Karnataka Weather: ಕರ್ನಾಟಕದಾದ್ಯಂತ ತಾಪಮಾನ ಏರಿಕೆ ಮುನ್ಸೂಚನೆ!

Karnataka Weather update Temperature rise forecast across Karnataka latest news

Karnataka Weather: ಕರ್ನಾಟಕದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಷ್ಟು ಹೆಚ್ಚಳವಾಗುವ ಕುರಿತು ವರದಿಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು ಶಿವಮೊಗ್ಗ ಜಿಲ್ಲೆಗಳಲ್ಲಿ ಅ.29,30 ರಂದು ಮಳೆಯಾಗಲಿದೆ.

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಇರುವುದಿಲ್ಲ. ಈ ಕಾರಣದಿಂದ ರಾಜ್ಯಾದ್ಯಂತ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಾಗಗಿ ಮುಂದಿನ ನಾಲ್ಕು ದಿನ ಅಂದರೆ ಅ.25 ರಿಂದ 28ರವರೆಗೂ ಒಣ ಹವೆ ಇರಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದ್ದಾರೆ.

ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ: Big Boss Varthur Santhosh: ವರ್ತೂರು ಸಂತೋಷ್‌ ಬಂಧನ ಪ್ರಕರಣ; FSL ವರದಿಯಲ್ಲಿದೆ ಕುತೂಹಲಕಾರಿ ಸಂಗತಿ, ಮುಂದೇನು?

Leave A Reply

Your email address will not be published.