Dakshina Kannada: ಕಾರ್ಕಳ ನಗರ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಶೃತಿನ್ ಶೆಟ್ಟಿ ಶವ ಪತ್ತೆ!!!

Mangalore news Karakala missing head constable dead body found inside the well

Share the Article

ಉಡುಪಿ: ಪೊಲೀಸ್ ಹೆಡ್‌ಕಾನ್‌ಸ್ಟೇಬಲ್‌‌ವೊಬ್ಬರು ನಾಪತ್ತೆಯಾಗಿರುವ ಕುರಿತು ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾರ್ಕಳ ನಗರ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಶೃತಿನ್ ಶೆಟ್ಟಿ (35) ನಾಪತ್ತೆಯಾದವರು. ಇದೀಗ ಇವರ ಶವ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್ ಶೆಟ್ಟಿ ಗುರುವಾರ ರಾತ್ರಿ 7.30ಕ್ಕೆ ಹೆಂಡತಿಗೆ ಫೋನ್ ಮಾಡಿ ನಾನು ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ ಹೇಳಿದ್ದಾರೆ. ನಂತರ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿಯಿಡೀ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಗಾಬರಿಯಾಗಿರುವ ಪತ್ನಿ ಪೂಜಾ ಶೆಟ್ಟಿಯವರು ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.

2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಆಗಿ ಬಂದಿದ್ದರು. ಅ.17ರಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಅ.18ಕ್ಕೆ ವಾರದ ರಜೆಯಿತ್ತು ಅ.19ರಂದು ಸಿ.ಎಲ್ ರಜೆ ಹಾಕಿದ್ದರು. ಇದೀಗ ಶವ ಬಾವಿಯಲ್ಲಿ ಪತ್ತೆ ಆಗಿದ್ದು, ಆತ್ಮಹತ್ಯೆಯೋ, ಸಾವಿಗೆ ಬೇರೆ ಕಾರಣ ಇದೆಯೋ ಎಂದು ಪೊಲೀಸರ ತನಿಖೆ ಮೂಲಕ ತಿಳಿಯಬೇಕಿದೆ.

 

ಇದನ್ನು ಓದಿ: IOCL Apprentice:1720 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ! ಈ ಕೂಡಲೇ ಅರ್ಜಿ ಸಲ್ಲಿಸಿ!!!

Leave A Reply