Dakshina Kannada: ಶಾಸಕ ಹರೀಶ್ ಪೂಂಜ ವಿರುದ್ಧ FIR – ಪ್ರತಿಕ್ರಿಯೆ ನೀಡಿದ ಪೂಂಜ!

Belthangady BJP MLA Harish Poonja has commented on the FIR registered against him Latest news

Harish Poonja: ಬೆಳ್ತಂಗಡಿ (Belthangady) ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja, BJP MLA)ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್(FIR) ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ದೂರಿನ ಹಿನ್ನೆಲೆ ಪೊಲೀಸರು ಐಪಿಸಿ 1860(U/S-143, 353, 504, 149) ಅಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಈ ಕುರಿತು ಫೇಸ್ಬುಕ್ ಪೋಸ್ಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja)ನೂರಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದ ಮನೆಯವರ ಪರವಾಗಿ ನಾನೊಬ್ಬ ಜನಪ್ರತಿನಿಧಿಯಾಗಿ ಧ್ವನಿ ಎತ್ತಿದ್ದೇ ತಪ್ಪಾಯಿತೇ? ನನ್ನ ಕ್ಷೇತ್ರದ ಜನರ ಪರವಾಗಿ ಹೋರಾಡುವ ಹಕ್ಕು ಕೂಡ ನನಗಿಲ್ಲವೇ? ನನ್ನ ಜನ ನನ್ನಲ್ಲಿ ಸಮಸ್ಯೆ ಹೇಳಿಕೊಂಡಾಗ ಸುಮ್ಮನಿರಬೇಕೇ ಎಂದು ಗುಡುಗಿದ್ದಾರೆ.

ಬಾಲ್ಯದ ದಿನಗಳಿಂದಲೇ ಸುಭಾಷ್ ಚಂದ್ರ ಬೋಸ್, ಸರ್ದಾರ್ ಪಟೇಲ್, ವೀರ ಸಾವರ್ಕರ್, ಭಗತ್ ಸಿಂಗ್ ಮೊದಲಾದವರನ್ನು ಆದರ್ಶವಾಗಿರಿಸಿ ಬೆಳೆದಿದ್ದೇನೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ABVP) ದಿನಗಳಿಂದಲುಕೂಡ ಜನ ಸೇವೆ, ಜನರಿಗಾಗಿ ಸಂಘರ್ಷ ನಡೆಸಿಕೊಂಡು ನಾಯಕನಾದವನು ನಾನು!! ಜನರಿಂದ ಶಾಸಕನಾಗಿ ಜನರಿಗೋಸ್ಕರ ಇರುವವನು ಅದಕ್ಕಾಗಿ ಯಾವ ಬೆಲೆಯನ್ನು ಕೂಡ ತೆರಲು ಸಿದ್ಧ ಎಂದು ಬರೆದುಕೊಂಡಿದ್ದಾರೆ.

ಜನರ ಸಮಸ್ಯೆಗೆ ಧ್ವನಿ ಎತ್ತಿದ ಒಬ್ಬ ಜನಪ್ರತಿನಿಧಿಯನ್ನು ಈ ರೀತಿ ಕಾಡುವುದಾದರೆ ಜನಸಾಮಾನ್ಯರು ಕಾಂಗ್ರೆಸ್‌ ಸರ್ಕಾರದಡಿಯಲ್ಲಿ ಹೇಗೆ ಬದುಕಬೇಕು? ಮಾನ್ಯ ಮುಖ್ಯಮಂತ್ರಿಗಳೇ, ಅರಣ್ಯ ಸಚಿವರೇ ನಿಮ್ಮ ಈ ಬೆದರಿಕೆ ತಂತ್ರಗಳಿಗೆ ನಾನು ಖಂಡಿತ ಬೆದರುವುದಿಲ್ಲ!! ಮತ್ತೆ ಹೇಳುತ್ತಿದ್ದೇನೆ ಬಡವರಿಗಾಗಿ ಇಂತಹ ನೂರು ಕೇಸು ಹಾಕಿಸಿಕೊಳ್ಳುವುದಕ್ಕೂ ಸಿದ್ಧ!! ನೋಡೇ ಬಿಡೋಣ, ನಾನು ಶಾಸಕನಾಗಿರುವುದು ನನ್ನ ಜನರ ಸೇವೆಗೆ ಹೀಗಾಗಿ, ಅವರ ರಕ್ಷಣೆಗೆ ಜೈಲಿಗೆ ಹೋಗಲು ಸಿದ್ಧ ಎಂದು ಶಾಸಕ ಹರೀಶ್ ಪೂಂಜಾ ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

 

 

Leave A Reply

Your email address will not be published.