Satish jarkiholi: ಕಾಂಗ್ರೆಸ್’ನಲ್ಲಿ ಅಸಮಾಧಾನ ಸ್ಪೋಟ? 20 ಶಾಸಕರೊಂದಿಗೆ ಬಸ್ ಹತ್ತಿದ ಸತೀಶ್ ಜಾರಕಿಹೊಳಿ- ಭಾರೀ ಸಂಚಲನ ಸೃಷ್ಟಿಸಿದ ನಡೆ !!

Satish jarkiholi: ‘ಜೇನು ಗೂಡು ನಾವೆಲ್ಲ’ ಎಂದು ಹೇಳಿಕೊಂಡಿದ್ದಂತಹ ರಾಜ್ಯ ಕಾಂಗ್ರೆಸ್ ನಲ್ಲಿ ಇದೀಗ ಯಾಕೋ ಬಿರುಕು ಮೂಡಿದಂತೆ ಕಾಣುತ್ತಿದೆ. ಇಡೀ ರಾಜ್ಯ ಹಾಗೂ ರಾಜ್ಯ ಸರ್ಕಾರ ದಸರಾ ಹಬ್ಬವನ್ನು ಸಂಭ್ರಮಿಸುತ್ತಿರುವ ಹೊತ್ತಿನಲ್ಲಿ ಕಾಂಗ್ರೆಸ್ಸಿನ ಪ್ರಬಲ ನಾಯಕನಾಗಿರುವ ಸತೀಶ್ ಜಾರಕಿಹೊಳಿ(Satish jarkiholi)ಯವರು ಸುಮಾರು 20 ಶಾಸಕರನ್ನು ಒಟ್ಟುಗೂಡಿಸಿ ಬಸ್ಸತ್ತಿಸಿಕೊಂಡು ಎಲ್ಲೋ ಹೊರಟಂತಿದೆ. ಈ ಮೂಲಕ ಸಚಿವರ ಈ ನಡೆ ಕಾಂಗ್ರೆಸ್ ಪಾಳಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.

ಹೌದು, ಉಚಿತ-ಖಚಿತಗಳಿಂದಾಗುತ್ತಿರುವ ಲಾಭ, ನಷ್ಟಗಳ ಆಂತಕ, ಸಂಭ್ರಮ ಸರಳವಾದ ದಸರಾ ಹಬ್ಬದ ಮಧ್ಯೆ ಕೆಪಿಸಿಸಿ ಕಾರ್ಯಧ್ಯಕ್ಷ, ಸಚಿವ ಸತೀಶ್ ಜಾರಕಿಹೊಳಿ 20ಕ್ಕೂ ಹೆಚ್ಚು ಶಾಸಕರನ್ನು ಒಗ್ಗೂಡಿಸಿ ಪ್ರವಾಸಕ್ಕೆ ಪ್ಲ್ಯಾನ್ ಮಾಡಿರುವ ಸುದ್ದಿ ಕಾಂಗ್ರೆಸ್​ನಲ್ಲಿ ಕಂಪನ ಸೃಷ್ಟಿಸಿದೆ. ಇದು ಗಮನಕ್ಕೆ ಬರುತ್ತಿದ್ದಂತೆಯೇ ಹೈಕಮಾಂಡ್​ ಎಚ್ಚೆತ್ತುಕೊಂಡು ಜಾರಕಿಹೊಳಿ ಅವರಿಗೆ ಖಡಕ್ ಸೂಚನೆ ರವಾನಿಸಿ ಈ ಸಮಯದಲ್ಲಿ 20ಕ್ಕೂ ಹೆಚ್ಚು ಶಾಸಕರನ್ನು ಒಗ್ಗೂಡಿಸಿಕೊಂಡು ಹೋಗುವುದು ಬೇಡ, ಕೂಡಲೇ ಕ್ಯಾನ್ಸಲ್ ಮಾಡುವಂತೆ ಹೇಳಿದೆ.

ಅಂದಹಾಗೆ ಈ ಕುರಿತು ಸತೀಶ್ ಜಾರಕಿಹೊಳಿ ಅವರಿಗೆ ಮನವರಿಕೆ ಮಾಡಲು ಮುಂದಾಗಿರುವ ಹೈಕಮಾಂಡ್ ‘ಈ ಸಮಯದಲ್ಲಿ ಬಸ್ ನಲ್ಲಿ ಶಾಸಕರನ್ನು ಒಗ್ಗೂಡಿಸಿಕೊಂಡು ಹೊರಟರೇ ವಿಪಕ್ಷಗಳಿಗೆ ನಾವೇ ಆಹಾರ ಕೊಟ್ಟಂತಾಗಲಿದೆ. ದಯವಿಟ್ಟು ನಮ್ಮ ಮನವಿಯನ್ನು ಸ್ವೀಕರಿಸಿ ಎಂದು ಸೂಚನೆ ನೀಡಿದೆ. ಇನ್ನೂ ಹೈಕಮಾಂಡ್ ಸೂಚನೆ ಕೊಟ್ಟ ಹಿನ್ನೆಲೆ ಶಾಸಕರನ್ನು ಒಗ್ಗೂಡಿಸಿಕೊಂಡು ಹೋಗುವ ವಿಚಾರ ಕೈಬಿಟ್ಟ ಸಚಿವ ಸತೀಶ್ ಜಾರಕಿಹೊಳಿ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನಾಡಹಬ್ಬ ದಸರಾ ಹಬ್ಬ ಹಿನ್ನೆಲೆ ಮೈಸೂರಿಗೆ ಕೆಲವರು ಹೋಗಬೇಕು ಅಂತ ಮಾತನಾಡಿದ್ದೆವು. ದಸರಾ ನೋಡೋಕೆ ಬನ್ನಿ ಅಂತ ಅಲ್ಲಿನ ಶಾಸಕರೂ ಹೇಳ್ತಿದ್ದರು. ಹೀಗಾಗಿ ಕೆಲವು ನಮ್ಮ ಲೈಕ್ ಮೈಂಡೆಡ್ ಶಾಸಕರು ಒಟ್ಟಿಗೆ ಸೇರಿ ಅಲ್ಲಿಗೆ ಹೋಗಬೇಕು ಅಂದುಕೊಂಡಿದ್ವಿ. ಅಲ್ಲದೆ ಕೆಲವು ಶಾಸಕರು ನಮ್ಮನ್ನು ಎಲ್ಲಾದ್ರೂ ಟ್ರಿಪ್ ಕರೆದುಕೊಂಡು ಹೋಗಿ ಅಂತಾ ಕೇಳಿದ್ರು. ಹಾಗೆ ಸಮಾನ ಮನಸ್ಕರರು ಸಹ ಎಲ್ಲಾದರೂ ಹೋಗಬೇಕು ಅಂತ ಹೇಳುತ್ತಿದ್ದರು. ಈಗ ದಸರಾ ಹಬ್ಬ ಬೇಡ ಎಂದು ಸುಮ್ಮನಾಗಿದ್ದೇವೆ. ಮುಂದೆ ಹೋಗಬೇಕು ಅಂತಾದ್ರೆ ಸಿಎಂ ಹಾಗೂ ಅಧ್ಯಕ್ಷರ ಗಮನಕ್ಕೆ ತಂದು ಹೋಗುತ್ತೇವೆ. ಯಾವುದೇ ಬಣ ಗಿಣ ಅಂತೇನಲ್ಲ ಎಂದು ಸ್ಪಷ್ಟಪಡಿಸಿದರು.

 

ಇದನ್ನು ಓದಿ: Ration Card Update: APL, BPL ಕಾರ್ಡ್ ದಾರರಿಗೆ ಸಂತಸದ ಸುದ್ದಿ- ಮತ್ತೆ ತಿದ್ದುಪಡಿಗೆ ಅವಧಿ ವಿಸ್ತರಣೆ

Leave A Reply

Your email address will not be published.