PM Kisan Registration: ರೈತರಿಗೆ ಮುಖ್ಯ ಮಾಹಿತಿ- ಈ ರೀತಿಯಾಗಿ ಆದಷ್ಟು ಬೇಗ PM ಕಿಸಾನ್ ಹಣಕ್ಕೆ ಅರ್ಜಿ ಸಲ್ಲಿಸಿ
Agriculture news pm Kisan registration apply pm Kisan Samman Nidhi Yojana in online
PM Kisan Registration: ಕೇಂದ್ರ ಸರಕಾರ ಜಾರಿಗೆ ತಂದ ಪಿಎಂ ಕಿಸಾನ್ (PM Kisan) ಯೋಜನೆಯಡಿ ರೈತರಿಗೆ ಪ್ರೋತ್ಸಾಹ ಧನವಾಗಿ ಪ್ರತಿ ವರ್ಷ ಮೂರು ಕಂತುಗಳಲ್ಲಿ 6,000 ರೂ. ನಂತೆ ಈ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಕಳುಹಿಸಲಾಗುತ್ತದೆ. ಮುಖ್ಯವಾಗಿ ಎಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ.
ಈಗಾಗಲೇ 14ನೇ ಕಂತನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ವರ್ಷದ ಜುಲೈನಲ್ಲಿ ಬಿಡುಗಡೆ ಮಾಡಿದ್ದರು. ಸದ್ಯ ಫಲಾನುಭವಿ ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 15ನೇ ಕಂತಿಗಾಗಿ ಕಾಯುತ್ತಿದ್ದಾರೆ. ವರದಿಗಳ ಪ್ರಕಾರ, ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ 15ನೇ ಕಂತು ನವೆಂಬರ್ ಕೊನೆಯ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಲಾಭ ಪಡೆಯಲು ಅರ್ಜಿ (PM Kisan Registration)ಹೀಗೆ ಸಲ್ಲಿಸಿ:
ಹಂತ 1: ಅಧಿಕೃತ ವೆಬ್‌ಸೈಟ್ www.pmkisan.gov.inಗೆ ಭೇಟಿ ನೀಡಿ.
ಹಂತ 2: ಹೋಮ್‌ಪೇಜ್‌ನಲ್ಲಿ Farmer’s Corner ಗೆ ಹೋಗಿ ‘New Farmer Registration‘ ಮೇಲೆ ಕ್ಲಿಕ್ ಮಾಡಿ.
ಹಂತ 3: ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ, ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ .
ಹಂತ 4: click here to continue ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಹಂತ 5: YES ಮೇಲೆ ಕ್ಲಿಕ್ ಮಾಡಿ. ನಂತರ ಪಿಎಂ ಕಿಸಾನ್ ರಿಜಿಸ್ಟ್ರೇಷನ್ ಫಾರ್ಮ್ 2023 ಅನ್ನು ಭರ್ತಿ ಮಾಡಿ. ಹಂತ 6: ಈ ಅರ್ಜಿಯನ್ನು ಭರ್ತಿ ಮಾಡಿದ ಬಳಿಕ ಅದನ್ನು ಸೇವ್ ಮಾಡಿ, ಪ್ರಿಂಟ್ ಔಟ್ ಅನ್ನು ತೆಗೆಯಿರಿ.
ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್ ನಂಬರ್ 155261 ಮತ್ತು 011-24300606 ಅನ್ನು ಸಂಪರ್ಕಿಸಿ.
ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನ್ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದು ಹೇಗೆ ಎನ್ನುವುದರ ಮಾಹಿತಿ ಇಲ್ಲಿದೆ.
ಮೊದಲು ಅಧಿಕೃತ ವೆಬ್‌ಸೈಟ್ pmkisan.gov.in ಭೇಟಿ ನೀಡಿ
ಆಗ ಓಪನ್ ಆಗುವ ಪೇಜ್‌ನ ಬಲ ಬದಿಯಲ್ಲಿರುವ ‘Know Your Status’ ಆಯ್ಕೆ ಮೇಲೆ ಕ್ಲಿಕ್ ಮಾಡಿ. ಅಲ್ಲಿ ರಿಜಿಸ್ಟ್ರೇಷನ್ ನಂಬರ್ ನಮೂದಿಸಿ, ಕ್ಯಾಪ್ಚ ಕೋಡ್ ಭರ್ತಿ ಮಾಡಿ ‘Get Data’ ಆಯ್ಕೆಯನ್ನು ಸೆಲೆಕ್ಟ್ ಮಾಡಿ. ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್ ಮೇಲೆ ಮೂಡುತ್ತದೆ.
ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ:
ಅಧಿಕೃತ ವೆಬ್‌ಸೈಟ್ www.pmkisan.gov.inಗೆ ಭೇಟಿ ನೀಡಿ, ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ಕೆ ಮಾಡಿ. ನಂತರ Get report’ ಆಯ್ಕೆಯನ್ನು ಸೆಲೆಕ್ಟ್ ಮಾಡಿ.
ಪಿಎಂ-ಕಿಸಾನ್ ಸಮ್ಮಾನ್ ಯೋಜನೆ ಆರಂಭವಾಗಿ 4 ವರ್ಷಗಳಲ್ಲಿ ಕೇಂದ್ರ ಇಲ್ಲಿಯವರೆಗೆ ಸುಮಾರು 2.50 ಲಕ್ಷ ಕೋಟಿ ರೂ.ಗಳನ್ನು ಫಲಾನುಭವಿಗಳ ಖಾತೆಗಳಿಗೆ ವರ್ಗಾಯಿಸಿದೆ.
ಇದನ್ನೂ ಓದಿ: ರೈಲ್ವೆ ಪ್ರಯಾಣಿಕರು ಬೆಲೆ ಬಾಳೋ ವಸ್ತುಗಳನ್ನು ಬಿಟ್ಟು ಹೋದ್ರೆ ಇಲಾಖೆ ಏನು ಮಾಡುತ್ತೆ ಗೊತ್ತಾ?!