Assembly Elections 2023 Date: ಪಂಚರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ದಿನ ನಿಗದಿ!!!

ಚುನಾವಣಾ ಆಯೋಗವು ಐದು ರಾಜ್ಯಗಳ ಚುನಾವಣಾ ದಿನಾಂಕಗಳನ್ನು ಸೋಮವಾರ (ಅಕ್ಟೋಬರ್ 9) ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ದೆಹಲಿಯ ಆಲ್ ಇಂಡಿಯಾ ರೇಡಿಯೋದ ರಂಗಭವನ ಸಭಾಂಗಣದಲ್ಲಿ ಚುನಾವಣಾ ಆಯೋಗವು ದಿನಾಂಕಗಳನ್ನು ಪ್ರಕಟಿಸಲಿದೆ. ಈ ವೇಳೆ ಮುಖ್ಯ ಚುನಾವಣಾ ಆಯುಕ್ತರು ಸೇರಿದಂತೆ ಚುನಾವಣಾ ಆಯೋಗದ ಪ್ರಮುಖ ಅಧಿಕಾರಿಗಳು ಉಪಸ್ಥಿತರಿರುವರು.

2024ರಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಎಲ್ಲಾ ಐದು ರಾಜ್ಯಗಳಲ್ಲಿ ನವೆಂಬರ್ ಎರಡನೇ ವಾರದಿಂದ ಡಿಸೆಂಬರ್ ಮೊದಲ ವಾರದ ನಡುವೆ ವಿಧಾನಸಭಾ ಚುನಾವಣೆ ನಡೆಯುವ ಎಲ್ಲಾ ಸಾಧ್ಯತೆಗಳಿವೆ. ರಾಜಸ್ಥಾನ, ಮಧ್ಯಪ್ರದೇಶ, ಮಿಜೋರಾಂ ಮತ್ತು ತೆಲಂಗಾಣದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. 2018 ರಲ್ಲೂ ಅದೇ ಸಂಭವಿಸಿದೆ. ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಸಬಹುದು. ಆದರೆ, ಯಾವ ರಾಜ್ಯದಲ್ಲಿ ಯಾವಾಗ ಚುನಾವಣೆ ನಡೆಯಲಿದೆ ಎಂಬುದನ್ನು ಸೋಮವಾರ (ಇಂದು) ಚುನಾವಣಾ ಆಯೋಗ ಸ್ಪಷ್ಟಪಡಿಸಲಿದೆ.

ರಾಜಸ್ಥಾನದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯು ಕಾಂಗ್ರೆಸ್ ವರ್ಸಸ್ ಬಿಜೆಪಿ ಮಾತ್ರ. ಇದಲ್ಲದೇ ಕೆಲವು ಸ್ಥಾನಗಳ ಮೇಲೆ ಬಿಎಸ್‌ಪಿ ಮತ್ತು ಇತರ ಪಕ್ಷಗಳ ಪ್ರಭಾವವನ್ನು ಕಾಣಬಹುದು. ಹೆಚ್ಚು ಕಡಿಮೆ ಇದೇ ಪರಿಸ್ಥಿತಿ ಮಧ್ಯಪ್ರದೇಶದಲ್ಲೂ ಮುಂದುವರಿಯಲಿದೆ. ಛತ್ತೀಸ್‌ಗಢದಲ್ಲಿಯೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹಣಾಹಣಿ ಇದೆ. ತೆಲಂಗಾಣದಲ್ಲಿ ಬಿಆರ್‌ಎಸ್, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಮಿಜೋರಾಂನಲ್ಲಿ ಕಾಂಗ್ರೆಸ್ ಮಿಜೋ ನ್ಯಾಷನಲ್ ಫ್ರಂಟ್ ಮತ್ತು ಜೋರಾಮ್ ಪೀಪಲ್ಸ್ ಮೂವ್‌ಮೆಂಟ್‌ನೊಂದಿಗೆ ಸ್ಪರ್ಧಿಸಲಿದೆ.

1 Comment
  1. MichaelLiemo says

    ventolin: Ventolin inhaler price – purchase ventolin inhaler online
    can you buy ventolin over the counter nz

Leave A Reply

Your email address will not be published.