Anna bhagya: ಅನ್ನಭಾಗ್ಯದ ಅಕ್ಕಿ, ಹಣದ ವಿತರಣೆಯಲ್ಲಿ ಮಹತ್ವದ ಬದಲಾವಣೆ !! ಬಿಗ್ ಅಪ್ಡೇಟ್ ನೀಡಿದ ಸಚಿವ ಮುನಿಯಪ್ಪ

Annabhagya scheme update minister muniyappa says rice instead of money for drought effected districts

Minister Muniyappa: ರಾಜ್ಯ ಸರಕಾರದ ಅನ್ನಭಾಗ್ಯ(Anna bhagya) ಯೋಜನೆಯಡಿ ರಾಜ್ಯದ ಜನರಿಗೆ 5 ಕೆಜಿ ಅಕ್ಕಿ ಹಾಗೂ 5 ಕೆ ಜಿ ಅಕ್ಕಿಯ ದುಡ್ಡನ್ನು ಉಚಿತವಾಗಿ ನೀಡಲಾಗುತ್ತಿದ್ದು, ಇನ್ನುಮುಂದೆ ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಆಹಾರ ಸಚಿವ ಕೆ ಎಚ್(K H Muniyappa) ಮುನಿಯಪ್ಪ ಅವರು ಸೋಮವಾರ ಹೇಳಿದ್ದಾರೆ.

ಅಕ್ಟೋಬರ್ ತಿಂಗಳಿಂದ ಬರಪೀಡಿತ ತಾಲ್ಲೂಕುಗಳ ಜನರಿಗೆ 10ಕೆಜಿ ಅಕ್ಕಿ ನೀಡುತ್ತೇವೆ ಎಂದು ಘೋಷಣೆ ಮಾಡಿದ್ಧ ಸರ್ಕಾರ ಅಕ್ಕಿ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಹೀಗಾಗಿ ಮುಂದಿನ ತಿಂಗಳೂ ಹೆಚ್ಚುವರಿ ಅಕ್ಕಿ ಬದಲು ಹಣವನ್ನೇ ನೀಡುವುದಾಗಿ ಹೇಳಿದ್ದರು. ಆದರೀಗ ಮತ್ತೆ ಅಕ್ಟೋಬರ್‌ನಲ್ಲಿ 10 ಕೆ.ಜಿ. ಅಕ್ಕಿ ನೀಡುವುದಾಗಿ ಕೆ.ಎಚ್. ಮುನಿಯಪ್ಪ (Minister Muniyappa)ಸ್ಪಷ್ಟಪಡಿಸಿದ್ದಾರೆ.

ಹೌದ, ಅಕ್ಟೋಬರ್ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯಡಿ ಬರಪೀಡಿತ ತಾಲೂಕುಗಳಲ್ಲಿ ಹಣದ ಬದಲು 10 ಕೆ.ಜಿ ಅಕ್ಕಿ ನೀಡಲಾಗುವುದು. ಅಕ್ಕಿ ಖರೀದಿ ಟೆಂಡರ್ ಪ್ರಕ್ರಿಯೆ ಸಂಬಂಧಿಸಿದ ಮಾತುಕತೆ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ ಫಲಾನುಭವಿಗಳಿಗೆ 10 ಅಕ್ಕಿ ಪೂರೈಕೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್ ಮುನಿಯಪ್ಪ ಪುನರುಚ್ಛಾರ ಮಾಡಿದ್ದಾರೆ.

ಅಂದಹಾಗೆ ರಾಜ್ಯದ 114 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಈ ತಾಲೂಕುಗಳಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಲು ಸಿದ್ದತೆ ನಡೆಸಲಾಗುತ್ತಿದೆ. ಬರಪೀಡಿತ ತಾಲೂಕುಗಳಲ್ಲಿ ಐದು ಕೆಜಿ ಅಕ್ಕಿಗೆ ಹಣ ಬದಲು ಅಕ್ಕಿಯನ್ನೇ ಪೂರೈಕೆ ಮಾಡಲಾಗುತ್ತದೆ. ಬರ ಪೀಡಿತ ತಾಲೂಕುಗಳಲ್ಲಿ ಒಟ್ಟು ಹತ್ತು ಕೆಜಿ ಅಕ್ಕಿ ಪೂರೈಕೆ ಮಾಡುತ್ತೇವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಅಲ್ಲದೆ ಜುಲೈ ತಿಂಗಳಿನಲ್ಲಿ 97 ಲಕ್ಷ ಕಾರ್ಡ್‌ದಾರರಿಗೆ ಡಿಬಿಟಿ (ನೇರ ನಗದು ವರ್ಗಾವಣೆ) ಮಾಡಿದ್ದೇವೆ. ಆಗಸ್ಟ್ ತಿಂಗಳಲ್ಲಿ 3.69 ಕೋಟಿ ಜನರಿಗೆ ₹ 606 ಕೋಟಿ ಬಿಡುಗಡೆ ಮಾಡಿದ್ದೇವೆ. 21 ಲಕ್ಷ ಜನರಿಗೆ ಬ್ಯಾಂಕ್ ಖಾತೆ ಇಲ್ಲ. ಎರಡು ಲಕ್ಷ ಜನರಿಗೆ ನಾವೇ ಬ್ಯಾಂಕ್ ಖಾತೆ ಮಾಡಿದ್ದೇವೆ. 14 ಲಕ್ಷ ಜನರಿಗೆ ಬ್ಯಾಂಕ್‌ ಖಾತೆ ಮಾಡಿಸುತ್ತಿದ್ದೇವೆ’ ಎಂದೂ ಹೇಳಿದರು.

ಇದನ್ನೂ ಓದಿ: H D kumarswamy: ಬಿಜೆಪಿ-ಜೆಡಿಎಸ್ ಮೈತ್ರಿ: ಮುಸ್ಲಿಮರೇ ನೀವಿನ್ನು ಎಚ್ಚರಿಕೆಯಿಂದಿರಿ ಎಂದ ಕುಮಾರಸ್ವಾಮಿ !! ಭಾರೀ ಕುತೂಹಲ ಕೆರಳಿಸಿದ ಮಾಜಿ ಸಿಎಂ ಹೇಳಿಕೆ

Leave A Reply

Your email address will not be published.