Latest News: ಜೆ.ಡಿ.ಎಸ್.ನಿಂದ ಹೆಚ್.ಡಿ.ಕುಮಾರಸ್ವಾಮಿ ,ನಿಖಿಲ್ ಉಚ್ಚಾಟನೆ

ಜೆ.ಡಿ.ಎಸ್.ನಿಂದ ಹೆಚ್.ಡಿ.ಕುಮಾರಸ್ವಾಮಿ ,ನಿಖಿಲ್ ಅವರನ್ನು ಉಚ್ಚಾಟನೆ ಮಾಡಲಾಗಿದೆ.
ಈ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಅದರಲ್ಲಿ , “ಜೆಡಿಎಸ್ ಪಕ್ಷವು ದಶಕಗಳಿಂದ ಜಾತ್ಯಾತೀತ ಸಿದ್ಧಾಂತವನ್ನು ಪಾಲಿಸುತ್ತಾ ಬಂದಿದ್ದು ನಮ್ಮ ಪಕ್ಷದಲ್ಲಿಎಲ್ಲ ಜಾತಿ ಧರ್ಮಗಳ ನಾಯಕರು ಕಾರ್ಯಕರ್ತರು ಪಕ್ಷಕ್ಕಾಗಿ ದುಡಿದಿದ್ದು ಇತ್ತೀಚೆಗೆ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್‌ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿಯಾಗಿರುವುದು ಕಂಡು ಬಂದಿದ್ದು ಈ ತತ್‌ ಕ್ಷಣದಿಂದ ಹೆಚ್‌.ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಈ ಕೂಡಲೇ ಪಕ್ಷದಿಂದ ಉಚ್ಚಾಟಿಸಲು ಪಕ್ಷ ತೀರ್ಮಾನಿಸಿದೆ” ಎಂದು ಉಲ್ಲೇಖಿಸಲಾಗಿದೆ.

 

 

ಇದನ್ನು ಓದಿ: Rikshaw Viral Video: ನಡು ರಸ್ತೆಯಲ್ಲಿ ರಿಕ್ಷಾ ಚಾಲಕನ ಖಾಸಗಿ ಅಂಗ ಮುಟ್ಟಿ ಅಶ್ಲೀಲ ಕೃತ್ಯವೆಸಗಿದ ಯುವತಿ!! ವಿಡಿಯೋ ವೈರಲ್‌

 

 

Leave A Reply

Your email address will not be published.