Gruhalakshmi scheme: ಇನ್ಮುಂದೆ ಇವರಿಗೂ ಸಿಗಲಿದೆ ‘ಗೃಹಲಕ್ಷ್ಮೀ’ಯ 2,000 !!
Gruhalakshmi scheme They will also get "Ghrilakshmi's money of Rs. 2,000
Gruhalakshi scheme: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ(Gruhalakshmi scheme)ಯೋಜನೆಗೆ ಚಾಲನೆ ದೊರೆತು ಇದೀಗ ಎರಡನೇ ಕಂತಿನ ಹಣ ಬಿಡುಗಡೆಯಾಗಲಿದೆ. ಸದ್ಯ ಈ ಯೋಜನೆಯನ್ನು BPL ಕಾರ್ಡ್ ಇರುವ ಮಹಿಳೆಯರಿಗೆ ಮಾತ್ರ ನೀಡುತ್ತಿದ್ದು, ಇದೀಗ ಮುಂದಿನ ದಿನಗಳಲ್ಲಿ ಈ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ(ಮಂಗಳಮುಖಿಯರು) ವಿಸ್ತರಿಸಲು ಸರ್ಕಾರ ಸಮ್ಮತಿಸಿದೆ.
ಹೌದು, ನಿನ್ನೆ ದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ(Siddaramaiah) ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಇದರಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅಂತೆಯೇ ಗೃಹಲಕ್ಷ್ಮೀ ಯೋಜನೆ ಕುರಿತು ಕೆಲವು ನಿರ್ಧಾರ ಮಾಡಿದ್ದು, ಮುಂದಿನ ದಿನಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮೀ ಯೋಜನೆಯನ್ನು ವಿಸ್ತರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಈಗ ಮನೆಯ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ 2 ಸಾವಿರ ರೂ. ನೀಡುತ್ತಿದ್ದು, ಇಷ್ಟೇ ಹಣವನ್ನು ಅವರಿಗೂ ಕೂಡ ನೀಡಲಾಗುವುದು.
ಇನ್ನು ಸಂಪುಟ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಹೆಚ್.ಕೆ. ಪಾಟೀಲ್ ಅವರು ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮಿ ಯೋಜನೆ ವಿಸ್ತರಣೆ ಮಾಡಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮಿ ಯೋಜನೆ ವಿಸ್ತರಣೆ ಮಾಡುವ ಆದೇಶಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದು, ಈ ವರ್ಗದ ಜನರಲ್ಲಿ ಸಂತಸ ಮನೆಮಾಡಿದೆ.