Farmers Land: ತಮ್ಮ ಜಮೀನಿಗೆ ತೆರಳಲು ರಸ್ತೆಯಿಲ್ಲದ ರೈತರಿಗೆ ಭರ್ಜರಿ ಗುಡ್ ನ್ಯೂಸ್- ಸರ್ಕಾರದಿಂದ ಬಂತು ನೋಡಿ ಮಹತ್ವದ ಆದೇಶ !!
National news land owners cannot obstruct access to farmers land latest news
Farmers Land: ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ದಾರಿಯ ಸಮಸ್ಯೆ ಇದೆ. ಇದರಿಂದ ರೈತರಿಗೆ ತೊಂದರೆಗಳಾಗುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದವು. ಈ ಕುರಿತು ಇದೀಗ ರಾಜ್ಯ ಸರ್ಕಾರ ಮಹತ್ವ ಆದೇಶ (Circular About Farmers Land Dispute) ಒಂದನ್ನು ನೀಡಿದೆ.
ಸದ್ಯ ರಾಜ್ಯ ಸರ್ಕಾರ ಹೊರಡಿಸಿದ ಸುತ್ತೋಲೆ ಪ್ರಕಾರ, ರೈತರ ಜಮೀನಿಗೆ (Farmers Land) ತೆರಳುವ ದಾರಿಗೆ ಅನ್ಯಭೂಮಾಲೀಕರು ಇನ್ನುಮುಂದೆ ಅಡ್ಡಿಪಡಿಸುವಂತಿಲ್ಲ. ಮುಖ್ಯವಾಗಿ ರಾಜ್ಯಾದ್ಯಂತ ರೈತರಿಂದ ಈ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ಸರಕಾರಕ್ಕೆ ಬಂದ ದೂರಿನ ಮಾಹಿತಿ ಪ್ರಕಾರ, ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಮಾಡಲು ಹಾಗೂ ಬೆಳೆದ ಫಸಲನ್ನು ಸಾಗಾಟ ಮಾಡಲಾರದೆ ನಷ್ಟ ಹೊಂದುತ್ತಿರುವುದಾಗಿ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ಅದಲ್ಲದೆ ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ರೈತರು ತಿರುಗಾಡಲು ಅವಕಾಶವಿದ್ಯಾಗೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿ ಪಡಿಸುತ್ತಿದ್ದಾರೆ. ಅಲ್ಲದೆ, ಅಂತಹ ಜಾಗಗಳನ್ನು ಮುಚ್ಚಿರುವ ಉದಾಹರಣೆಗಳಿವೆ. ಆದ್ದರಿಂದ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 59 ರಲ್ಲಿ ದಾರಿಯ ಹಕ್ಕುಗಳು ಮತ್ತು ಇತರ, ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು, ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್‌ನಲ್ಲಿ ನಮೂದು ಮಾಡಲು ಅವಕಾಶವಿದೆ. The Indian Easement Act, 1882 ರಂತೆ ಪ್ರತಿ ಜಮೀನಿನ ಮಾಲೀಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ ಹಕ್ಕನ್ನು ಹೊಂದಿದ್ದು, ಇದಕ್ಕೆ ಅನ್ಯಭೂಮಾಲೀಕರಿಂದ ಯಾವುದೇ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ.
ಸದ್ಯ ರೈತರು ದಾರಿಗಳನ್ನು ಸುಗಮಗೊಳಿಸಲು ನಿಟ್ಟಿನಲ್ಲಿ ತಾಲ್ಲೂಕಿನ ತಹಶೀಲ್ದಾರರು ನಕಾಶೆ ಕಂಡ ಕಾಲುದಾರಿ, ಬಂಡಿದಾರಿ ಹಾಗೂ ರಸ್ತೆಗಳಲ್ಲಿ ಅನ್ಯ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದೆ ಅಡ್ಡಿ ಪಡಿಸುವಂತಹ ಆ ಬಳಸಲು ಮುಚ್ಚಿರುವಂತಹ ಸಂದರ್ಭದಲ್ಲಿ ದಾರಿಗಳನ್ನು ತೆರವುಗೊಳಿಸುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಇದನ್ನೂ ಓದಿ: ವಿಪರೀತ ಕೂದಲು ಉದುರುತ್ತಿದೆಯೇ?! ಇಲ್ಲಿದೆ ನೋಡಿ ಹೊಸದಾದ ರಾಮಬಾಣ