Punith kerehalli: ಬಸ್ಸಿಗೆ ಬೆಂಕಿ ಹಾಕಿ, ವಿಧಾನಸೌಧಕ್ಕೆ ಕಲೆಸಿತೀನಿ !! ಬಿಡುಗಡೆಯ ಬೆನ್ನಲ್ಲೇ ಪುನೀತ್ ಕೆರೆಹಳ್ಳಿ ಮೇಲೆ ಮತ್ತೆ ದೂರು ದಾಖಲಿಸಿದ ಕಾಂಗ್ರೆಸ್ !!
Congress filed a complaint against Puneeth Kerehalli again
Punith kerehalli: ಕೆಲವು ವಿವಾದಗಳ ಮೂಲಕ ಜೈಲು ಪಾಲಾಗಿದ್ದಂತಹ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ(Punith kerehalli)ಅವರು ಇತ್ತೀಚಿಗಷ್ಟೇ ಬಿಡುಗಡೆಯಾಗಿದ್ದರು. ಕೋರ್ಟ್ ಇವರನ್ನು ಖುಲಾಸೆಗೊಳಿಸಿತ್ತು. ಆದರೀಗ ಈ ಬೆನ್ನಲ್ಲೇ ಮತ್ತೆ ಪುನೀತ್ ಕರೆಹಳ್ಳಿ ಅವರ ಮೇಲೆ ಕಾಂಗ್ರೆಸ್ ದೂರು ದಾಖಲು ಮಾಡಿದೆ.
ಹೌದು, ʼರಾಜ್ಯ ಸರಕಾರ ನನ್ನ ಮನವಿ ಸ್ವೀಕರಿಸದಿದ್ದರೆ ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆʼ ಎಂದು ಹೇಳಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯ ವೀಡಿಯೊ ಒಂದು ಹರಿದಾಡಿದ್ದು, ಈ ಬಗ್ಗೆ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಮಾಡಿದೆ
ಅಂದಹಾಗೆ ತನ್ನನ್ನು ಸುಳ್ಳು ಆರೋಪದ ಮೇರೆಗೆ ಸರ್ಕಾರ ಅರೆಸ್ಟ್ ಮಾಡಿಸಿ ಜೈಲಿಗೆ ದಬ್ಬಿತ್ತು. ಹೀಗಾಗಿ ರಾಜ್ಯ ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಈ ವೇಳೆ ಪುನೀತ್ ಕೆರೆಹಳ್ಳಿಯವರು ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆಗ ತನ್ನ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದ ಪುತ್ತೂರು ಪುತ್ತಿಲ ಪರಿವಾರದ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರ ನಿಯೋಗದೊಂದಿಗೆ ಮಾತನಾಡುತ್ತಿದ್ದ ಪುನೀತ್, ”ನಾನು ನಿಮಗೆ ನಿಮ್ಮ ತಮ್ಮನಾಗಿ ಬೇಕು ಅಂದ್ರೆ, ಕಾಂಗ್ರೆಸ್ ಸರಕಾರದ ಯಾವುದಾದರೂ ಪ್ರತಿನಿಧಿ ನನ್ನನ್ನು ಭೇಟಿಯಾಗಿ, ನನ್ನ ಮನವಿಯನ್ನು ಸೀಕರಿಸಬೇಕು. ಅವರು ಬರದೇ ಇದ್ದರೆ ಬಸ್ಸಿಗೆ ಬೆಂಕಿ ಹಾಕುವ… ಪೊಲೀಸರನ್ನು ಜಾಗ ಬಿಡಲಿಕ್ಕೆ ಹೇಳಿ, ನಾನು ಹೋಗ್ತೇನೆ. ನನ್ನನ್ನು ಇಲ್ಲಿಂದ ಬಿಡುಗಡೆಗೊಳಿಸಿದರೆ ಮತ್ತೆ ಸತ್ಯಾಗ್ರಹ ಏಕೆ ಮಾಡಲಿ? ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಪುನೀತ್ ಕೆರೆಹಳ್ಳಿ ಹೇಳಿರುವ ವೀಡಿಯೊ ವೈರಲ್ ಆಗಿದೆ.
ವೈರಲ್ ವೀಡಿಯೊದಲ್ಲಿ ಏನಿದೆ?
ರಾಜ್ಯ ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ತನ್ನ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದ ಪುತ್ತೂರು ಪುತ್ತಿಲ ಪರಿವಾರದ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರ ನಿಯೋಗದೊಂದಿಗೆ ಮಾತನಾಡುತ್ತಿದ್ದ ಪುನೀತ್, ” ನಾನು ನಿಮಗೆ ನಿಮ್ಮ ತಮ್ಮನಾಗಿ ಬೇಕು ಅಂದ್ರೆ, ಕಾಂಗ್ರೆಸ್ ಸರಕಾರದ ಯಾವುದಾದರೂ ಪ್ರತಿನಿಧಿ ನನ್ನನ್ನು ಭೇಟಿಯಾಗಿ, ನನ್ನ ಮನವಿಯನ್ನು ಸೀಕರಿಸಬೇಕು. ಅವರು ಬರದೇ ಇದ್ದರೆ ಬಸ್ಸಿಗೆ ಬೆಂಕಿ ಹಾಕುವ… ಪೊಲೀಸರನ್ನು ಜಾಗ ಬಿಡಲಿಕ್ಕೆ ಹೇಳಿ, ನಾನು ಹೋಸ್ತೇನೆ. ನನ್ನನ್ನು ಇಲ್ಲಿಂದ ಬಿಡುಗಡೆಗೊಳಿಸಿದರೆ ಮತ್ತೆ ಸತ್ಯಾಗ್ರಹ ಏಕೆ ಮಾಡಲಿ? ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಹೇಳಿರುವುದು ವೈರಲ್ ವೀಡಿಯೊದಲ್ಲಿ ದಾಖಲಾಗಿದೆ.
ದೂರಿನಲ್ಲಿ ಏನಿದೆ?
“ಹಿಂದೂ ಸಮಾಜದ ನಾಯಕನೆಂದು ಹೇಳಿಕೊಳ್ಳುವ ಪುನೀತ್ ಕೆರೆಹಳ್ಳಿ ಈಗಾಗಲೇ ಅನೇಕ ಸಮಾಜ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿರುವ ಮಾಹಿತಿ ಇದೆ. ಈತ ಈಗ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದಾನೆ. ಈತನಿಗೆ ಅನೇಕ ಹಿಂದುತ್ವ ಸಂಘಟನೆಗಳ ನಾಯಕರು ಹಾಗೂ ಬಿಜೆಪಿ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದಾರೆ. ಈತ ಅವರ ಮುಂದೆ ಬಹಿರಂಗವಾಗಿ ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಎಂಬುವ ಪದ ಬಳಿಸಿರುವುದೇ ಅತ್ಯಂತ ಕಾನೂನು ವಿರೋಧಿ ಕೃತ್ಯ. ಆತನ ಹೇಳಿಕೆಯ ಹಿನ್ನೆಲೆಯಲ್ಲಿ ಈ ಕೂಡಲೇ ಪ್ರಕರಣ ದಾಖಲಿಸಿಕೊಂಡು ಅವನಿಗೆ ಬೆಂಬಲ ವ್ಯಕ್ತಪಡಿಸಿರುವ ವ್ಯಕ್ತಿಗಳ ವಿರುದ್ಧವೂ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.