Nalin Kumar Kateel: ಇಸ್ರೇಲ್- ಪ್ಯಾಲೆಸ್ತೇನ್ ಯುದ್ದ- ಕರಾವಳಿಗರಿಗೆ ಮಹತ್ವದ ಸಂದೇಶ ರವಾನಿಸಿದ ನಳಿನ್ ಕುಮಾರ್ ಕಟೀಲ್

National news nalin Kumar kateel assures safety measures for dakshina Kannada people in Israel latest news

Nalin Kumar Kateel: ಮೋದಿ ಸರ್ಕಾರ ಯುದ್ಧದ ಪರಿಸ್ಥಿತಿ ಇದ್ದಾಗ ಇಸ್ರೇಲ್‌ನಿಂದ ಕರಾವಳಿಗರನ್ನ ಸುರಕ್ಷಿತವಾಗಿ ಕರೆತರುತ್ತೆ ಎಂದು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ಹೇಳಿಕೆ ಒಂದನ್ನು ನೀಡಿದ್ದಾರೆ.

ಈಗಾಗಲೇ ಇಸ್ರೇಲ್‌ನಲ್ಲಿ ಐದು ಸಾವಿರ ದಕ್ಷಿಣ ಕನ್ನಡ ಜಿಲ್ಲೆಯ ಜನರು ಇದ್ದಾರೆಂಬ ಮಾಹಿತಿ ಇದೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ. ಯಾರಿಗೂ ಅಪಾಯ ಆಗದಂತೆ ಅವರಿಗೆ ರಕ್ಷಣೆ ಒದಗಿಸ್ತೇವೆ. ಅವರನ್ನು ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಸರ್ಕಾರ ಮಾಡಲಿದೆ ಎಂದು ದ.ಕ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮೋದಿ ಸರ್ಕಾರ ಇಸ್ರೇಲ್‌ನಿಂದ ಕರಾವಳಿಗರನ್ನ ಸುರಕ್ಷಿತವಾಗಿ ಕರೆತರುತ್ತೆ. ಈ ಕುರಿತು ಕೇಂದ್ರ ಸಚಿವ ಮುರಳೀಧರನ್ ಅವರ ಜೊತೆಗೂ ನಾನು ಮಾತನಾಡಿದ್ದೇನೆ. ದ.ಕ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಇಸ್ರೇಲ್ ವಾಸಿಗಳ ಪೂರ್ಣ ಮಾಹಿತಿ ತರಿಸಿಕೊಳ್ಳಲು ಸೂಚಿಸ್ತೇನೆ. ಯುದ್ಧದ ಪರಿಸ್ಥಿತಿ ಇದ್ದಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತವೆ. ಈಗಲೂ ಇಸ್ರೇಲ್‌ನಲ್ಲಿದ್ದವರು ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದೆ ಎಂದು ಹೇಳಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧ ಆದಾಗಲೂ ಇಂಥದ್ದೇ ಪರಿಸ್ಥಿತಿ ಇತ್ತು. ಆಗಲೂ ಅವರ ಮನೆಗಳಿಗೆ ತೆರಳಿ ಸಮಾಧಾನ ಹೇಳಿದ್ದೆವು. ಮೋದಿ ಸರ್ಕಾರ ಆಗಲೂ ಅಲ್ಲಿದ್ದ ಭಾರತೀಯರ ರಕ್ಷಣೆ ‌ಮಾಡಿತ್ತು. ಈಗಲೂ ನಾನು ಎಂಬೆಸ್ಸಿ ಜೊತೆಗೆ ಸಂಪರ್ಕದಲ್ಲಿ ಇದ್ದೇನೆ. ಯಾರೂ ಭಯ ಪಡೋ ಅಗತ್ಯ ಇಲ್ಲ, ಏನೇ ಆತಂಕ ಇದ್ದರೂ ನನ್ನನ್ನ ನೇರವಾಗಿ ಸಂಪರ್ಕಿಸಿ ಎಂದು ನಳಿನ್ ಕುಮಾರ್ ಕಟೀಲ್ ಕರಾವಳಿಯ ಜನತೆಗೆ ಭರವಸೆ ನೀಡಿದ್ದಾರೆ .

ಇದನ್ನೂ ಓದಿ: ಹೆಂಡತಿ ಜೊತೆ ಜಗಳವಾದ್ರೆ ತಕ್ಷಣ ಈ ಟ್ರಿಕ್ಸ್ ಯೂಸ್ ಮಾಡಿ, ಆಮೇಲೆ ಆಗೋದೇ ಬೇರೆ !

Leave A Reply

Your email address will not be published.