Udupi: ಕಾರ್ಕಳ ನಗರ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಶೃತಿನ್ ಶೆಟ್ಟಿ ನಾಪತ್ತೆ

Udupi news Karkala Nagar Police Station Head Constable Srutin Shetty missing latest news

Udupi : ಪೊಲೀಸ್ ಹೆಡ್‌ಕಾನ್‌ಸ್ಟೇಬಲ್‌‌ವೊಬ್ಬರು ನಾಪತ್ತೆಯಾಗಿರುವ ಕುರಿತು ಉಡುಪಿ ಜಿಲ್ಲೆಯ(Udupi) ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ ನಗರ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಶೃತಿನ್ ಶೆಟ್ಟಿ (35) ನಾಪತ್ತೆಯಾದವರು.

ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್ ಶೆಟ್ಟಿ ಗುರುವಾರ ರಾತ್ರಿ 7.30ಕ್ಕೆ ಹೆಂಡತಿಗೆ ಫೋನ್ ಮಾಡಿ ನಾನು ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ ಹೇಳಿದ್ದಾರೆ. ನಂತರ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿಯಿಡೀ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಗಾಬರಿಯಾಗಿರುವ ಪತ್ನಿ ಪೂಜಾ ಶೆಟ್ಟಿಯವರು ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.

2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಆಗಿ ಬಂದಿದ್ದರು.

ಅ.17ರಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಅ.18ಕ್ಕೆ ವಾರದ ರಜೆಯಿತ್ತು ಅ.19ರಂದು ಸಿ.ಎಲ್ ರಜೆ ಹಾಕಿದ್ದರು. ದೃಢಕಾಯ, 178 ಸೆ. ಮೀ. ಎತ್ತರವಿರುವ ಶೃತಿನ್ ಶೆಟ್ಟಿ ಅವರನ್ನು ಕಂಡವರು 0820-2555452 ನಂಬರ್ ಸಂಪರ್ಕಿಸಲು ಕೋರಲಾಗಿದೆ. ಶೃತಿನ್ ಶೆಟ್ಟಿ ಇಂಗ್ಲಿಷ್, ಕನ್ನಡ, ತುಳು, ಹಿಂದಿ ಭಾಷೆ ಮಾತನಾಡುತ್ತಾರೆ.

ಇದನ್ನೂ ಓದಿ: Gruhalakshmi Scheme: ಈ ತಿಂಗಳಲ್ಲಿ ಗೃಹಲಕ್ಷ್ಮೀ ಅರ್ಜಿ ಹಾಕಿರೋರಿಗೆ ಬಂತು ಬಿಗ್ ಅಪ್ಡೇಟ್ !! ನೀವು ಯಾವಾಗ ಹಾಕಿದ್ದು? ಈಗಲೇ ಚೆಕ್ ಮಾಡಿ !

Leave A Reply

Your email address will not be published.