RDWSD Karnataka Recruitment 2023: ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯ ಉದ್ಯೋಗಾವಕಾಶ! 155 ಹುದ್ದೆಗೆ ಅರ್ಜಿ ಆಹ್ವಾನ!

RDWSD Recruitment 2023: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಯಲಿದೆ. ಒಟ್ಟು 31 ಜಿಲ್ಲೆಗಳಲ್ಲಿ ನೇಮಕಾತಿ ನಡೆಯಲಿದೆ.

ಹುದ್ದೆಗಳ ವಿವರ
ಆರ್ಥಿಕ ಸಮಾಲೋಚಕರು-31, ಸಾಮಾಜಿಕ ಅಭಿವೃದ್ಧಿ ಸಮಾಲೋಚಕರು-31, ಪರಿಸರ ಸಮಾಲೋಚಕರು-31, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಸಮಾಲೋಚಕರು-31, ಪ್ರೊಕ್ಯೂರ್‌ಮೆಂಟ್‌ ಸಮಾಲೋಚಕರು-31 ಹುದ್ದೆಗಳಿವೆ. ಒಟ್ಟು 155 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 19-10-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-Nov-2023

ವಿದ್ಯಾರ್ಹತೆ: ಅಂಗೀಕೃತ ಶೈಕ್ಷಣಿಕ ಮಂಡಳಿ ಮತ್ತು ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ/ ಎಂಬಿಎ/ ಎಂ.ಕಾಂ/ ಎಂಎಸ್‌ಡಬ್ಲ್ಯು/ ಎಂಎ/ ಬಿಇ/ ಬಿ.ಟೆಕ್‌/ ಎಂ.ಟೆಕ್‌/ ಬಿಸಿಎ/ ಬಿಇ (ಸಿಎಸ್‌/ ಐಟಿ) ಪಡೆದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಗರಿಷ್ಠ ವಯೋಮಿತಿ 45 ವರ್ಷ.
ಆಯ್ಕೆ ಪ್ರಕ್ರಿಯೆ: ಶಾರ್ಟ್‌ಲಿಸ್ಟ್‌, ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆ ಮೂಲಕ ನೇಮಕಾತಿ ನಡೆಯಲಿದೆ.

ವೇತನ: ಪ್ರತಿ ತಿಂಗಳು 50,000 ರೂ.-75,000 ರೂ.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಅಪ್ಲಿಕೇಶನ್‌ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

 

Leave A Reply

Your email address will not be published.