HD Kumaraswamy: ಕುಮಾರಸ್ವಾಮಿರವರಿಂದ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ಘೋಷಣೆ !!

Karnataka politics news Former cm hd kumaraswamy given statement regarding electricity load shedding latest news

HD Kumaraswamy On Load Shedding : ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ(Hd kumaraswamy) ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಶೀಘ್ರವೇ ಪರಿಪೂರ್ಣ ಆರನೇ ಗ್ಯಾರಂಟಿಯನ್ನು ನೀಡಲಿದ್ದು, ರಾಜ್ಯದಲ್ಲಿ ಹೆಚ್ಚುತ್ತಿರುವ ಅನಧಿಕೃತ ಲೋಡ್‌ ಶೆಡ್ಡಿಂಗ್‌ (HD Kumaraswamy On Load Shedding)ಕುರಿತು ಮಾತಾಡಿರುವ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಶೀಘ್ರವೇ ಪರಿಪೂರ್ಣ ಆರನೇ ಗ್ಯಾರಂಟಿಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ. ಅದರ ಹೆಸರು ಕತ್ತಲೆ ಭಾಗ್ಯ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹೆಚ್ಚುತ್ತಿರುವ ಅನಧಿಕೃತ ಲೋಡ್‌ ಶೆಡ್ಡಿಂಗ್‌ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಕುಮಾರಸ್ವಾಮಿಯವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ. ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿಯನ್ನು ನೀಡಲು ಸಿದ್ಧತೆ ನಡೆಸುತ್ತಿದೆ. ಅದುವೇ ಕತ್ತಲೆ ಭಾಗ್ಯ, ಡಿಸೆಂಬರ್ ತಿಂಗಳ ವೇಳೆಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಗ್ಯಾರಂಟಿ. 2024ರ ಜನವರಿ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ತಿಲಾಂಜಲಿ ಹೇಳಿ ಕಗ್ಗತ್ತಲ ಕರ್ನಾಟಕದ ಉದಯಕ್ಕೆ ನಾಂದಿ ಹಾಡುವುದು ಗ್ಯಾರಂಟಿ. ಇದು ಸತ್ಯ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸರ್ಕಾರ ರಾಜ್ಯದ ಉದ್ದಗಲಕ್ಕೂ ಅನಧಿಕೃತ ಲೋಡ್ ಶೆಡ್ಡಿಂಗ್ ಹೇರಿ ದಿನಕ್ಕೆ 2 ಗಂಟೆ ವಿದ್ಯುತ್ತಿಗೂ ದಿಕ್ಕಿಲ್ಲದ ದುಸ್ಥಿತಿ ನಿರ್ಮಾಣವಾಗಿದ್ದು, ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು ಎಂದು ವ್ಯಂಗ್ಯವಾಡಿದ್ದಾರೆ.ಅಡ್ಡದಾರಿಯಲ್ಲಿ ಅಧಿಕಾರ ಪಡೆಯಲು 5 ಗ್ಯಾರಂಟಿ ಕೊಟ್ಟ ಕಾಂಗ್ರೆಸ್, 6ನೇ ಗ್ಯಾರಂಟಿ ಕತ್ತಲೆ ಭಾಗ್ಯವನ್ನು ನವರಾತ್ರಿಗೆ ನೀಡಲಿದ್ದು, ಕತ್ತಲೆಭಾಗ್ಯ ಕರುಣಿಸುವ ಮುನ್ನ ಜನತೆಗೆ ಸತ್ಯವನ್ನೇ ಹೇಳಲಿ. ಬೇಡ ಎಂದವರು ಯಾರು? ಕೂಡಲೇ ವಿದ್ಯುತ್ ದುಸ್ಥಿತಿಯ ಬಗ್ಗೆ ಸರಕಾರ ಶ್ವೇತಪತ್ರ ಹೊರಡಿಸಬೇಕು. ಇದು ನನ್ನ ಆಗ್ರಹ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಡಿಜೆ ಸೌಂಡ್‌ಗೆ ಎದ್ದು, ಬಿದ್ದು ಸ್ಟೆಪ್ ಹಾಕಿದ ಯುವಕ – ಸ್ಥಳದಲ್ಲೇ ಕುಸಿದು ಹೃದಯಾಘಾತಕ್ಕೆ ಬಲಿ

Leave A Reply

Your email address will not be published.