Health Tips: ಅಗ್ಗದಲ್ಲಿ ಸಿಗೋ ಈ ಒಂದೇ ಒಂದು ಹಣ್ಣು ತಿಂದ್ರೆ ಯಾವ ರೋಗವೂ ನಿಮ್ಮ ಹತ್ತಿರ ಸುಳಿಯಲ್ಲ !!
lifestyle health news health benefits of Guava fruit
Guava Fruit: ಆರೋಗ್ಯವನ್ನು(Health Tips)ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಒಂದಲ್ಲ ಒಂದು ಹರಸಾಹಸ ಪಡುವುದು ಸಹಜ. ನಮ್ಮ ಮನೆಯ ಹಿತ್ತಲಲ್ಲಿಯೇ ಸಿಗುವ ಪೇರಲ ಹಣ್ಣು(Guava Fruit)ಅನೇಕ ಪೌಷ್ಠಿಕಾಂಶವನ್ನು ಹೊಂದಿದೆ. ಬಡವರ ಸೇಬು ಎಂದು ಕರೆಯಲಾಗುವ ಪೇರಲ ಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ಅನಾರೋಗ್ಯದಿಂದ ದೂರವಿರಬಹುದು.
# ಅಧಿಕ ಬಿಪಿಯಿಂದ ಬಳಲುತ್ತಿರುವವರು ಪ್ರತಿದಿನ ಎರಡು ಪೇರಲ ಎಲೆಗಳನ್ನು ಸೇವಿಸುವುದು ಉತ್ತಮ. ಇದರಿಂದ ರೋಗ ನಿರೋಧಕ ಶಕ್ತಿ ಕೂಡ ಹೆಚ್ಚುತ್ತದೆ.
# ಅಧಿಕ ರಕ್ತದೊತ್ತಡದಿಂದ ಬಳಲುವವರು ಪೇರಲವನ್ನು ಸೇವಿಸುವುದರಿಂದ ರಕ್ತ ಪರಿಚಲನೆ ಸುಧಾರಣೆ ಕಂಡು ಬಿಪಿ ನಿಯಂತ್ರಣಕ್ಕೆ ಬರುತ್ತದೆ.
# ಪೇರಲದಲ್ಲಿರುವ ವಿಟಮಿನ್ ಎ ದೃಷ್ಟಿಯನ್ನು ಸುಧಾರಿಸುವ ಜೊತೆಗೆ ಕಣ್ಣಿನ ಪೊರೆ ಸಮಸ್ಯೆಯನ್ನು ತಡೆಯುತ್ತದೆ.
# ಪೇರಲ ಎಲೆಗಳಲ್ಲಿ ವಿಟಮಿನ್ ಸಿ, ಲೈಕೋಪೀನ್ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಇವು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಗಟ್ಟುವಲ್ಲಿ ನೆರವಾಗುತ್ತದೆ.
# ಪೇರಲವನ್ನು ತಿನ್ನುವುದರಿಂದ ಉತ್ತಮ ಕೊಲೆಸ್ಟ್ರಾಲ್ ಹೆಚ್ಚಾಗಿ, ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸಹ ಕಡಿಮೆ ಮಾಡುತ್ತದೆ.
# ಪೇರಲದಲ್ಲಿ ಪೊಟ್ಯಾಸಿಯಮ್ ಹೆಚ್ಚಿದ್ದು, ಉತ್ಕರ್ಷಣ ನಿರೋಧಕ ಗುಣಗಳನ್ನು ಒಳಗೊಂಡಿದೆ.
# ಪೇರಲ ಇನ್ಸುಲಿನ್ ನಿರೋಧಕ ಗುಣಗಳನ್ನು ಹೊಂದಿದ್ದು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.
# ಪೇರಲದಲ್ಲಿ ನಾರಿನಂಶ ಅಧಿಕವಿರುವುದರಿಂದ ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಜೊತೆಗೆ ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಕರಗಿಸಲು ನೆರವಾಗುತ್ತದೆ.
ಇದನ್ನೂ ಓದಿ: Arecanut: ಅಡಿಕೆ ಬೆಳೆಗಾರರಿಗಷ್ಟೇ ಅಲ್ಲ, ‘ಕೇಣಿ’ ಮಾಡೋ ಕೇಣಿದಾರರಿಗೂ ಎದುರಾಯ್ತು ಭಾರೀ ದೊಡ್ಡ ಸಂಕಷ್ಟ !!