Manipal: Instagram ಪೋಸ್ಟ್ ನೋಡಿ ಬಾರ್‌ನಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ವಿದ್ಯಾರ್ಥಿಗಳನ್ನು ಬಂಧಿಸಿದ ಪೊಲೀಸರು

Udupi news Seeing Students Instagram Post Manipal Police Raid On Bar

Share the Article

Manipal: ಮಣಿಪಾಲ(Manipal)ವೃತ್ತ ನಿರೀಕ್ಷಕ ದೇವರಾಜ್ ನೇತೃತ್ವದ ತಂಡ ಉಡುಪಿ ತಾಲೂಕಿನ‌ ಮಣಿಪಾಲ ಸಮೀಪದ ವಿದ್ಯಾನಗರದಲ್ಲಿರುವ ಎಸ್ ಸ್ಟೇಸಿ ಬಾರ್ ಮೇಲೆ ದಾಳಿ ನಡೆಸಿದ್ದು, ಅನುಮತಿಯಿಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ವಶ ಪಡೆಯಲಾಗಿದೆ.

ಇನ್ಸ್ಟಾಗ್ರಾಮ್ ಪೋಸ್ಟ್ (Instagram) ಗಮನಿಸಿ ಬಾರ್ ಮೇಲೆ ದಾಳಿ ನಡೆಸಿದ ಮಣಿಪಾಲ ಪೊಲೀಸರು (Manipal Police) ಬಿರುಸಿನ ಕಾರ್ಯಾಚರಣೆ ನಡೆಸಿದ್ದಾರೆ. ಎಸ್ ಸ್ಟೇಸಿ ಬಾರ್ ಅನುಮತಿ ಇಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ ಮಣಿಪಾಲದ ವಿದ್ಯಾರ್ಥಿಗಳು (Manipal Students) ಪಾರ್ಟಿ ಮಾಡಿದ ಹಾಗೂ ಹುಕ್ಕಾ, ಮದ್ಯ ಸೇವನೆಯ ವಿಡಿಯೋವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಲಾಗಿತ್ತು. ವೀಕೆಂಡ್ ಬಂದೋಬಸ್ತ್ ನಲ್ಲಿದ್ದ ಪೊಲೀಸರು ಈ ವಿಚಾರ ಅರಿವಿಗೆ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಬಾರ್ ಮೇಲೆ ದಾಳಿ ನಡೆಸಿದ್ದಾರೆ.

ಮಣಿಪಾಲ ವೃತ್ತ ನಿರೀಕ್ಷಕ ದೇವರಾಜ್ ನೇತೃತ್ವದ ತಂಡ ಉಡುಪಿ ತಾಲೂಕಿನ‌ ಮಣಿಪಾಲ ಸಮೀಪದ ವಿದ್ಯಾನಗರದಲ್ಲಿರುವ ಎಸ್ ಸ್ಟೇಸಿ ಬಾರ್ ಮೇಲೆ ದಾಳಿ ನಡೆಸಿ, ಬಾರ್ ಡಿಜೆ ಪಾರ್ಟಿ ಮಾಡಲು ಅನುಮತಿ ನೀಡಿದ ಬಾರ್ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. ಇದರ ಜೊತೆಗೆ ಅನುಮತಿ ಇಲ್ಲದೆ ಪಾರ್ಟಿ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: GPS ತೋರಿತು ತಪ್ಪು ದಾರಿ – ನೀರುಪಾಲಾದ ವೈದ್ಯರ ಜೋಡಿ

Leave A Reply