School timing : ಶಾಲಾ ಸಮಯದ ಕುರಿತು ಶಿಕ್ಷಣ ಇಲಾಖೆ ನೀಡಿದೆ ಮಹತ್ವದ ಮಾಹಿತಿ!!!

Education news Karnataka education department information about change school timings in Bengaluru

School Timing: ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸುವ ಸಲುವಾಗಿ ಶಾಲೆಗಳು ಮತ್ತು ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆಗೆ ಹೈಕೋರ್ಟ್‌ ಸರಕಾರಕ್ಕೆ ಸಲಹೆ ನೀಡಿತ್ತು. ಈ ನಿಟ್ಟಿನಲ್ಲಿ ಎಲ್ಲ ಸರಕಾರಿ ಮತ್ತು ಖಾಸಗಿ ಶಾಲೆಗಳು, ಶಾಲಾ ಬಸ್‌ ಆಪರೇಟರ್‌ಗಳು, ಪೋಷಕರ ಸಂಘಗಳೂ ಸೇರಿದಂತೆ ಸಂಬಂಧಿಸಿದ ಎಲ್ಲರ ಸಭೆ ಕರೆದು ವಾಹನ ದಟ್ಟಣೆ ತಗ್ಗಿಸಲು ಶಾಲಾ ಸಮಯ ಬದಲಾವಣೆ ಮಾಡುವ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬಹುದು ಎಂದು ಹೈಕೋರ್ಟ್‌ ಹೇಳಿತ್ತು. ಇದೀಗ ಸೋಮವಾರ ಬೆಂಗಳೂರಿನ ನೃಪತುಂಗ ರಸ್ತೆಯ ಸಮಗ್ರ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆದು ಅದರಲ್ಲಿ ಶಾಲಾ ಸಮಯ ಬದಲಾವಣೆ ಬೇಡ ಎಂಬ ನಿರ್ಧಾರಕ್ಕೆ ಬರಲಾಗಿದೆ.

ಹೌದು, ಬೆಂಗಳೂರು ನಗರದ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ತಪ್ಪಿಸಲು ಶಾಲೆಗಳ ಸಮಯ (School timing) ಬದಲಾವಣೆ ಸಾಧ್ಯವೇ ಎಂಬ ಹೈಕೋರ್ಟ್‌ (karnataka high Court) ಸಲಹೆಯ ಬಗ್ಗೆ ಚರ್ಚೆ ನಡೆಸಿದ ಶಿಕ್ಷಣ ಇಲಾಖೆ (Education Department) ಸಮಯ ಬದಲಾವಣೆಯ ಅವಶ್ಯಕತೆ ಇಲ್ಲ ಎಂದು ಅಭಿಪ್ರಾಯಪಟ್ಟಿದೆ. ಎಲ್ಲ ಆಯಾಮಗಳಲ್ಲಿ ಚರ್ಚೆ ನಡೆಸಿ ಸಮಯ ಬದಲಾವಣೆ ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ. ಸದ್ಯ ಸಭೆಯ ಅಭಿಪ್ರಾಯವನ್ನು ಹೈಕೋರ್ಟ್‌ಗೆ ತಿಳಿಸಬೇಕಾಗಿದೆ. ಬಳಿಕ ಅಂತಿಮ ತೀರ್ಮಾನವನ್ನು ಹೈಕೋರ್ಟ್‌ ತೆಗೆದುಕೊಳ್ಳಬೇಕಾಗಿದೆ.

ಸಭೆಯ ಬಳಿಕ ಮಾತನಾಡಿದ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರು, ಶಾಲಾ ಸಮಯದ ಬದಲಾವಣೆ ಬಗ್ಗೆ ಅಭಿಪ್ರಾಯ ಪಡೆದಿದ್ದೇವೆ. ಎಲ್ಲರ ಅಭಿಪ್ರಾಯದ ವರದಿಯನ್ನು ಮಂಗಳವಾರ ಹೈಕೋರ್ಟ್‌ಗೆ ನೀಡುತ್ತೇವೆ. ಎಲ್ಲರ ಸಲಹೆಗಳು ಕೂಡ ಒಂದೇ ರೀತಿಯಾಗಿವೆ. ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜೊತೆಗೂ ಚರ್ಚಿಸಿದ್ದೇವೆ. ಕೋರ್ಟ್ ಏನೂ ಆದೇಶ ಕೊಡುತ್ತದೋ ಅದನ್ನು ಅನುಸರಿಸುತ್ತೇವೆ ಎಂದು ಹೇಳಿದರು. ಮತ್ತು ಹೈಕೋರ್ಟ್ ಆದೇಶದಂತೆ ಸಭೆ ನಡೆಸಿದ್ದೇವೆ. ಮಕ್ಕಳ ಹಿತದೃಷ್ಟಿಯಿಂದ ಶಾಲಾ ಸಮಯ ಬದಲಾಯಿಸುವುದು ಬೇಡ ಎಂದು ತೀರ್ಮಾನಿಸಿದ್ದೇವೆ. ಸ್ಕೂಲ್ ಬಸ್, ಶಾಲಾ ವಾಹನಗಳ ಸಮಸ್ಯೆ ಬಗ್ಗೆ ಸಲಹೆ ಕೊಟ್ಟಿದ್ದೇವೆ ಎಂದು ಕ್ಯಾಮ್ಸ್‌ ಅಧ್ಯಕ್ಷ ಶಶಿಕುಮಾರ್‌ ತಿಳಿಸಿದರು.

ಒಂದು ವೇಳೆ ಶಾಲಾ ವಾಹನಗಳಿಂದಲೇ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ ಎಂಬ ಅಭಿಪ್ರಾಯವಿದ್ದರೆ ಸಂಚಾರಕ್ಕೆ ಬಿಎಂಟಿಸಿ ಬಳಕೆ ಬಗ್ಗೆ ಚಿಂತನೆ ನಡೆಸಬಹುದು ಎಂಬ ಸಲಹೆಯನ್ನು ಸಂಘಟನೆಗಳು ನೀಡಿವೆ. ಯಾವ ಯಾವ ಭಾಗದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುತ್ತದೆ. ಅವುಗಳನ್ನು ಹೇಗೆ ನಿಯಂತ್ರಿಸಬಹುದು ಎನ್ನುವ ಬಗ್ಗೆ ಚರ್ಚೆ ನಡೆಸಬಹುದು ಎಂದು ಅಭಿಪ್ರಾಯಪಡಲಾಗಿದೆ.

ಸದ್ಯ ಬೆಂಗಳೂರು ನಗರ ಜಿಲ್ಲೆಯ ಬಿಇಒಗಳು ಈಗಿರುವ ಬೆಳಗ್ಗೆ 9.30ರಿಂದ 4.00 ಗಂಟೆಯವರೆಗಿನ ಸಮಯವೇ ಸರಿಯಾಗಿದೆ ಎಂದು ಅಭಿಪ್ರಯಾಪಟ್ಟಿದ್ದಾರೆ. ಬೆಳಗ್ಗೆ 8 ಗಂಟೆಗೆ ಮಾಡಿದ್ರೆ ಮಕ್ಕಳಿಗೆ, ಪೋಷಕರಿಗೆ ಕಷ್ಟ ಆಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Banned firecrackers: ದೀಪಾವಳಿಗೆ ಪಟಾಕಿ ಬ್ಯಾನ್‌- ಸರಕಾರದಿಂದ ಚಿಂತನೆ!!!

Leave A Reply

Your email address will not be published.