ಇರಲಿದ್ದಾರೆ. ಇವರಿಗೆ ಮೊಬೈಲ್ ಕ್ರಶ್ ದೆಹಲಿ ಸಂಸ್ಥೆಯ ಸಹಕಾರದಿಂದ ತರಬೇತಿ ನೀಡಲಾಗುವುದು. ಇದರಿಂದ 40,000 ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಮಕ್ಕಳ ಆರೈಕೆಯ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲಾಗುತ್ತಿದೆ.
ಕೂಸಿನ ಮನೆ’ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಾಜ್ಯದಾದ್ಯಂತ 40 ಕೋಟಿ ರೂ. ವೆಚ್ಚದಲ್ಲಿ 4,000 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ಕೂಸಿನ ಮನೆ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಪ್ರತಿ ‘ಕೂಸಿನ ಮನೆ’ ಕೇಂದ್ರದಲ್ಲಿ ನರೇಗಾ ಕ್ರಿಯಾಶೀಲ ಉದ್ಯೋಗ ಹಾರ್ಡ್ ಹೊಂದಿರುವ ಕುಟುಂಬದ 3 ವರ್ಷದೊಳಗಿನ ಗರಿಷ್ಠ 25 ಮಕ್ಕಳನ್ನು ದಾಖಲೆ ಮಾಡಿಕೊಳ್ಳಲು ಅವಕಾಶ ಇರಲಿದೆ.
ಮುಖ್ಯ ಉದ್ದೇಶ:
ಕೂಸಿನ ಮನೆ (ಶಿಶು ಪಾಲನಾ ಕೇಂದ್ರ)ಗಳ ಮುಖ್ಯ ಉದ್ದೇಶ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಜಮೀನುಗಳಲ್ಲಿ ಕೃಷಿ ಕೆಲಸಕ್ಕೆ ತೆರಳುತ್ತಾರೆ. ಕೂಲಿಕಾರ್ಮಿಕರು ಹಾಗೂ ಕೃಷಿ ಕಾರ್ಮಿಕರು ಬಹುತೇಕರು ಬಡ ಕುಟುಂಬದವರಾಗಿದ್ದು, ಪ್ರತಿ-ನಿತ್ಯ ಕೂಲಿ ಕೆಲಸಕ್ಕೆ ತೆರಳುವ ಅನಿವಾರ್ಯತೆ ಇರುತ್ತದೆ. ಇಂತಹ ಕುಟುಂಬದ ಮಹಿಳೆಯರು ತಮ್ಮ ಚಿಕ್ಕ ಮಕ್ಕಳನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವುದು ಅಸಾಧ್ಯ. ಮಹಿಳೆಯರು ತಮ್ಮ ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಅವರು ಕೆಲಸದಿಂದ ಮನೆಗೆ ಮರಳುವವರೆಗೆ ಮಗುವಿಗೆ ತಾಯಿ ಹಾಲು ದೊರೆಯುವುದಿಲ್ಲ ಜೊತೆಗೆ ಪೌಷ್ಠಿಕ ಆಹಾರ ದೊರೆಯುವುದಿಲ್ಲ ಇದರಿಂದ ಮಕ್ಕಳು ಅಪೌಷ್ಠಿಕತೆಗೆ ಒಳಗಾಗಬಹುದಾಗಿದೆ. ಇದರಿಂದ ಗ್ರಾಮೀಣರ ಮಾನಸಿಕ ಆರೋಗ್ಯವು ಹಾಳಾಗುತ್ತದೆ. ಈ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಈ ಯೋಜನೆ ಆರಂಭಿಸಿದೆ. ಹಳ್ಳಿ ಮಹಿಳೆಯರು ಕೂಸಿನ ಮನೆಯಲ್ಲಿ ತಮ್ಮ 6 ತಿಂಗಳಿಂದ 3 ವರ್ಷದೊಳಗಿನ ಮಕ್ಕಳನ್ನು ಬಿಟ್ಟು ಕೆಲಸಕ್ಕೆ ತೆರಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: P M Modi: ಲೋಕಸಮರದಲ್ಲಿ ಗೆದ್ದು ಮುಂದಿನ ಪ್ರಧಾನಿಯಾಗೋದು ಯಾರು ?! ಭಾರೀ ಕುತೂಹಲ ಕೆರಳಿಸಿದ ಪ್ರಧಾನಿ ಮೋದಿ ಹೇಳಿಕೆ