Devaraj Arasu Education Loans 2023-24: ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಶಿಕ್ಷಣಕ್ಕಾಗಿ ಸಾಲ! 5 ರಿಂದ 20 ಲಕ್ಷವರೆಗೆ ಶೈಕ್ಷಣಿಕ ಸಾಲ!

Education news devaraj Arasu education loan 2023-24 details in Kannada

Devaraj Arasu Education Loans: ಅರಿವು ಎಜುಕೇಶನ್‌ ಲೋನ್‌ ಹಾಗೂ ಫಾರಿನ್‌ ಸ್ಟಡಿ ಎಜುಕೇಷನ್‌ ಲೋನ್‌ಗಳಿಗೆ( Devaraj Arasu Education Loans) ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ನೀಡಲಾಗುವ ಲೋನ್‌ ಇದಾಗಿದೆ. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-10-2023

ಹಿಂದುಳಿದ ವರ್ಗಗಳ ಎಲ್ಲಾ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ಸಿಇಟಿ ಮೂಲಕ ಆಯ್ಕೆಯಾಗಿ ವಿವಿಧ ವೃತ್ತಿಪರ ಹಾಗೂ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಈ ಸಾಲ ನೀಡಲಾಗುತ್ತದೆ. ದಂತವೈದ್ಯಕೀಯ, ಇಂಜಿನಿಯರಿಂಗ್‌, ವೈದ್ಯಕೀಯ ಮುಂತಾದ ಇಪ್ಪತ್ತೆಂಟು ಕೋರ್ಸ್‌ಗಳ ವ್ಯಾಸಂಗಕ್ಕೆ ವಾರ್ಷಿಕ ಒಂದು ಲಕ್ಷ ರೂಗಳಂತೆ ಕೋರ್ಸ್‌ನ ಅವಧಿಗೆ ಗರಿಷ್ಠ ನಾಲ್ಕು ಲಕ್ಷ ರೂ.ಗಳಿಂದ ಐದು ಲಕ್ಷ ರೂ. ಸಾಲ ನೀಡಲಾಗುವುದು. ಇದಕ್ಕೆ ಶೇ.2 ರ ಬಡ್ಡಿದರ ಇರುವುದು. ಹಾಗೆನೇ ವಾರ್ಷಿಕ ವರಮಾನ 3.50 ಲಕ್ಷಗಳ ಮಿತಿಯಲ್ಲಿ ಅಭ್ಯರ್ಥಿ ಕುಟುಂಬದವ ವಾರ್ಷಿಕ ವರಮಾನ ಇರಬೇಕು.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿ.ಹೆಚ್‌ಡಿ ಪೋಸ್ಟ್‌ ಡಾಕ್ಟ್ರಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿಂಗ್, ಟೆಕ್ನಾಲಜಿ, ಮ್ಯಾನೇಜ್ಮೆಂಟ್, ಕಾಮರ್ಸ್‌, ಸೈನ್ಸ್‌ ಮತ್ತು ಟೆಕ್ನಾಲಜಿ, ಅಗ್ರಿಕಲ್ಚರ್ ಅಲೈಡ್ ಸೈನ್ಸಸ್ / ಟೆಕ್ನಾಲಜಿ, ಮೆಡಿಸಿನ್, ಹ್ಯೂಮ್ಯಾನಿಟೀಸ್ ಮತ್ತು ಸೋಷಿಯಲ್ ಸೈನ್ಸ್‌) ಅಧ್ಯಯನಗಳಿಗೆ ಪ್ರವೇಶ ಪಡೆದ

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2A, 3A, 3B ಗೆ ಸೇರಿದವರಾಗಿರಬೇಕು. ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಇತರೆ ಅರ್ಹತೆ: ವಿದ್ಯಾರ್ಥಿಯು ಅರ್ಹತಾ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಹೆಚ್ಚಿನ ಅಂಕ ಹೊಂದಿರಬೇಕು. ಗರಿಷ್ಠ 8.00 ಲಕ್ಷ ರೂ ಕುಟುಂಬದ ವಾರ್ಷಿಕ ಆದಾಯ ಮೀರಿರಬಾರದು.
ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇಕಡ.60 ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು.
QS World Ranking 500 ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು.
ವಾರ್ಷಿಕ ಗರಿಷ್ಠ 10.00 ಲಕ್ಷ ಹಾಗೂ ಪೂರ್ಣ ಕೋರ್ಸ್‌ನ ಅವಧಿಗೆ ರೂ.20.00 ಲಕ್ಷಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು.

ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ ವಿಳಾಸ: www.dbcdc.karnataka.gov.in

ಇದನ್ನೂ ಓದಿ: Earthquake: ದೆಹಲಿಯಲ್ಲಿ ಪ್ರಬಲ ಭೂಕಂಪ, ಯುಪಿವರೆಗೆ ಭೂಮಿ ಕಂಪನ; ಮನೆ, ಕಚೇರಿಯಿಂದ ಹೊರಗೋಡಿ ಬಂದ ಜನ!

Leave A Reply

Your email address will not be published.