Viral news: ಬೈಕ್ ಏರಿದ ಕೂಡಲೇ ಸರಸದಲ್ಲಿ ಮೈಮರೆತ ಹುಡುಗ- ಹುಡುಗಿ !! ಮುಂದೆ ಕಾದಿತ್ತು ಊಹಿಸದ ಶಾಕ್
Social media couple video goes Viral
Viral News: ವಾಹನ ಚಾಲನೆ ಕುರಿತು ಸರ್ಕಾರ ಅದೆಷ್ಟೇ ಕ್ರಮ ಕೈಗೊಂಡರು ಕೂಡ ಯುವಜನತೆ ಮಾತ್ರ ತಮ್ಮ ಹುಚ್ಚಾಟವನ್ನೂ ನಿಲ್ಲಿಸದೇ ಸಾವಿನ ದವಡೆಗೆ ಸಿಲುಕಿದ ಅನೇಕ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಸಾಮಾನ್ಯವಾಗಿ ಹುಡುಗ – ಹುಡುಗಿಯರು ರೊಮ್ಯಾನ್ಸ್ ಮಾಡಿಕೊಂಡು ರೂಲ್ಸ್ ಬ್ರೇಕ್ ಮಾಡುತ್ತಾ ಓಡಾಡುವ ಅದೆಷ್ಟೋ ವೀಡಿಯೋಗಳು ವೈರಲ್ ಆಗುತ್ತಿರುತ್ತವೆ. ಈ ನಡುವೆ, ಜೋಡಿಯೊಂದು ಚಲಿಸುತ್ತಿರುವ ಬೈಕ್ ಮೇಲೆ ಕುಳಿತು ಅಸಭ್ಯ ವರ್ತನೆ ತೋರಿದ ಜೊತೆಗೆ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿರುವ ಘಟನೆ ಉತ್ತರಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ವರದಿಯಾಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಯುವಕ ಮುಂದೆ ರಸ್ತೆ ನೋಡಿಕೊಂಡು ಬೈಕ್ ಚಲಾಯಿಸುತ್ತಿದ್ದರೆ ಆತನನ್ನು ತಬ್ಬಿ ಹಿಂಬದಿ ಮುಖ ಮಾಡಿಕೊಂಡು ಯುವತಿ ಕುಳಿತುಕೊಂಡಿರುವ ದೃಶ್ಯ ವೈರಲ್ ಆಗಿದೆ. ಸಂಚಾರಿ ನಿಯಮಗಳನ್ನು ಬ್ರೇಕ್ ಮಾಡಿ ಅಸಭ್ಯ ವರ್ತನೆ ತೋರಿರುವುದು ವೀಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿ ಯೊಬ್ಬರು ಸೆರೆ ಹಿಡಿದಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.ಇತ್ತೀಚಿನ ದಿನಗಳಲ್ಲಿ ಈ ರೀತಿಯ ಅಸಭ್ಯ ವರ್ತನೆ ತೋರಿ ಅಪಾಯಕ್ಕೆ ಆಹ್ವಾನ ಮಾಡಿಕೊಂಡ ಅನೇಕ ಪ್ರಕರಣಗಳು ವರದಿಯಾಗುತ್ತಿದ್ದು, ಹಲವರು ಇವರ ನಡೆಯನ್ನು ಖಂಡಿಸಿದ್ದಾರೆ.
ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಇತರ ಚಟುವಟಿಕೆಗಳಲ್ಲಿ ತೊಡಗಿರುವ ವಿಡಿಯೋವನ್ನು ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಗಮನಿಸಿದ್ದು, ಈ ವಿಡಿಯೋದಲ್ಲಿ ಪತ್ತೆಯಾಗಿರುವ ನೋಂದಣಿ ಸಂಖ್ಯೆಯ ಆಧಾರದ ಮೇರೆಗೆ ವಾಹನ ಮಾಲೀಕರ ಹೆಸರು ಮತ್ತು ವಿಳಾಸವನ್ನು ಪಡೆಯಲಾಗಿದೆ. ಮೋಟಾರು ವಾಹನ ಕಾಯ್ದೆ (MV) ಅಡಿಯಲ್ಲಿ ಕಾನೂನು ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಹಾಪುರ್ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.