Yuvanidhi Scheme: ಡಿಪ್ಲೊಮಾ ಪದವೀಧರರಿಗೆ ಭರ್ಜರಿ ಸುದ್ದಿ- ‘ಯುವನಿಧಿ’ ಬಗ್ಗೆ ಸಿಎಂ ಕೊಟ್ರು ಬಿಗ್ ಅಪ್ಡೇಟ್

Karnataka news Congress 5th guarantee CM announces implementation of Yuva Nidhi scheme

Yuvanidhi Scheme: ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿದೆ. ಇದೀಗ ಡಿಪ್ಲೋಮಾ, ಪದವೀಧರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ಒಂದನ್ನು ನೀಡಿದ್ದಾರೆ.

ಹೌದು, ಮೈಸೂರು ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಡಿನ ಸಂಪತ್ತು, ಅಧಿಕಾರ ಎಲ್ಲರಿಗೂ ಹಂಚಿಕೆಯಾಗಬೇಕು. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು 5 ಗ್ಯಾರಂಟಿಗಳ ಪೈಕಿ ಈಗಾಗಲೇ 4 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದು, ಜನವರಿಯಲ್ಲಿ 5 ನೇ ಗ್ಯಾರಂಟಿ ಯುವನಿಧಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಸದ್ಯ ಡಿಸೆಂಬರ್ ಅಂತ್ಯಕ್ಕೆ ಡಿಪ್ಲೋಮಾ, ಪದವೀಧರರಿಗೆ 1,500 ರೂ. ಹಾಗೂ 3,000 ರೂ. ನೀಡುವ ಯುವನಿಧಿ ಯೋಜನೆಯನ್ನು (Yuvanidhi Scheme)ಜಾರಿಗೆ ತರಲು ಸಕಲ ಸಿದ್ಧತೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Canara Bank: ಕೆನರಾ ಬ್ಯಾಂಕಲ್ಲಿ ಖಾತೆ ಹೊಂದಿರೋರಿಗೆ ಬೆಳ್ಳಂಬೆಳಗ್ಗೆಯೇ ಸಿಹಿ ಸುದ್ದಿ !!

Leave A Reply

Your email address will not be published.