7th pay commission: ರಾಜ್ಯ ಸರ್ಕಾರಿ ನೌಕರರಿಗೆ ಬೊಂಬಾಟ್ ಸುದ್ದಿ- 7 ನೇ ವೇತನ ಆಯೋಗದ ಕುರಿತು ಮಹತ್ವದ ಸುದ್ದಿ ಕೊಟ್ಟ ಸಿಎಂ !!

Good news for state government employees CM Siddaramaiah give important information about 7th pay commission

7th pay commission: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡುವುದು ಬಹುತೇಕ ಖಚಿತವಾಗಿದೆ. ಸದ್ಯದಲ್ಲೇ ಸರ್ಕಾರ ಏಳನೇ ವೇತನ ಆಯೋಗವನ್ನು (7th Pay Commission) ರಚಿಸಿ ಆದೇಶ ಹೊರಡಿಸಲಿದೆ ಎಂಬ ಸುಳಿವನ್ನು ಸಿಎಂ ಸಿದ್ದರಾಮಯ್ಯನವರು ನೀಡಿದ್ದಾರೆ.

ಹೌದು, ಚಿತ್ರದುರ್ಗ ನಗರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರಿ ನೌಕರರು ಕಾಯುತ್ತಿರುವ 7 ನೇ ವೇತನ ಆಯೋಗ ಜಾರಿ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು, ಈ ಬಗ್ಗೆ 7 ನೇ ವೇತನ ಆಯೋಗದ ಅಧ್ಯಕ್ಷರೊಂದಿಗೆ ಮಾತನಾಡಿದ್ದು, ವರದಿ ಸಲ್ಲಿಕೆಯಾದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಅಂದಹಾಗೆ ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಏಳನೇ ವೇತನ ಆಯೋಗ ರಚಿಸಬೇಕೆಂದು ಸರ್ಕಾರಿ ನೌಕರರ ಸಂಘ ಒತ್ತಾಯಿಸುತ್ತಲೇ ಬಂದಿತ್ತು. ಕಳೆದ ಬಿಜೆಪಿ ಸರ್ಕಾರ ಕೂಡ ಆಯೋಗ ರಚಿಸುಸುವುದಾಗಿ ಕೇವಲ ಭರವಸೆ ಮಾತ್ರ ನೀಡಿತ್ತು. ಆದರೆ ಆಗಲಿಲ್ಲ. ಇದೀಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಯೋಗ ರಚನೆ ಮಾಡಬಹುದೆಂದು ಸರ್ಕಾರಿ ನೌಕರರು ಕಾತರರಾಗಿದ್ದಾರೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಇದರ ಸುಳಿವು ನೀಡಿರುವುದು ಸರ್ಕಾರಿ ನೌಕರರಿಗೆ ಸಂತಸ ಉಂಟುಮಾಡಿದೆ.

ಇನ್ನು ಈ ಆಯೋಗ ರಟನೆಯಾದರೆ ವೇತನ, ವಿವಿಧ ಭತ್ಯೆಗಳು ಹಾಗೂ ನಿವೃತ್ತಿ ಸೌಲಭ್ಯಗಳನ್ನು ಪರಿಶೀಲಿಸಿ, ಕಾರ್ಯಸಾಧುವಾದ ನೂತನ ವೇತನ ಶ್ರೇಣಿಯನ್ನು ಶಿಫಾರಸು ಮಾಡುವುದು, ಕೇಂದ್ರದ ವೇತನ ಶ್ರೇಣಿಯನ್ನು ರಾಜ್ಯದಲ್ಲಿ ಅಳವಡಿಸುವ ಕುರಿತು ಪರಿಶೀಲಿಸುವುದು, ರಾಜ್ಯ ಸರ್ಕಾರವು ತುಟ್ಟಿ ಭತ್ಯೆ ನೀಡಲು ಅನುಸರಿಸಬೇಕಾದ ಸೂತ್ರವನ್ನು ರೂಪಿಸುವುದು, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ಪ್ರವಾಸ ರಜೆ ಸೌಲಭ್ಯ, ವೈದ್ಯಕೀಯ ಸೌಲಭ್ಯಗಳನ್ನು ನಿಗದಿ ಪಡಿಸಲು ಹಾಗೂ ಸುಧಾರಣೆ ತರಲು ಸಲಹೆ ನೀಡುವುದು, ನಿವೃತ್ತಿ ವೇತನ ಮತ್ತು ಸಂಬಂಧಿತ ಸೌಲಭ್ಯಗಳ ಪರಿಷ್ಕರಣೆ ಮೊದಲಾದ ಅಂಶಗಳ ಕುರಿತು ವೇತನ ಆಯೋಗವು ಪರಿಶೀಲಿಸಿ ಶಿಫಾರಸು ನೀಡಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:  Ramalinga reddy: ಬೆಳ್ಳಂಬೆಳಗ್ಗೆಯೇ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್- ಹೊಸ ಯೋಜನೆ ಜಾರಿಗೆ ಮುಂದಾದ ಸರ್ಕಾರ

Leave A Reply

Your email address will not be published.