E Shram Card: ಈ ವರ್ಗದ ಜನರಿಗಾಗಿ ಬಂತು ನೋಡಿ ‘ಇ-ಶ್ರಮ ಕಾರ್ಡ್ ಯೋಜನೆ’ – ಅಬ್ಬಬ್ಬಾ.. ಇದರಡಿಯಲ್ಲಿ ಇಷ್ಟೆಲ್ಲಾ ಸೌಲಭ್ಯಗಳುಂಟಾ ?!

Karnataka news e shram card scheme to provide security to unorganized workers

E Shram Card: ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಮುಖ್ಯವಾಗಿ ಅಸಂಘಟಿತ ಕಾರ್ಮಿಕರಿಗಾಗಿ ಸಾಮಾಜಿಕ ಭದ್ರತೆ ಒದಗಿಸುವ ಸಲುವಾಗಿ ಕೇಂದ್ರ ಸರ್ಕಾರ ಇ-ಶ್ರಮ (E Shram Card)ಯೋಜನೆ ಜಾರಿಗೆ ತಂದಿದೆ.

 

ಇ-ಶ್ರಮ ಕಾರ್ಡ್ ಎಂಬುದು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟೀಯ ದತ್ತಾಂಶವಾಗಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಈ ಯೋಜನೆ ಅಸಂಘಟಿತ ವಲಯದ ಕಾರ್ಮಿಕರ ಅಭಿವೃದ್ಧಿಯ ಮೂಲ ಉದ್ದೇಶ ಹೊಂದಿದೆ. ಇ-ಶ್ರಮ ಕಾರ್ಡ್ ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ವಿಶಿಷ್ಟ 12-ಅಂಕಿಯ ಗುರುತಿನ ಸಂಖ್ಯೆಯಾಗಿದೆ. ಇ-ಶ್ರಮ ಕಾರ್ಡ್ ಹೆಸರು, ವಯಸ್ಸು, ಲಿಂಗ, ಉದ್ಯೋಗ ಮತ್ತು ಕೆಲಸಗಾರನ ಕುರಿತು ಇತರ ಸಂಬಂಧಿತ ಮಾಹಿತಿಯಂತಹ ವಿವರಗಳನ್ನು ಒಳಗೊಂಡಿದೆ. ಇ-ಶ್ರಮ ಕಾರ್ಡ್ ಡಿಜಿಟಲ್ ಪ್ಲಾಟ್‌ಫಾರ್ಮ್ ಆಗಿದ್ದು ಅದು ಭಾರತದಲ್ಲಿನ ಅಸಂಘಟಿತ ಕಾರ್ಮಿಕರ ಸಮಗ್ರ ಡೇಟಾಬೇಸನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಆಧಾರ್ ಸಂಖ್ಯೆಗೆ ಜೋಡಣೆಯಾದ ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ದತ್ತಾಂಶವನ್ನು ಸಿದ್ದಪಡಿಸಲು, ಕಾರ್ಮಿಕ ಹಾಗೂ ಉದ್ಯೋಗ ಮಂತ್ರಾಲಯ ಇ-ಶ್ರಮ ಪೋರ್ಟಲ್ ಅನ್ನು (www.eshram.gov.in) ಅಭಿವೃದ್ಧಿಪಡಿಸಿದೆ. ಇದು ಕಾರ್ಮಿಕರ ಹೆಸರು, ವೃತ್ತಿ, ವಿಳಾಸ, ವಿದ್ಯಾರ್ಹತೆ, ಕೌಶಲ್ಯದ ವಿಧ, ಕುಟುಂಬದ ವಿವರ, ಬ್ಯಾಂಕ್ ಖಾತೆ ವಿವರ ಇತ್ಯಾದಿ ವಿವರ ಒಳಗೊಂಡಿರುತ್ತದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ, ವಲಸೆ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರು ಸೇರಿದಂತೆ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಣೆ ಮಾಡಲು ಮತ್ತು ಸಾಮಾಜಿಕ ಭದ್ರತಾ ಯೋಜನೆಗಳನ್ನು ವಿಸ್ತರಿಸಲು ಅಸಂಘಟಿತ ಹಾಗೂ ವಲಸೆ ಕಾರ್ಮಿಕರ ಸಮಗ್ರ ದತ್ತಾಂಶ ಅವರಿಗೆ ಸಹಾಯಕವಾಗಿದೆ.

ಇ-ಶ್ರಮ ಪೋರ್ಟಲ್‌ನಲ್ಲಿ ಕಾರ್ಮಿಕ ವರ್ಗಗಳಲ್ಲಿ ಅತ್ಯಂತ ದುರ್ಬಲ ವರ್ಗದವರಾದ ವಲಸೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಸಮಗ್ರ ದತ್ತಾಂಶವನ್ನು ಸಿದ್ದಪಡಿಸಲಾಗುತ್ತಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್‍ಗಳು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಕೇಂದ್ರ ಸರ್ಕಾರ ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು “ಇತರೆ ವರ್ಗ”ಗಳಡಿ ನೋಂದಣಿಯಾಗಬಹುದು.

ಇ-ಶ್ರಮ ಕಾರ್ಡ್ ನೋಂದಣಿ ಮಾಡುವ ವಿಧಾನ :
ಇ-ಶ್ರಮ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ನೋಂದಣಿ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (CSC)ಗಳಿಗೆ ಬೇಟಿ ನೀಡಿ ನೋಂದಣಿ ಮಾಡಿಸಿಕೊಳ್ಳಬಹುದು. ಯಶಸ್ವಿ ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೆ ಗುರುತಿನ ಚೀಟಿಯನ್ನು (UAN) ಪಡೆಯಬಹುದು. ಇದು ದೇಶದಾದ್ಯಂತ ಹಾಗೂ ಜೀವಿತಾವಧಿಯ ಮಾನ್ಯತೆ ಹೊಂದಿರುತ್ತದೆ. 16 ರಿಂದ 59 ವಯೋಮಾನದವರು. ಆದಾಯ ತೆರಿಗೆ ಪಾವತಿಸದವರು, ಭವಿಷ್ಯನಿಧಿ ಹಾಗೂ ಇಎಸ್​ಐ ಫಲಾನುಭವಿಯಾಗಿರದವರು ಇದಕ್ಕೆ ಅರ್ಹರಾಗಿರುತ್ತಾರೆ. ಇ-ಶ್ರಮ ಪೋರ್ಟಲ್‍ನಲ್ಲಿ ನೋಂದಣಿ ಉಚಿತವಾಗಿದೆ.

ನೋಂದಾವಣಿಗೆ ಬೇಕಾಗುವ ಅವಶ್ಯಕ ದಾಖಲೆಗಳು:-
• ಆಧಾರ್ ಕಾರ್ಡ್.
• ಆಧಾರ್ ಕಾರ್ಡ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ
• ಬ್ಯಾಂಕ್ ಖಾತೆ ವಿವರಗಳು

ಇ-ಶ್ರಮ ಕಾರ್ಡ್‌ನ ಪ್ರಯೋಜನಗಳು:
ಇ-ಶ್ರಮ ಕಾರ್ಡ್‌ನ ಮೂಲಕ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಕಲ್ಪಿಸಲಾಗುತ್ತದೆ. ಇ-ಶ್ರಮ ಕಾರ್ಡ್‌ನೊಂದಿಗೆ, ಅಸಂಘಟಿತ ವಲಯದ ಕಾರ್ಮಿಕರು ಆರೋಗ್ಯ ಮತ್ತು ಜೀವ ವಿಮೆ, ವೃದ್ಧಾಪ್ಯ ಪಿಂಚಣಿ, ಅಂಗವೈಕಲ್ಯ ಪಿಂಚಣಿ, ಮಾತೃತ್ವ ಪ್ರಯೋಜನ ಮುಂತಾದ ಸರ್ಕಾರದಿಂದ ಪ್ರಾರಂಭಿಸಲಾದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ನೀಡಲಾಗುತ್ತದೆ. ಈ ಕಾರ್ಡ್ ನಿಂದ ಕಾರ್ಮಿಕರು ದೇಶಾದ್ಯಂತ ಸಾಮಾಜಿಕ ಭದ್ರತೆ ಪ್ರಯೋಜನಗಳನ್ನು ಪಡೆಯಬಹುದು. ಇ-ಶ್ರಮ ಕಾರ್ಡ್ ಅಸಂಘಟಿತ ಕಾರ್ಮಿಕರಿಗೆ ಬ್ಯಾಂಕ್ ಖಾತೆಗಳನ್ನು ತೆರೆಯಲು ಮತ್ತು ವಿವಿಧ ಹಣಕಾಸು ಸೇವೆಗಳನ್ನು ಪಡೆಯಲು ಅನುವು ಮಾಡಿಕೊಡುವ ಮೂಲಕ ಆರ್ಥಿಕ ಸೇರ್ಪಡೆಗೆ ಅನುಕೂಲ ಮಾಡಿ ಕೊಡಲಾಗುತ್ತದೆ.

ಇ-ಶ್ರಮ ಕಾರ್ಡ್ ಡೇಟಾಬೇಸ್​ನ್ನು ಕೌಶಲ್ಯಗಳನ್ನು ನಕ್ಷೆ ಮಾಡಲು ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ಗುರುತಿಸಲು ಬಳಸಬಹುದು. ಈ ಯೋಜನೆಯಡಿ ಕೇಂದ್ರ ಸರ್ಕಾರ ಮಾಸಿಕ ರೂ. 1000 ಮತ್ತು ಇದರ ಹೊರತಾಗಿ 2 ಲಕ್ಷ ರೂ.ಗಳ ಅಪಘಾತ ವಿಮೆಯನ್ನು ಸಹ ನೀಡಲಾಗುತ್ತಿದೆ. ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್-19ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ, ಅರ್ಹ ಕಾರ್ಮಿಕರಿಗೆ ನೆರವು ನೀಡಲು ಈ ದತ್ತಾಂಶವನ್ನು ಬಳಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: Senior Citizens FD: ಎಫ್‌ಡಿ ಮೇಲೆ ಬಂಪರ್ ಬಡ್ಡಿದರ ಘೋಷಿಸಿದೆ ಈ ಬ್ಯಾಂಕ್- ಕ್ಯೂ ನಿಂತ ಜನ

Leave A Reply

Your email address will not be published.