Mangalore: ಶಿರಾಡಿ ಘಾಟ್‌ನಲ್ಲಿ ಅಕ್ಕಿ ಸಾಗಾಟದ ಲಾರಿ ಬೆಂಕಿಗಾಹುತಿ

Mangalore news fire accident in rice lorry at shiradi ghat latest news

Mangalore  : ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಶಿರಾಡಿ ಘಾಟ್ ನ ಡಬಲ್ ಟರ್ನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್, ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ,ಅಪಾಯದಿಂದ ಪಾರಾಗಿದ್ದಾರೆ. ಲಾರಿ ಹಾಗೂ ಅದರಲ್ಲಿದ್ದ ಅಕ್ಕಿ ಸಂಪೂರ್ಣ ಸುಟ್ಟು ಹೋಗಿದೆ. ಹಾಸನದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ಕೆಲ ಹೊತ್ತು ಅಡಚಣೆ ಉಂಟಾಗಿತ್ತು ಎಂದು ವರದಿಯಾಗಿದೆ

ಇದನ್ನೂ ಓದಿ: Cyclone Tej: ಕರಾವಳಿಗರೇ ಎಚ್ಚರ, ಅರಬ್ಬಿಯಲ್ಲಿ ಅಬ್ಬರಿಸಲಿದೆ ‘ತೇಜ್’ ಚಂಡಮಾರುತ !!

Leave A Reply

Your email address will not be published.