Dakshina Kannada: ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾದ FIR : ಬಜರಂಗದಳ ಖಂಡನೆ

Dakshina Kannada news fir against sharan pumpwell in Managlore mangaladevi utsav matter and bajarang dal protest against this

Dakshina Kannada: ಮಂಗಳೂರು(Mangaluru) ಮಂಗಳಾದೇವಿ(Managaladevi) ದೇವಸ್ಥಾನದಲ್ಲಿ ವ್ಯಾಪಾರ ಧರ್ಮ ದಂಗಲ್ ವಿಚಾರಕ್ಕೆ ಸಂಬಂಧಪಟ್ಟಂತೆ ವಿಶ್ವಹಿಂದೂ ಪರಿಷತ್(VHP) ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್(FIR) ದಾಖಲು ಮಾಡಲಾಗಿದೆ. ಹೌದು, ಮುಸ್ಲಿಮರ ಜೊತೆ ವ್ಯಾಪಾರ ಮಾಡದಂತೆ ಕರೆ ಕೊಟ್ಟಿದ್ದು, ಜೊತೆಗೆ ಮಂಗಳಾದೇವಿಯ ಹಿಂದೂಗಳ ಸ್ಟಾಲ್ಗಳಿಗೆ ಭಗವಾದ್ವಜ ಕಟ್ಟಿ, ಹಿಂದೂ ಅಂಗಡಿಗಳಲ್ಲಿ ವ್ಯಾಪಾರ ನಡೆಸಬೇಕು ಎಂದು ಕರೆ ಕೊಟ್ಟಿದ್ದ ಹಿನ್ನಲೆ ಶರಣ್ ಪಂಪ್ ವೆಲ್ ವಿರುದ್ದ ಪಾಂಡೇಶ್ವರ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ (Dakshina Kannada) ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ವಿರುದ್ಧ ಕೋಮು ಸೌಹಾರ್ದ ಧಕ್ಕೆ ತಂದ ಆರೋಪದ ಮೇರೆಗೆ ಮಂಗಳೂರು ನಗರ ದಕ್ಷಿಣ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದ್ದು,ಶರಣ್ ಪಂಪ್‌ವೆಲ್ ವಿರುದ್ದ ಸುಳ್ಳು ಆರೋಪ ಹಾಕಿ FIR ದಾಖಲಿಸಿದ್ದನ್ನು ಬಜರಂಗದಳ ಖಂಡಿಸಿದೆ.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಹಿಂದೂ ಸಂಘಟನೆಯ ನಾಯಕರನ್ನು ಹತ್ತಿಕ್ಕಲು ಪ್ರಯತ್ನ ಪಟ್ಟರೆ ತಕ್ಕ ಉತ್ತರ ನೀಡಲಾಗುವುದು’ ಎಂದು ಸಂಘಟನೆ ಎಚ್ಚರಿಕೆ ನೀಡಿದೆ. ‘ಮುಸ್ಲಿಮರ ಓಲೈಕೆ ಮಾಡುವ ಸಲುವಾಗಿ ಶರಣ್‌ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲಿಸಿರುವ ಎಫ್ಐಆರ್ ಅನ್ನು ಬಜರಂಗದಳ ಬಲವಾಗಿ ಖಂಡಿಸುತ್ತದೆ’ ಎಂದು ಬಜರಂಗದಳದ ವಿಭಾಗ ಸಹ ಸಂಯೋಜಕ ಪುನೀತ್ ಅತ್ತಾವರ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

‘ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳ ಅನುಸಾರ, ದೇವಸ್ಥಾನದ ವಠಾರ ಮತ್ತು ರಥಬೀದಿಯಲ್ಲಿ ಹಿಂದುಯೇತರರು ವ್ಯಾಪಾರ ನಡೆಸುವುದಕ್ಕೆ ಅವಕಾಶವಿಲ್ಲ. ಹೀಗಾಗಿ, ಮಂಗಳೂರು ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಕ್ಕೆ ಹಿಂದೂ ವ್ಯಾಪಾರಿಗಳ ಬೆಂಬಲವಾಗಿ ನಿಂತಿರುವ ಶರಣ್‌ ಪಂಪ್‌ವೆಲ್‌ ವಿರುದ್ಧ ಹಾಕಿರುವ ಸುಳ್ಳು ಪ್ರಕರಣವನ್ನು ತಕ್ಷಣ ಹಿಂಪಡೆಯಬೇಕು’ ಬಜರಂಗದಳ (Bajrang Dal) ಆದೇಶಿಸಿದೆ.

 

ಇದನ್ನು ಓದಿ: JDS Party: ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂಗೆ ಬಿಗ್ ಶಾಕ್- ಪಕ್ಷದಿಂದಲೇ ಉಚ್ಚಾಟನೆ ಮಾಡಿದ ದೇವೇಗೌಡರು !!

Leave A Reply

Your email address will not be published.