Home latest New Buses For Transport: ಫ್ರೀ ಬಸ್ಸಲ್ಲಿ ಓಡಾಡೋ ಮಹಿಳೆಯರಿಗೆ ಬೊಂಬಾಟ್ ಸುದ್ದಿ – ಸಿಎಂ...

New Buses For Transport: ಫ್ರೀ ಬಸ್ಸಲ್ಲಿ ಓಡಾಡೋ ಮಹಿಳೆಯರಿಗೆ ಬೊಂಬಾಟ್ ಸುದ್ದಿ – ಸಿಎಂ ಸಿದ್ದು ಕೊಟ್ರು ಮತ್ತೊಂದು ಭರ್ಜರಿ ಉಡುಗೊರೆ

New Buses For Transport

Hindu neighbor gifts plot of land

Hindu neighbour gifts land to Muslim journalist

Five Thousand New Buses For Transport Corporations : ಜೂನ್ 11 ರಿಂದ ಜಾರಿಗೆ ಬಂದ ‘ಶಕ್ತಿ ಯೋಜನೆ’ (Shakti Scheme) ಮೂಲಕ ಕೋಟ್ಯಂತರ ಮಹಿಳೆಯರು ಉಚಿತವಾಗಿ ಸರ್ಕಾರಿ ಸಾರಿಗೆ ಸೇವೆಯ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಹಣವನ್ನು ರಾಜ್ಯ ಸರ್ಕಾರವೇ(State Government)ಬೊಕ್ಕಸದಿಂದ ಭರಿಸುವ ಭರವಸೆ ನೀಡಿ ಅದರಂತೆ ಜೂನ್ ಮತ್ತು ಜುಲೈ ತಿಂಗಳ ಹಣ ಬಿಡುಗಡೆ ಮಾಡಿದೆ. ಈ ನಡುವೆ, ಸಾರಿಗೆ ಸೇವೆ ಒದಗಿಸಲು ಇರುವ ಬಸ್‌ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಹೊಸ ಬಸ್‌ ಖರೀದಿ ಮಾಡಲು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಉತ್ತಮ ಸ್ಪಂದನೆ ಮತ್ತು ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ 5,675 ಹೊಸ ಬಸ್‌ ಖರೀದಿಯ(Five Thousand New Buses For Transport Corporations) ಗುರಿ ಹೊಂದಲಾಗಿದ್ದು, ಈ ಕುರಿತು ಶೀಘ್ರವೇ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಿಳಿಸಿದ್ದಾರೆ. ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಪ್ರಯಾಣಿಕರ ಸಂಖ್ಯೆ ಶೇ. 15 ರಷ್ಟು ಏರಿಕೆ ಕಂಡಿದ್ದು, ಈ ಮೂಲಕ ಹೆಚ್ಚುವರಿ ಶೆಡ್ಯೂಲ್ ಗಳನ್ನು ಸೇರಿಸಲು ಅನುವಾಗುವಂತೆ ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಹೀಗಾಗಿ, ಸಾರ್ವಜನಿಕರಿಗೆ ನೆರವಾಗುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್‌ಗಳನ್ನು ಸೇರ್ಪಡೆಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಭಾನುವಾರ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಪ್ರಸ್ತುತ ಆಯವ್ಯಯದಲ್ಲಿ ಹೊಸ ಬಸ್‌ಗಳ ಖರೀದಿಗೆ 500 ಕೋಟಿ ರೂ. ನೀಡಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Madhu Bangarappa: ರಾಜ್ಯದ ಈ ಶಾಲಾ ಮಕ್ಕಳಿಗೆ ಸದ್ಯದಲ್ಲೇ ಬರಲಿದೆ ‘ಶಾಲಾ ವಾಹನ’ – ಶಿಕ್ಷಣ ಸಚಿವರು ಕೊಟ್ರು ಬಿಗ್ ಅಪ್ಡೇಟ್