Ration Card Update: ಪಡಿತರ ಚೀಟಿದಾರರೇ ಗಮನಿಸಿ : ನಿಮ್ಮ ಜಿಲ್ಲೆಗಳಲ್ಲಿ ನಡೆಯೋ `ರೇಷನ್ ಕಾರ್ಡ್’ ಹೆಸರು ಸೇರ್ಪಡೆ- ತಿದ್ದುಪಡಿ ಬಗ್ಗೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್

Karnataka news ration card update APL and BPL card correction status checking information

Ration Card Update: ರಾಜ್ಯ ಹಾಗೂ ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ಏಳಿಗೆಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಿ ಜನರಿಗೆ ಬೆಂಬಲವಾಗಿ ನಿಂತಿವೆ. ಇದೀಗ, ಪಡಿತರ ಚೀಟಿದಾರರಿಗೆ(Ration Card Holder)ಮುಖ್ಯ ಮಾಹಿತಿಯೊಂದು ಇಲ್ಲಿದೆ.

ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿ ತಿದ್ದುಪಡಿ ಮತ್ತು ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರಿಸಲು ಆಹಾರ ಇಲಾಖೆ ಮತ್ತೊಮ್ಮೆ ಅನುವು ಮಾಡಿಕೊಟ್ಟಿದೆ. ಹಾಗಿದ್ರೆ, ಪಡಿತರ ತಿದ್ದುಪಡಿಗೆ ಯಾವ ಜಿಲ್ಲೆಯಲ್ಲಿ ಯಾವಾಗ ಅವಕಾಶ ಎಂಬ ಮಾಹಿತಿ ಇಲ್ಲಿದೆ ನೋಡಿ. ಅಕ್ಟೋಬರ್ 5 ರಿಂದ 13 ರವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಿಪಿಎಲ್ ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಸಲು ಅನುವು ಮಾಡಿಕೊಡಲಾಗಿದೆ. ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ, ಹೆಸರು ಸೇರ್ಪಡೆ/ತೆಗೆಯುವ, ವಿಳಾಸ ಬದಲಾವಣೆ, ಸದಸ್ಯರ ಹೆಸರು ತಿದ್ದುಪಡಿಗೆ ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ ತಂತ್ರಾಂಶದಲ್ಲಿ ಅವಕಾಶ ನೀಡಲಾಗಿದೆ.ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆ ಮೂಲಕ ಈಗ ನಿಗದಿ ಮಾಡಿದ ಅವಧಿಯೊಳಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ.

# ಅ.11 ರಿಂದ 13 ರವರೆಗೆ ಈ ಜಿಲ್ಲೆಗಳಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅನುವು:
ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಗದಗ, ಕಾವೇರಿ, ಕೊಡಗು , ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಯಲ್ಲಿ ಅ.11 ರಿಂದ 13 ರವರೆಗೆ ಪಡಿತರ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ ಅನುವು ಮಾಡಿಕೊಡಲಾಗಿದೆ.

# ಅಕ್ಟೋಬರ್ 5 ರಿಂದ 7 ರವರೆಗೆ ಬೆಂಗಳೂರು ವಲಯದ ಜಿಲ್ಲೆಗಳಲ್ಲಿ ಅನುವು:
ಬೆಂಗಳೂರು ಒನ್, ಕರ್ನಾಟಕ ಒನ್ , ಗ್ರಾಮ ಒನ್ ಕೇಂದ್ರದಲ್ಲಿ ಜನರು BPL ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಸಬಹುದಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ ಅಕ್ಟೋಬರ್ 5 ರಿಂದ ಅಕ್ಟೋಬರ್ 7 ರವರೆಗೆ 3 ದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ತಿದ್ದುಪಡಿಗೆ ಅನುವು ಮಾಡಿಕೊಡಲಾಗಿದೆ.

# ಅ.11 ರಿಂದ 13 ರವರೆಗೆ ಈ ಜಿಲ್ಲೆಗಳಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ:
ಬೀದರ್, ಚಿಕ್ಕಬಳ್ಳಾಪುರ, ಬಳ್ಳಾರಿ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ಶಿವಮೊಗ್ಗ, ರಾಮನಗರ, ಯಾದಗಿರಿ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ

ಇದನ್ನೂ ಓದಿ: Shocking News: ಎಳೆಯ ಎಮ್ಮೆ ಕರುವಿನ ಮೇಲೆ ಯುವ ಕಾಮುಕನ ಅಟ್ಟಹಾಸ !!

Leave A Reply

Your email address will not be published.