KSAT Typist Recruitment: 10th ಪಾಸಾದವರಿಗೆ ಉದ್ಯೋಗ, ವೇತನ ರೂ.21,400 ದಿಂದ 42,000ರವರೆಗೆ!! ಈ ಕೂಡಲೇ ಅರ್ಜಿ ಸಲ್ಲಿಸಿ!

Latest news intresting news jobs news KSAT Typist Recruitment 2023 notification

KSAT Typist Recruitment 2023: ಉದ್ಯೋಗ ಹುಡುಕುತ್ತಿರುವವರಿಗೆ ಉತ್ತಮ ಅವಕಾಶ ಒಂದು ಇಲ್ಲಿದೆ. ಪ್ರಸ್ತುತ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಕಚೇರಿಯಲ್ಲಿ ಉಳಿದ ಮೂಲ ವೃಂದದಲ್ಲಿ ಖಾಲಿ ಇರುವ 06 ಬೆರಳಚ್ಚುಗಾರರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 

ನೇಮಕಾತಿ ಪ್ರಾಧಿಕಾರ : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ
ಹುದ್ದೆ ಹೆಸರು : ಬೆರಳಚ್ಚುಗಾರರು (ಟೈಪಿಸ್ಟ್‌)
ಹುದ್ದೆಗಳ ಸಂಖ್ಯೆ : 06
ವೇತನ ಶ್ರೇಣಿ : ರೂ.21,400-42000.

ವಿದ್ಯಾರ್ಹತೆ:
ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಮತ್ತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆ ಪ್ರೌಢದರ್ಜೆ (ಸೀನಿಯರ್ ಗ್ರೇಡ್‌) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಟ ಕೆಳಗಿನ ವಯೋಮಾನ ಮೀರಿರಬಾರದು.
ಸಾಮಾನ್ಯ ವರ್ಗ – 35 ವರ್ಷ.
ಇತರೆ ಹಿಂದುಳಿದ ವರ್ಗಗಳು – 38 ವರ್ಷ.
ಎಸ್‌ಸಿ / ಎಸ್‌ಟಿ/ ಪ್ರ-1 ಅಭ್ಯರ್ಥಿಗಳು – 40 ವರ್ಷ.

ಆಯ್ಕೆ ವಿಧಾನ: ನಿಗಧಿತ ಶೈಕ್ಷಣಿಕ ಅರ್ಹತೆ ಅಂಕಗಳು ಹಾಗೂ ಸಂದರ್ಶನ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ ಆಯ್ಕೆ ಮಾಡಲಾಗುತ್ತದೆ. ಸಂದರ್ಶನ ಗರಿಷ್ಠ 50 ಅಂಕಗಳನ್ನು ಹೊಂದಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
Application Link ಕ್ಲಿಕ್ ಮಾಡಿ
ಓಪನ್‌ ಆಗುವ ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆದುಕೊಳ್ಳಿ. ನಂತರ ಭರ್ತಿ ಮಾಡಿದ ಅರ್ಜಿಯ ಜತೆಗೆ ಶುಲ್ಕ ರಶೀದಿ, ವಿದ್ಯಾರ್ಹತೆ, ಮೀಸಲಾತಿ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸಬೇಕಾದ ವಿಳಾಸ : ವಿಲೇಖನಾಧಿಕಾರಿ, ಬೆರಳಚ್ಚುಗಾರ ಹುದ್ದೆಗಳ ನೇಮಕಾತಿ ಪ್ರಾಧಿಕಾರ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-560009.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-10-2023 ರ ಸಂಜೆ 05-30 ರವರೆಗೆ. ಅರ್ಜಿಯನ್ನು ಅಂಚೆ ಅಥವಾ ನೇರವಾಗಿ ತಲುಪಿಸಬೇಕು. ಆನ್‌ಲೈನ್‌ ಮೂಲಕ ಅರ್ಜಿ ಹಾಕಲು ಅವಕಾಶ ಇಲ್ಲ.

 

ಇದನ್ನು ಓದಿ: Trending News: ಮನೆಗೆ ಬೆಂಕಿ ಬಿದ್ದಿದೆ ಎಂದು ಓಡೋಡಿ ಬಂದ ಅಗ್ನಿಶಾಮಕ ದಳ! ಬಂದು ನೋಡಿದಾಗ ಕಂಡದ್ದೇನು?

Leave A Reply

Your email address will not be published.