BJP Ticket Fraud: ಬಯಲಾಯ್ತು ಮತ್ತೊಂದು BJP ಟಿಕೆಟ್ ವಂಚನೆ ಪ್ರಕರಣ- 2.25 ಕೋಟಿ ಪಡೆದು ನಡೆಯಿತು ಮಹಾ ಮೋಸ !!

Politics news fir registered for bjp ticket fraud case at vijayanagara latest news

BJP Ticket Fraud: ಹಿಂದು ಕಾರ್ಯಕರ್ತೆ ಕುಂದಾಪುರದ ಚೈತ್ರಾ ವಂಚನೆ ಪ್ರಕರಣದ ಬೆನ್ನಲ್ಲೇ ಈಗ ಬಿಜೆಪಿ ಟಿಕೆಟ್‌ ವಂಚನೆಯ (BJP Ticket Fraud) ಮತ್ತೊಂದು ಪ್ರಕರಣ ಮುನ್ನಲೆಗೆ ಬಂದಿದ್ದು, ಎಫ್‌ಐಆರ್‌ ದಾಖಲು (FIR registered) ಮಾಡಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ (Assembly election) ಹಗರಿಬೊಮ್ಮನಹಳ್ಳಿ ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ (Hagaribommanahalli SC reserved assembly constituency) ಟಿಕೆಟ್ ಕೊಡಿಸುವ ನೆಪದಲ್ಲಿ ಶಿವಮೂರ್ತಿ ಅವರಿಗೆ ನಾಲ್ವರ ತಂಡವು ವಂಚನೆ ಮಾಡಿರುವುದು ಮುನ್ನಲೆಗೆ ಬಂದಿದೆ.ಈ ಪ್ರಕರಣ ಸಂಬಂಧ ಅಕ್ಟೋಬರ್‌ 19ರಂದು ಶಿವಮೂರ್ತಿ ಅವರು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ(bjp ticket fraud case in kottur) ದೂರು ದಾಖಲಿಸಿದ್ದಾರೆ. ಅವರು ನೀಡಿದ ದೂರಿನನ್ವಯ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿಕೊಂಡಿದ್ದಾರೆ.

 

BJP Ticket Fraud

ಕೊಟ್ಟೂರಿನ ಕಟಾರಿ ಆಪ್ಟಿಕಲ್ ಮಾಲೀಕ ಮೋಹನ್ ಕಟಾರಿಯಾ, ಬಿಜೆಪಿ ಮಾಜಿ ಮುಖಂಡ, ಹಾಲಿ ಜನಾರ್ದನ ರೆಡ್ಡಿ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷ ರೇವಣಸಿದ್ದಪ್ಪ ಹಾಗೂ ಪುತ್ತೂರು ಮೂಲದ ಶೇಖರ್ ಪುರುಷೋತ್ತಮ್ ನಿರ್ಲಕಟ್ಟೆ (ರಾಜಶೇಖರ್) ಎಂಬುವವರಿಂದ ವಂಚನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ ಪ್ರಕರಣವಾಗಿದ್ದು, ಕೊಟ್ಟೂರು ನಿವಾಸಿ, ನಿವೃತ್ತ ಎಂಜಿನಿಯರ್‌ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪಕ್ಷದ ಚಟುವಟಿಕೆಗಾಗಿ 65 ಲಕ್ಷ ರೂಪಾಯಿಯನ್ನು ಖರ್ಚು ಮಾಡಿಸಲಾಗಿದ್ದು, ಇದರ ಜೊತೆಗೆ ಟಿಕೆಟ್‌ ಕೊಡಿಸುವುದಾಗಿ ವಂಚಕರು ತಮ್ಮ ಬಳಿ ಒಟ್ಟು 1.90 ಕೋಟಿ ರೂಪಾಯಿಯನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ಒಟ್ಟು 2.55 ಕೋಟಿ ರೂ. ವಂಚನೆ ಮಾಡಲಾಗಿದೆ ಎಂದು ಶಿವಮೂರ್ತಿ ಆರೋಪ ಮಾಡಿದ್ದಾರೆ. ಇದರ ಜೊತೆಗೆ ಹಣವನ್ನು ಮರಳಿ ಪಡೆಯುವುದಕ್ಕೆ ಧಮಕಿ ಹಾಕುತ್ತಿದ್ದಾರೆ ಎಂದು ಶಿವಮೂರ್ತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Congress MLA: ಬ್ಯೂಟಿಫುಲ್ ನರ್ಸ್ಗಳು ನಂಗೆ ‘ತಾತಾ’ ಅಂದ್ರೆ ಒಂಥರಾ ಆಗುತ್ತೆ !! ಕಾಂಗ್ರೆಸ್ ಶಾಸಕನಿಂದ ಅಚ್ಚರಿ ಹೇಳಿಕೆ

Leave A Reply

Your email address will not be published.