Kukke Subramanya Temple: ಚಂದ್ರಗಹಣ ಎಫೆಕ್ಟ್- ಶನಿವಾರ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನದಲ್ಲಿ ಆಗಲಿದೆ ಈ ಬದಲಾವಣೆ

Dakshina Kannada news moon eclipse Kukke Subrahmanya Temple timings change

Kukke Subramanya Temple: ಅಕ್ಟೋಬರ್​ 28ರ ಶನಿವಾರ ಚಂದ್ರಗ್ರಹಣ ಇರುವುದರಿಂದ, ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ(Kukke Subramanya Temple) ದೇವರ ದರ್ಶನದ ಸಮಯದಲ್ಲಿ ಬದಲಾವಣೆಯಾಗಲಿದೆ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಅಕ್ಟೋಬರ್​ 28ರ ಶನಿವಾರದಂದು ಭಕ್ತಾದಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆಯಾಗಲಿದೆ ಎಂದು ತಿಳಿಸಲಾಗಿದೆ.

ಶ್ರೀ ದೇವರ ದರ್ಶನ ಹಾಗೂ ಸೇವಾ ಸಮಯವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ. ಅಕ್ಟೋಬರ್​ 28ರ ರಾತ್ರಿ ಮಹಾಪೂಜೆಯು ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯವಾಗಲಿದೆ. ಶನಿವಾರದಂದು ಸಾಯಂಕಾಲ ಆಶ್ಲೇಷ ಬಲಿ ಸೇವೆಯು ಇರುವುದಿಲ್ಲ. ಸಾಯಂಕಾಲ ಗಂಟೆ 6.30ರ ನಂತರ ಶ್ರೀ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮಾತ್ರವಲ್ಲದೆ ರಾತ್ರಿ ಪ್ರಸಾದ ಭೋಜನ ವ್ಯವಸ್ಥೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಚಂದ್ರಗ್ರಹಣದ ಸಮಯ :
ಗ್ರಹಣ ಸ್ಪರ್ಶ : ರಾತ್ರಿ ಗಂಟೆ 1.04
ಗ್ರಹಣ ಮೋಕ್ಷ : ರಾತ್ರಿ ಗಂಟೆ 2.24

ಪಂಚಾಂಗದ ಪ್ರಕಾರ ಖಂಡಗ್ರಾಸ ಚಂದ್ರಗ್ರಹಣ: ಶೋಭಕೃತ್‌ ಸಂವತ್ಸರ, ಅಶ್ವಿನಿ ನಕ್ಷತ್ರ, ಶುಕ್ಲ ಪಕ್ಷ, ಹುಣ್ಣಿಮೆ ತಿಥಿ, ಶನಿವಾರ ದಿನಾಂಕ 28-10-2023ರ ಅಶ್ವಿನಿ ನಕ್ಷತ್ರ, ಮೇಷ ರಾಶಿಯಲ್ಲಿ ಚಂದ್ರನಿಗೆ ರಾಹು ಗ್ರಹಣ ಉಂಟಾಗುತ್ತಿದೆ. ಈ ನಕ್ಷತ್ರ ರಾಶಿಯವರಿಗೂ ಹಾಗೂ ವೃಷಭ, ಕನ್ಯಾ, ವೃಶ್ಚಿಕ ರಾಶಿಯವರಿಗೂ ಅರಿಷ್ಟವಿದೆ. ಈ ದಿನ ಸಾಯಂಕಾಲ 4 ಗಂಟೆ ಒಳಗೆ ಆಹಾರ ಸೇವಿಸಬಹುದು. ಬಾಲವೃದ್ಧಾತುರರು ರಾತ್ರಿ 7 ಗಂಟೆ ಒಳಗೆ ಭೋಜನ ಮಾಡಬಹುದು. ಗ್ರಹಣ ಮೋಕ್ಷಾ ನಂತರ ಸ್ನಾನ ಮಾಡಿ ಮರುದಿನ ಬೆಳಿಗ್ಗೆ ಅಡುಗೆ ಮಾಡಿ ಆಹಾರ ಸೇವಿಸುವುದು. ಮುಖ್ಯವಾಗಿ ಈ ದಿನದ ಪೂರ್ಣಿಮಾ ಶ್ರಾದ್ಧಕ್ಕೆ ಅಡ್ಡಿಯಿಲ್ಲ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಭೀಕರ ಅಪಘಾತ: 8 ಮಹಿಳೆಯರು ಸೇರಿ 12 ಮಂದಿ ದುರ್ಮರಣ, ಟಾಟಾ ಸುಮೋ ನುಜ್ಜುಗುಜ್ಜು !

Leave A Reply

Your email address will not be published.