Karnataka Weather: ಕರ್ನಾಟಕದಾದ್ಯಂತ ತಾಪಮಾನ ಏರಿಕೆ ಮುನ್ಸೂಚನೆ!
Karnataka Weather update Temperature rise forecast across Karnataka latest news
Karnataka Weather: ಕರ್ನಾಟಕದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಷ್ಟು ಹೆಚ್ಚಳವಾಗುವ ಕುರಿತು ವರದಿಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು ಶಿವಮೊಗ್ಗ ಜಿಲ್ಲೆಗಳಲ್ಲಿ ಅ.29,30 ರಂದು ಮಳೆಯಾಗಲಿದೆ.
ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಇರುವುದಿಲ್ಲ. ಈ ಕಾರಣದಿಂದ ರಾಜ್ಯಾದ್ಯಂತ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಾಗಗಿ ಮುಂದಿನ ನಾಲ್ಕು ದಿನ ಅಂದರೆ ಅ.25 ರಿಂದ 28ರವರೆಗೂ ಒಣ ಹವೆ ಇರಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದ್ದಾರೆ.
ಎಚ್ಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇದನ್ನೂ ಓದಿ: Big Boss Varthur Santhosh: ವರ್ತೂರು ಸಂತೋಷ್ ಬಂಧನ ಪ್ರಕರಣ; FSL ವರದಿಯಲ್ಲಿದೆ ಕುತೂಹಲಕಾರಿ ಸಂಗತಿ, ಮುಂದೇನು?