SDA Jobs 2023: ದಕ್ಷಿಣ ಕನ್ನಡ; ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಗೆ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ವೇತನ 21400-42,000 ರೂ

Job news Sri Subrahmanyeshwar mahavidyalaya sda jobs recruitment 2023

SDA Job 2023: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌. ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ಈ ಬ್ಯಾಕ್‌ಲಾಗ್‌ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಸುಬ್ರಹ್ಮಣ್ಯ, ಕಡಬ ತಾಲೂಕು, ದಕ್ಷಿಣ ಕನ್ನಡ, ಇದರ ಆಡಳಿತಕ್ಕೊಳಪಟ್ಟ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಅನುದಾನಿತ ವಿಭಾಗದಲ್ಲಿ ಕೆಲಸ ಖಾಲಿ ಇದೆ(SDA Job 2023). ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.

ಹುದ್ದೆ ಹೆಸರು : ದ್ವಿತೀಯ ದರ್ಜೆ ಸಹಾಯಕ
ಹುದ್ದೆಗಳ ಸಂಖ್ಯೆ : 02
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21-10-2023 ರ ಸಂಜೆ 04 ಗಂಟೆಯೊಳಗೆ.

ವೇತನ ಶ್ರೇಣಿ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21400-42,000 ರವರೆಗೆ ವೇತನ ದೊರಕಲಿದೆ.
ವಿದ್ಯಾರ್ಹತೆ : ಕರ್ನಾಟಕ ಪದವಿಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ / ತತ್ಸಮಾನ ಪರೀಕ್ಷೆ ಪಾಸ್‌ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಹುದ್ದೆಗಳ ವಿಂಗಡಣೆ : ಪರಿಶಿ‍ಷ್ಟ ಜಾತಿ-1, ಪರಿಶಿಷ್ಟ ಪಂಗಡ-1

ವಯೋಮಿತಿ: ಅರ್ಜಿಗಳನ್ನು ಸಲ್ಲಿಸುವ ಕೊನೆ ದಿನಾಂಕದಂದು ಕನಿಷ್ಠ 18 ವರ್ಷ, ಗರಿಷ್ಠ 40 ವರ್ಷ ಮೀರಿರಬಾರದು.

ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳನ್ನೊಳಗೊಂಡ ಅರ್ಜಿಯನ್ನು (ಬಯೋಡಾಟಾದೊಂದಿಗೆ) ವಿದ್ಯಾರ್ಹತೆ, ಜಾತಿ, ವಯಸ್ಸಿನ ಪ್ರಮಾಣ ಪತ್ರಗಳ ದೃಢೀಕರಣ ಪ್ರತಿಗಳನ್ನು ಕೆಳಗಿನ ವಿಳಾಸಕ್ಕೆ ತಲುಪಿಸಬೇಕು.
ವಿಳಾಸ : ಕಾರ್ಯದರ್ಶಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಸುಬ್ರಹ್ಮಣ್ಯ, ಕಡಬ ತಾಲೂಕು, ದಕ್ಷಿಣ ಕನ್ನಡ-574238.

ಮೇಲಿನ ವಿಳಾಸಕ್ಕೆ ನೊಂದಾಯಿತ ಅಂಚೆ ಮೂಲಕ ಅರ್ಜಿ ಕಳುಹಿಸಿಕೊಡಬೇಕು. ಒಂದು ಪ್ರತಿಯನ್ನು ನೇರವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಪ್ರಾದೇಶಿಕ ಕಚೇರಿ, ಮಂಗಳೂರು-575001, ಇವರಿಗೆ ತಲುಪಿಸಬೇಕು.

ಹೆಚ್ಚಿನ ಮಾಹಿತಿಗೆ ಸಂಪರ್ಕಕ್ಕಾಗಿ : 7349222300, 9538431672.

ಇದನ್ನೂ ಓದಿ: RSS ಕಾರ್ಯಕರ್ತ ರುದ್ರೇಶ್‌ ಹತ್ಯೆ ಆರೋಪಿಗೆ ಮದುವೆಯಲ್ಲಿ ಭಾಗಿಯಾಗಲು ಅನುಮತಿ ನೀಡಿದ ನ್ಯಾಯಾಲಯ!

Leave A Reply

Your email address will not be published.